ಜಾರ್ಜ್‌ ರಾಜೀನಾಮೆಗೆ ಬಿಜೆಪಿ ಹೋರಾಟ: ಶೆಟ್ಟರ್‌


Team Udayavani, Nov 13, 2017, 6:00 AM IST

Jagadish-Shettar.jpg

ಬೆಳಗಾವಿ: ಸುವರ್ಣ ಸೌಧದಲ್ಲಿ ಸೋಮವಾರದಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರವನ್ನು ತರಾಟೆಗೆ ತಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಸಿಬಿಐ ತನಿಖೆ ಹಿನ್ನೆಲೆಯಲ್ಲಿ ಸಚಿವ ಜಾರ್ಜ್‌ ರಾಜೀನಾಮೆಗೆ ಸದನದಲ್ಲಿ ಹೋರಾಟ ನಡೆಸಲು ಬಿಜೆಪಿ ನಿರ್ಧರಿಸಿದ್ದರೆ,

ಜೆಡಿಎಸ್‌ ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಹಗರಣಗಳು ಹಾಗು ವಿದ್ಯುತ್‌ ಖರೀದಿ ಅವ್ಯವಹಾರ ಬಯಲು ಮಾಡಲು ಸದನವನ್ನು ವೇದಿಕೆಯಾಗಿ ಬಳಸಿಕೊಳ್ಳಲು ತೀರ್ಮಾನಿಸಿದೆ.

ಅಧಿವೇಶನದಲ್ಲಿ ಬಿಜೆಪಿ ಹೋರಾಟದ ಕಾರ್ಯತಂತ್ರ ಕುರಿತು “ಉದಯವಾಣಿ’ಯೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌, ಸಚಿವ ಜಾರ್ಜ್‌ ರಾಜೀನಾಮೆಯಷ್ಟೇ ಅಲ್ಲ, ಉತ್ತರ ಕರ್ನಾಟಕ ಭಾಗದ ಸಮಸ್ಯೆ, ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನಿಗದಿ ವಿಚಾರವನ್ನೂ ಬಿಜೆಪಿ ಅಧಿವೇಶನದಲ್ಲಿ ಪ್ರಸ್ತಾಪಿಸಲಿದೆ ಎಂದು ತಿಳಿಸಿದ್ದಾರೆ.

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್‌ ಹಾಕಿರುವುದರಿಂದ ಜಾರ್ಜ್‌ ರಾಜೀನಾಮೆಗೆ ಒತ್ತಾಯಿಸುತ್ತಿದ್ದೇವೆ. ಅದು ನೈತಿಕತೆ ಪ್ರಶ್ನೆ, ನಿಲುವಳಿ ಸೂಚನೆ ಮಂಡಿಸಲಿದ್ದೇವೆ. ಆದರೆ, ಅದೊಂದೇ ನಮ್ಮ ವಿಷಯವಲ್ಲ. ಈ ಸರ್ಕಾರ ನಾಲ್ಕೂವರೆ ವರ್ಷ ಉತ್ತರ ಕರ್ನಾಟಕ ಭಾಗದ ಜನರಿಗೆ ಏನೂ ಮಾಡಲಿಲ್ಲ. ಹೈದರಾಬಾದ್‌ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ದೊರೆತರೂ ಸಮಾಧಾನಕರ ಅಭಿವೃದ್ಧಿಯಾಗಿಲ್ಲ. ನಂಜುಂಡಪ್ಪ ವರದಿ ಸರಿಯಾಗಿ ಅನುಷ್ಠಾನಗೊಂಡಿಲ್ಲ. ಕಬ್ಬು ಬೆಳೆಗಾರರ ಸಮಸ್ಯೆ ಈಡೇರಿಲ್ಲ. ಇದೆಲ್ಲವನ್ನೂ ನಾವು ಅಧಿವೇಶನದಲ್ಲಿ ಪ್ರಸ್ತಾಪಿಸಲಿದ್ದೇವೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಚಿವರು, ಪ್ರತಿಪಕ್ಷದವರು ಏನೇ ಆರೋಪ ಮಾಡಿದರೂ ಉಡಾಫೆಯಾಗಿ ಮಾತನಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಜನರ ಭಾವನೆಗಳಿಗೆ ಬೆಲೆ ಕೊಡುವ ಪದ್ಧತಿಯೇ ಕಾಂಗ್ರೆಸ್‌ನವರಿಗೆ ಇಲ್ಲ. ಇದೆಲ್ಲಾ ಮತದಾರರಿಗೆ ಗೊತ್ತಾಗಬೇಕು ಎಂದು ಹೇಳಿದರು.

ಶ್ವೇತಪತ್ರ ಹೊರಡಿಸಲಿ -ಎಚ್‌ಡಿಕೆ : ಬಿಜೆಪಿಯವರು ರಾಜಕೀಯ ಕಾರಣಗಳಿಗಾಗಿ ಏನಾದರೂ ಮಾಡಿಕೊಳ್ಳಲಿ.
ಜೆಡಿಎಸ್‌ ಉತ್ತರ ಕರ್ನಾಟಕದ ಸಮಸ್ಯೆಗಳು, ರಾಜ್ಯದ ರೈತಾಪಿ ಸಮುದಾಯದ ಸಂಕಷ್ಟದ ಬಗ್ಗೆ ಪ್ರಸ್ತಾಪಿಸಿ
ನಾಲ್ಕೂವರೆ ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಈ ಬಗ್ಗೆ ಕೈಗೊಂಡಿರುವ ಕ್ರಮಗಳ
ಬಗ್ಗೆ ಶ್ವೇತಪತ್ರ ಹೊರಡಿಸಲು ಒತ್ತಾಯಿಸಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿ
ದ್ದಾರೆ. 

