Belagavi: ನ 22 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿಯಿಂದ ಧರಣಿ
Team Udayavani, Nov 20, 2024, 4:06 PM IST
ಬೆಳಗಾವಿ: ಬಿಜೆಪಿ ವತಿಯಿಂದ ವಕ್ಫ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಇದೇ ನವೆಂಬರ್ 22 ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ಬಿಜೆಪಿ ಮುಖಂಡರಾದ ಎಂ.ಬಿ.ಜಿರಲಿ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹೋರಾಟದ ವೇಳೆ ಅಹವಾಲು ಸ್ವೀಕಾರ ಮಾಡಲಾಗುವುದು.ಶೋಷಣೆಗೆ ಒಳಗಾದ ಸಹಸ್ರಾರು ಸಂಖ್ಯೆಯ ಸಾರ್ವಜನಿಕರು, ರೈತರು,ಮಠಮಂದಿರಗಳು, ಶಾಲೆಗಳು ಹಾಗೂ ಸಾರ್ವಜನಿಕ ಆಸ್ತಿಗಳ ಕುರಿತು ಬೆಳಿಗ್ಗೆಯಿಂದ ಸಂಜೆ ತನಕ ಅಹವಾಲು ಸ್ವೀಕರಿಸುತ್ತೇವೆ. ಸಮಸ್ಯೆಯ ಗಂಭೀರತೆಯನ್ನು ಪರಾಮರ್ಶೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಜನರ ಅಹವಾಲುಗಳನ್ನು ಆಲಿಸಲು ಬಿಜೆಪಿ ರಾಜ್ಯಾಧ್ಯಕ್ಷರು ಈಗಾಗಲೇ ಮೂರು ತಂಡಗಳನ್ನು ಪ್ರಕಟಿಸಿದ್ದಾರೆ. ಈ ಮೂರು ತಂಡಗಳು ಡಿಸೆಂಬರ್ ಮೊದಲ ವಾರದಿಂದ ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ. ರೈತರು, ಮಠಮಾನ್ಯಗಳು ಮತ್ತು ಸಾರ್ವಜನಿಕರ ಸಮಸ್ಯೆಯನ್ನು ಆಲಿಸಲಿದೆ. ಅವರ ಸಮಸ್ಯೆಯನ್ನು ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ ಹಾಗೂ ನೈಜ ವರದಿಯನ್ನು ಸದನದಲ್ಲಿಚರ್ಚಿಸುತ್ತೇವೆ ಎಂದು ಹೇಳಿದರು.
ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.