ಬೆಟಗೇರಿ: ನಾಳೆಯಿಂದ ಓಕುಳಿ
Team Udayavani, Jun 6, 2019, 1:44 PM IST
ಬೆಟಗೇರಿ: ಗ್ರಾಮದಲ್ಲಿ ಹನುಮಂತ ದೇವರ ಓಕುಳಿ ಜೂ. 7ರಿಂದ 11 ರವರೆಗೆ ನಡೆಯಲಿದೆ.
ಇಷ್ಟಾರ್ಥ ಈಡೇರಿಸುವ ಜಾಗೃತ ಹನುಮಂತ ದೇವರ ಜಾತ್ರೆಗೆ ಗ್ರಾಮದ ಎಲ್ಲ ಸಮುದಾಯದ ಜನರು ವಂತಿಗೆ ಹಣ ಸಂಗ್ರಹಿಸಿ ಅದ್ಧೂರಿಯಾಗಿ ಓಕುಳಿ ಹಬ್ಬ ಆಚರಣೆ ಮಾಡುವ ಪ್ರತೀತಿ ಇದೆ. ಹೀಗಾಗಿ ಊರಿನಲ್ಲಿ ಜರುಗುವ ಅತ್ಯಂತ ದೊಡ್ಡದಾದ ಧಾರ್ಮಿಕ ಕಾರ್ಯಕ್ರಮ ಇದಾಗಿದೆ.
ಕಡೆ ಓಕುಳಿ ದಿನ ಕುದುರೆ, ನವಿಲು, ಗರುಡ, ಕರಡಿ ಸೇರಿದಂತೆ ಹಲವು ಪ್ರಾಣಿ, ಪಕ್ಷಿಗಳ ಸೋಗಿನ ಐದಾರು ಗುಂಪುಗಳ ಯುವಕರು ಕಾಲಿಗೆ ಮರಗಾಲು ಕಟ್ಟಿಕೊಂಡು ವಾದ್ಯಮೇಳಗಳ ತಾಳಕ್ಕೆ ತಕ್ಕಂತೆ ದಣಿವೇ ಇಲ್ಲದಂತೆ ಕುಣಿಯುವ ಕುಣಿತ ನೋಡುಗರ ಕಣ್ಮನ ತಣಿಸುತ್ತದೆ. ಪ್ರತಿ ಓಣಿಯ ಎಲ್ಲ ಮನೆಯವರು ಸಾಮೂಹಿಕವಾಗಿ ಮಾರುತಿ ದೇವರ ದೇವಾಲಯಕ್ಕೆ ತೆರಳಿ ನೈವೇದ್ಯ, ಪೂಜೆ, ಪುನಸ್ಕಾರ, ಹರಕೆ ಸಮರ್ಪಿಸುತ್ತಾರೆ. ಓಕುಳಿ ಪ್ರಯುಕ್ತ ರಂಗಭೂಮಿ ಕಲೆಯ ವಿವಿಧ ನಾಟಕ ಸೇರಿದಂತೆ ಮನರಂಜನೆಯ ಹಲವಾರು ಕಾರ್ಯಕ್ರಮ ಗ್ರಾಮದಲ್ಲಿ ಆಯೋಜಿಸಲಾಗಿರುತ್ತದೆ.
ಜೂ.11 ರಂದು ಕೊನೆಯ ದಿನ ಜಂಗಿ ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯ, ಮಹಾರಾಷ್ಟ್ರ ಸೇರಿದಂತೆ ಹಲವಡೆಯಿಂದ ಕುಸ್ತಿ ಪಟುಗಳು ಆಗಮಿಸಿ ತಮ್ಮ ಕಸರತ್ತು ತೊರಿಸುವ ಪ್ರದರ್ಶನ ನಡೆಯುತ್ತದೆ.
ಜೂ. 8ರಂದು ಬೆಳಗ್ಗೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ ನಡೆಯಲಿದೆ.
9ರಂದು ಬೆಳಗ್ಗೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಾಯಂಕಾಲ 5ಗಂಟೆಗೆ ನಡು ಓಕುಳಿ. 10 ರಂದು 8ಗಂಟೆಯಿಂದ ಪುರಜನರಿಂದ ಪೂಜೆ-ಪುನಸ್ಕಾರ, ನೈವೇದ್ಯ, ಹರಕೆ ಸಮರ್ಪಣೆ ನಡೆದು, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರ ಪಲ್ಲಕ್ಕಿ ಪ್ರದಕ್ಷಿಣೆ ಬಳಿಕ ಕಡೆ ಓಕಳಿ ನಡೆಯಲಿದೆ. ಜೂ. 11ರಂದು ಬೆಳಗ್ಗೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಾಯಂಕಾಲ 4 ಗಂಟೆಗೆ ಜಂಗಿ ಕುಸ್ತಿಗಳು ನಡೆದ ಬಳಿಕ ಸಂಜೆ ಮಾರುತಿ ದೇವರ ದೇವಾಲಯಕ್ಕೆ ಪಲ್ಲಕ್ಕಿ ಪ್ರದಕ್ಷಿಣೆ ನಡೆಯಲಿದೆ ಎಂದು ಮಾರುತಿ ದೇವರ ಓಕುಳಿ ಉತ್ಸವ ಆಚರಣಾ ಸಮಿತಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.