BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ
Team Udayavani, Nov 19, 2024, 11:33 PM IST
ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟ ಘಟನೆ ಇಲ್ಲಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮಂಗಳವಾರ (ನ.19) ನಡೆದಿದ್ದು, ರೊಚ್ಚಿಗೆದ್ದ ಕುಟುಂಬಸ್ಥರು ಬಿಮ್ಸ್ ಎದುರು ದಿಢೀರ್ ಪ್ರತಿಭಟನೆ ನಡೆಸಿದರು.ಜಿಲ್ಲಾಧಿಕಾರಿ ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಕಲ್ಪನಾ ರಾಠೋಡ ಎಂಬ ಬಾಣಂತಿ ಮೃತಪಟ್ಟಿದ್ದರಿಂದ ಕುಟುಂಬಸ್ಥರು ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದರು. ಬಿಮ್ಸ್ ಆಸ್ಪತ್ರೆ ಮುಂದೆ ಮೃತ ಬಾಣಂತಿ ಮೃತದೇಹ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಸಾವನ್ನಪ್ಪಿದ್ದಾಳೆ. ಬಾಣಂತಿಗೆ ಎರಡೆರಡು ಬಾರಿ ಸಿಸೇರಿಯನ್ ಮಾಡಿದ್ದಾರೆ. ಆಪರೇಷನ್ ಸಂದರ್ಭದಲ್ಲಿ ಹಾಕುವ ವಸ್ತ್ರ ಧರಿಸಿಲ್ಲ, ತರಾತುರಿಯಲ್ಲಿ ಸಿಸೇರಿಯನ್ ಮಾಡಿದ್ದಾರೆ ಎಂದು ಆರೋಪಿಸಿದರು.
ಬಾಣಂತಿ ಆರೋಗ್ಯದಲ್ಲಿ ಏರುಪೇರಾದಾಗ ಡಿಸ್ಟಾರ್ಜ್ ಮಾಡುವಂತೆ ಕುಟುಂಬಸ್ಥರು ಮನವಿ ಮಾಡಿಕೊಂಡಿದ್ದರು. ಕುಟುಂಬಸ್ಥರು ಮನವಿ ಮಾಡಿದರೂ ಬಾಣಂತಿಯನ್ನು ಬೇರೆ ಆಸ್ಪತ್ರೆಗೆ ಕಳುಹಿಸದೇ ವೈದ್ಯರು ನಿರ್ಲಕ್ಷ್ಯ ವಹಿಸಿದ್ದಾರೆ. ನಿರ್ಲಕ್ಷ್ಯ ತೋರಿದ ವೈದ್ಯರನ್ನು ಕೂಡಲೇ ವಜಾ ಮಾಡುವಂತೆ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.
ಮೃತ ಮಹಿಳೆಯ ಕುಟುಂಬಸ್ಥರು ಆಸ್ಪತ್ರೆ ಮುಂಭಾಗದಲ್ಲಿ ನೂರಾರು ಜನ ಜಮಾವಣೆಯಾದ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ. ಅಹಿತಕರ ಘಟನೆ ನಡೆಯದಂತೆ ಬಿಮ್ಸ್ ಮುಂಭಾಗದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನ್ಯಾಯ ಸಿಗುವುವರೆಗೂ ಮೃತದೇಹ ತೆಗೆಯುವುದಿಲ್ಲ ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಸ್ಥಳಕ್ಕೆ ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಬರುವಂತೆ ಮೃತ ಬಾಣಂತಿಯ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹರಗಾಪುರ ಕೇಸ್ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.