ವಿದ್ಯುತ್‌ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಸದನ ಸಮಿತಿ ವರದಿಯನ್ನು ಇದೇ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದರು. ಆದರೆ,ಕಾರ್ಯಸೂಚಿಯಲ್ಲಿ ಅದು ಇಲ್ಲ. ಒಂದೊಮ್ಮೆ ಸದನದಲ್ಲಿ ವರದಿ ಮಂಡನೆಯಾಗದಿದ್ದರೆ ಅಧಿವೇಶನದಲ್ಲಿ ದಾಖಲೆ ಸಮೇತ ನಾನೇ ಅವ್ಯವಹಾರವನ್ನು ಜನರ ಮುಂದಿಡುತ್ತೇನೆ ಎಂದು ಹೇಳಿದ್ದಾರೆ.

ಅಧಿವೇಶನದ ಕಾರ್ಯತಂತ್ರ ಕುರಿತು  “ಉದಯವಾಣಿ’ಯೊಂದಿಗೆ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್‌ ಮತ್ತು ಬಿಜೆಪಿ ರಾಜ್ಯದ ಜನರ ಜತೆ ಕಣ್ಣಾಮುಚ್ಚಾಲೆ ಆಡಲು ಹೊರಟಿವೆ. ನಾನು ಆತ್ತಂಗೆ ಮಾಡ್ತೇನೆ, ನೀನು ಹೊಡೆದಂತೆ ಮಾಡು ಎಂಬಂತೆ ನಟನೆ ಮಾಡುತ್ತಿವೆ. ವಿದ್ಯುತ್‌ ಖರೀದಿಯಲ್ಲಿ ಸಾವಿರಾರು ಕೋಟಿ ರೂ. ಅವ್ಯವಹಾರ ನಡೆದಿದೆ ಎಂಬುದು ದಾಖಲೆ ಸಮೇತ ಮಾಹಿತಿ ಕೊಟ್ಟಿದ್ದರೂ ಯಾರನ್ನೋ ಪಾರು ಮಾಡುವ ಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ.

ಜೆಡಿಎಸ್‌ಗೆ ಯಾವುದೇ ಅಳುಕು-ಅಂಜಿಕೆ ಇಲ್ಲ.ಬಿಜೆಪಿ ಸರ್ಕಾರದ ಅವಧಿಯ ವಿದ್ಯುತ್‌ ಖರೀದಿ ಅವ್ಯವಹಾರ ಬಯಲು ಮಾಡುತ್ತೇನೆ. ಪ್ರಸ್ತುತ ಕಾಂಗ್ರೆಸ್‌ ಸರ್ಕಾರದಲ್ಲಿ ನಡೆದಿರುವ ಸೋಲಾರ್‌ ಟೆಂಡರ್‌ ಹಗರಣ ಸಹಿತ ಇನ್ನೂ ಹಲವು ಭ್ರಷ್ಟಾಚಾರ ಪ್ರಕರಣಗಳನ್ನು ಜನರ ಮುಂದಿಡುತ್ತೇನೆ ಎಂದು ತಿಳಿಸಿದರು.

ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಸರ್ಕಾರ ನಾಲ್ಕೂವರೆ ವರ್ಷದಲ್ಲಿ ಕೈಗೊಂಡ ಕ್ರಮಗಳೇನು? ಎಷ್ಟು ಪ್ರಮಾಣದಲ್ಲಿ ಅಭಿವೃದ್ಧಿಯಾಗಿದೆ ಎಂಬುದನ್ನು ಅಂಕಿ- ಅಂಶ ಸಮೇತ ಸರ್ಕಾರ ತಿಳಿಸಲಿ. ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಾಲ್ಕೂವರೆ ವರ್ಷ “ಆಟ’ ಆಡಿದ್ದಷ್ಟೇ. ಯಾವುದೇ ಪ್ರಗತಿಯಾಗಿಲ್ಲ. ಎರಡೂ ಪಕ್ಷಗಳು ಈ ಭಾಗದ ಜನರಿಗೆ ಉತ್ತರಿಸಬೇಕಾಗುತ್ತದೆ ಎಂದು ಹೇಳಿದರು. ರೈತರ ಸಮಸ್ಯೆ, ಉತ್ತರ ಕರ್ನಾಟಕ ಭಾಗದ ಸಮಸ್ಯೆ ಮುಂದಿಟ್ಟುಕೊಂಡೇ ಜೆಡಿಎಸ್‌ ಮಂಗಳವಾರ (ನ.14) ಬೆಳಗಾವಿಯಲ್ಲಿ ಸಮಾವೇಶ ನಡೆಸುತ್ತಿದೆ ಎಂದು ತಿಳಿಸಿದರು.

ರಾಜ್ಯದ ಜನತೆ ಎಲ್ಲವನ್ನೂ ನೋಡುತ್ತಿದ್ದಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ಆಟ ಇನ್ನು ಮುಂದೆ ನಡೆಯುವುದಿಲ್ಲ. ಕರ್ನಾಟಕ ವಿಕಾಸ ವಾಹಿನಿ ಯಾತ್ರೆ ಸಂದರ್ಭದಲ್ಲಿ ಜನರು ಅನುಭವಿಸುತ್ತಿರುವ ತೊಂದರೆಗಳು ಗಮನಕ್ಕೆ ಬಂದಿವೆ. ಎರಡೂ ಪಕ್ಷಗಳಿಗೆ ಮುಂದಿನ ಚುನಾವಣೆಯಲ್ಲಿ ಜನರೇ ಪಾಠ ಕಲಿಸಲಿದ್ದಾರೆ.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.