![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Jul 27, 2023, 10:17 PM IST
ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ನೋಂದಣಿಗಾಗಿ ಗ್ರಾಮ ಒನ್ ಕೇಂದ್ರದ ಲಾಗಿನ್ ಐಡಿ ದರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.
ಬೆಳಗಾವಿ ನಗರದ ಚವಾಟಗಲ್ಲಿಯಲ್ಲಿ ಜನತಾ ಆನ್ ಲೈನ್ ಸೆಂಟರ್ ನಡೆಸುತ್ತಿರುವ ಅದೃಶ್ ಆರ್.ಟಿ. ಹಾಗೂ
ಮುತಗಾ ಗ್ರಾಮ ಒನ್ ಕೇಂದ್ರದ ಕಿರಣ ಚೌಗಲಾ ಎಂಬುವರ ವಿರುದ್ಧ ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಚವಾಟಗಲ್ಲಿಯ ಜನತಾ ಆನ್ ಲೈನ್ ಕೇಂದ್ರದಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳ ನೋಂದಣಿಗೆ ಹಣ ಪಡೆಯಲಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್.ನಾಗರಾಜ್, ಬೆಳಗಾವಿ ತಹಶೀಲ್ದಾರ್ ಸಿದ್ದರಾಯ ಬೋಸಗಿ ಹಾಗೂ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭಜಂತ್ರಿ ಅವರು ಜನತಾ ಆನ್ ಲೈನ್ ಕೇಂದ್ರದ ಮೇಲೆ ದಾಳಿ ನಡೆಸಿ ಅಕ್ರಮವನ್ನು ಪತ್ತೆ ಮಾಡಿ ಈ ಕೇಂದ್ರಕ್ಕೆ ಬೀಗ ಜಡಿದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸಿರುವ ಮುತಗಾ ಗ್ರಾಮ ಒನ್ ಕೇಂದ್ರದ ಪರವಾನಿಗೆಯನ್ನು ಕೂಡ ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.