Belgavi; ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!
ಪ್ರಯಾಣಿಕರ ಪರದಾಟ...ಬೇಜವಾಬ್ದಾರಿಗೆ ಹಿಡಿಶಾಪ... ಮಾಜಿ ಸಿಎಂ ಬೊಮ್ಮಾಯಿ ಕೂಡ ಆಗಮಿಸಿದ್ದರು...!
Team Udayavani, Apr 21, 2024, 10:26 PM IST
ಬೆಳಗಾವಿ: ಬೆಂಗಳೂರಿನಿಂದ ಬೆಳಗಾವಿಗೆ ಭಾನುವಾರ ಸಂಜೆ ಬಂದ ಇಂಡಿಗೋ ವಿಮಾನ ಸಿಬ್ಬಂದಿ ಸುಮಾರು 22 ಹೆಚ್ಚು ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದಿದ್ದು ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ವಿಮಾನದಲ್ಲಿ ಆಗಮಿಸಿದ್ದು, ಅವರ ಬ್ಯಾಗ್ ಕೂಡ ವಿಮಾನದಲ್ಲಿ ಇರಲಿಲ್ಲ ಎನ್ನಲಾಗಿದೆ.
ಬೆಳಗಾವಿಗೆ ಬಂದು ಇಳಿಯುವವರೆಗೆ ಬ್ಯಾಗ್ ತಂದಿಲ್ಲ ಎಂಬುದರ ಕುರಿತು ಯಾರಿಗೂ ಮಾಹಿತಿ ನೀಡಿರಲಿಲ್ಲ.
ಭಾನುವಾರ ಸಂಜೆ 5.55ಕ್ಕೆ ಬೆಂಗಳೂರಿನಿಂದ ಹೊರಟ ವಿಮಾನದಲ್ಲಿ ಮಲೇಷಿಯನ್ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರಿದ್ದರು. ವಿಮಾನ ರಾತ್ರಿ 7.30 ಗಂಟೆಗೆ ಬೆಳಗಾವಿಗೆ ಬಂದಿಳಿಯುತ್ತಿದ್ದಂತೆ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿತ್ತು.ನಂತರ ಪರಿಶೀಲನೆ ನಡೆಸಿದಾಗ ಸುಮಾರು 22 ಕ್ಕೂ ಹೆಚ್ಚು ಪ್ರಯಾಣಿಕರ ಬ್ಯಾಗ್ ಗಳು ಬಂದಿರಲಿಲ್ಲ.
ಈ ಕುರಿತು ಇಂಡಿಗೋ ವಿಮಾನ ಸಿಬ್ಬಂದಿಯನ್ನು ಪ್ರಯಾಣಿಕರು ವಿಚಾರಿಸಿದಾಗ ಮಲೇಷಿಯನ್ ವಿದ್ಯಾರ್ಥಿಗಳ ಬ್ಯಾಗ್ ಗಳು ಬಹಳ ದೊಡ್ಡದಿದ್ದವು. ಹಾಗಾಗಿ ಬೇರೆ ಪ್ರಯಾಣಿಕರ ಬ್ಯಾಗ್ ಗಳನ್ನು ತರಲು ಸಾಧ್ಯವಾಗಿಲ್ಲ. ನಿಮ್ಮ ಬ್ಯಾಗ್ ಗಳನ್ನು ನಾಳೆ ತರಿಸಿಕೊಡುತ್ತೇವೆ ಎಂದು ಉಡಾಫೆ ಉತ್ತರ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ವಿಮಾನ ಸಿಬ್ಬಂದಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡು, ಪ್ರತಿಭಟನೆ ನಡೆಸಿದ್ದಾರೆ.
ಮಲೇಷಿಯನ್ ವಿದ್ಯಾರ್ಥಿಗಳ ಬ್ಯಾಗ್ ದೊಡ್ಡದಿದ್ದರೆ ಅವರ ಬ್ಯಾಗ್ ಬಿಡಬಹುದಿತ್ತು. ಅಥವಾ ನಮಗೆ ಮೊದಲೇ ಮಾಹಿತಿ ನೀಡಬೇಕಿತ್ತು. ನಮ್ಮಲ್ಲಿ ಬೇರೆ ಊರಿನ ಪ್ರಯಾಣಿಕರಿದ್ದಾರೆ. ಹಲವರ ಔಷಧಿಗಳು ಸೇರಿದಂತೆ ಅಗತ್ಯ ವಸ್ತುಗಳು ಬ್ಯಾಗ್ ನಲ್ಲಿವೆ. ಅಂತವರು ಈಗ ಏನು ಮಾಡಬೇಕು ಎಂದು ಪ್ರಯಾಣಿಕರು ಪ್ರಶ್ನಿಸಿದರು.
ತೂಕ ಸೇರಿದಂತೆ ಎಲ್ಲ ಪರಿಶೀಲನೆಯ ನಂತರವೇ ಲಗೇಜ್ ಪಡೆದು, ವಿಮಾನಕ್ಕೆ ಹಾಕಲಾಗುತ್ತದೆ. ಆದರೂ ಈ ರೀತಿಯ ಅಚಾತುರ್ಯ ಹೇಗಾಯಿತು. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಪ್ರಯಾಣಿಕರು ವಿಮಾನ ಸಿಬ್ಬಂದಿಗಳ ಬೇಜವಾಬ್ದಾರಿಗೆ ಹಿಡಿಶಾಪ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು
Success: ಯಶಸ್ವಿ ಜೀವನಕ್ಕೆ ಸೂತ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.