ಬಿಮಾ ಯೋಜನೆ ಅನುಷ್ಠಾನ
Team Udayavani, Jun 30, 2020, 3:10 PM IST
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರು ಹಂಗಾಮಿಗೆ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಚಿಕ್ಕೋಡಿ ಉಪ ಕೃಷಿ ನಿರ್ದೇಶಕ ಎಲ್.ಐ. ರೂಡಗಿ ತಿಳಿಸಿದ್ದಾರೆ.
ತಾಲೂಕಿನ ಪ್ರಮುಖ ಬೆಳೆಗಳನ್ನು ಗ್ರಾಪಂ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅಧಿ ಸೂಚಿಸಲಾಗಿದೆ. ಅಧಿಸೂಚಿತ ಬೆಳೆಗೆ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ ಮತ್ತು ಬೆಳೆ ಮುಳುಗಡೆ ಹಾಗೂ ಕೀಟ ರೋಗದಿಂದ ವಿಫಲವಾದಲ್ಲಿ ವಿಮಾ ರಕ್ಷಣೆ ಒದಗಿಸಲಾಗುವುದು. ಮಳೆ ಅಭಾವ ಅಥವಾ ಇತರ ಪ್ರತಿಕೂಲ ಹವಾಮಾನದಿಂದ ಅ ಧಿಸೂಚಿತ ಘಟಕದಲ್ಲಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲವಾದಲ್ಲಿ ಹಾಗೂ ಕಟಾವಿನ ನಂತರ ಜಮೀನಿನಲ್ಲಿ ಒಣಗಲು ಬಿಟ್ಟಾಗ ಎರಡು ವಾರದೊಳಗೆ ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮೆ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆನಷ್ಟ ಪರಿಹಾರ ಕೊಡುತ್ತದೆ. ಈ ಯೋಜನೆಯಲ್ಲಿ ಪಾಲ್ಗೊಂಡು ಅಧಿ ಸೂಚಿತ ಬೆಳೆಗಳಿಗೆ ವಿಮಾ ರಕ್ಷಣೆ ಒದಗಿಸಬೇಕು ಎಂದು ಕೋರಿದ್ದಾರೆ.
ಪ್ರಸಕ್ತ ಸಾಲಿನಿಂದ ಈ ಯೋಜನೆಯು ಐಚ್ಛಿಕವಾಗಿದ್ದು ಬೆಳೆ ಸಾಲ ಪಡೆದ ರೈತರು ಯೋಜನೆಯಿಂದ ಹೊರಗುಳಿಯಬಹುದು. ಸಂಬಂಧಿಸಿದ ಬ್ಯಾಂಕ್ ವ್ಯವಸ್ಥಾಪಕರಿಗೆ ಲಿಖೀತವಾಗಿ ನಿಗದಿತ ನಮೂನೆಯಲ್ಲಿ ಮುಚ್ಚಳಿಕೆ ಪತ್ರವನ್ನು 7 ದಿನ ಮುಂಚಿತವಾಗಿ ನೀಡಿದಲ್ಲಿ ಅಂತಹ ರೈತರನ್ನು ವಿಮೆ ಯೋಜನೆಯಿಂದ ಕೈ ಬಿಡಲಾಗುವುದು. ರೈತರು ತಮ್ಮ ವ್ಯಾಪ್ತಿಯ ಬ್ಯಾಂಕ್, ಸರ್ಕಾರಿ ಸಂಘ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮಾ ಕಂತು ಪಾವತಿಸಬಹುದು. ಮಾಹಿತಿಗಾಗಿ ಮೊ. 8105207118 ಸಂಪರ್ಕಿಸಬಹುದು. ಪ್ರಸಕ್ತ ಹಂಗಾಮಿನಲ್ಲಿ ರೈತರು ಈ ಬೆಳೆ ವಿಮೆಯಲ್ಲಿ ಪಾಲ್ಗೊಳ್ಳಲು ಹೆಸರು (ಮಳೆ ಆಶ್ರಿತ) ಬೆಳೆಗೆ ಜು.15 ಹಾಗೂ ಉಳಿದ ಎಲ್ಲಾ ಬೆಳೆಗಳಿಗೆ ಜು.31, 2020 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಉಪ ಕೃಷಿ ನಿರ್ದೇಶಕರು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.