ಸಿಎಂ ಬೊಮ್ಮಾಯಿಗೆ “ಶಾ’ಬ್ಬಾಸ್‌ಗಿರಿ
ಕರ್ನಾಟಕಕ್ಕೆ ಮಹಾದಾಯಿ ನೀರು ನೀಡಿದ್ದು ಬಿಜೆಪಿ; ಡಬಲ್ ಎಂಜಿನ್ ಸರಕಾರದಿಂದ ರಾಜ್ಯ-ದೇಶದ ಪ್ರಗತಿ
Team Udayavani, Jan 29, 2023, 6:20 AM IST
ಚನ್ನಮ್ಮನ ಕಿತ್ತೂರು: ಮಹಾದಾಯಿ ನದಿ ನೀರು ಕರ್ನಾಟಕಕ್ಕೆ ಸಿಗಲು ಕಾಂಗ್ರೆಸ್ ಅಡ್ಡಗಾಲು ಹಾಕಿತ್ತು. ಕರ್ನಾಟಕ ಹಾಗೂ ಗೋವಾ ನಡುವಿನ ಹಲವಾರು ವರ್ಷಗಳ ಜಗಳ ಈಗ ಬಗೆಹರಿದು ಕರ್ನಾಟಕದ ಅನೇಕ ಜಿಲ್ಲೆಗಳಿಗೆ ಮಹದಾಯಿ ನೀರು ಸಿಗುವಂತೆ ಮಾಡಿದ ಶ್ರೇಯಸ್ಸು ಬಿಜೆಪಿಗೆ ಸಲ್ಲುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಸರಕಾರವನ್ನು ಹಾಡಿ ಹೊಗಳಿದರು.
ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿಯ ಮೈದಾನದಲ್ಲಿ ಶನಿವಾರ ಕಿತ್ತೂರು, ಖಾನಾಪುರ, ಬೈಲಹೊಂಗಲ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಜನಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕ ಸರಕಾರ ಗೋವಾ ಸರಕಾರವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉಭಯ ರಾಜ್ಯಗಳ ನೀರಿನ ಸಮಸ್ಯೆ ಬಗೆಹರಿಸಿ ಕರ್ನಾಟಕದ ನೀರು ಕೊಡಿಸಿದ ಕೀರ್ತಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಇಲ್ಲಿನ ನಾಯಕರಿಗೆ ಸಲ್ಲುತ್ತದೆ. ಗೋವಾ ಸರಕಾರದ ಸಹಮತದೊಂದಿಗೆ ಈ ವಿವಾದ ಬಗೆಹರಿದಿದೆ ಎಂದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಉತ್ತರ ಕರ್ನಾಟಕಕ್ಕೆ ಏನೂ ಕೊಡುಗೆ ನೀಡಿಲ್ಲ. ಬಿಜೆಪಿ ಡಬಲ್ ಎಂಜಿನ್ ಸರ್ಕಾರ ಸುಮಾರು ಒಂದು ಸಾವಿರ ಕೋಟಿ ರೂ. ಅನುದಾನದಲ್ಲಿ ಬೆಳಗಾವಿ-ಕಿತ್ತೂರು-ಧಾರವಾಡ ನೂತನ ರೈಲ್ವೆ ಮಾರ್ಗ ಕಾರ್ಯ ಆರಂಭಿಸಿದೆ. ಜತೆಗೆ ಕಿತ್ತೂರಿನಲ್ಲಿ ಒಂದು ಸಾವಿರ ಎಕರೆ ಜಮೀನಿನಲ್ಲಿ ಕೈಗಾರಿಕಾ ಟೌನ್‌ಶಿಪ್ ನಿರ್ಮಾಣದಿಂದ 50 ಸಾವಿರ ಜನರಿಗೆ ಉದ್ಯೋಗ ಸಿಗಲಿದೆ. 520 ಕೋಟಿ ರೂ.ಗಳಲ್ಲಿ ಏತ ನೀರಾವರಿ ಯೋಜನೆಯಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ನಡೆದಿದೆ.
ಬೈಲಹೊಂಗಲದಲ್ಲಿ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ರಾಯಣ್ಣ ಸೈನಿಕ ಶಾಲೆ ನಿರ್ಮಿಸಿದ್ದು, 2023-24ರ ಶೈಕ್ಷಣಿಕ ವರ್ಷದಲ್ಲಿ ಅಲ್ಲಿಂದ ಸೇನಾ ಯೋಧರು ಹೊರ ಹಮ್ಮಲಿದ್ದಾರೆ. ಖಾನಾಪುರದ 100 ಹಳ್ಳಿಗಳಲ್ಲಿ ಕುಡಿ ಯುವ ನೀರಿನ ಯೋಜನೆಗೆ 500 ಕೋಟಿ ರೂ. ನೀಡಲಾಗಿದೆ ಎಂದರು.
ಕರ್ನಾಟಕ ಮತ್ತು ಭಾರತದ ಅಭಿವೃದ್ಧಿ ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯ. ನರೇಂದ್ರ ಮೋದಿ ಬಡವರ ಕಲ್ಯಾಣಕ್ಕಾಗಿ ಅನೇಕ ಯೋಜನೆ ಜಾರಿಗೆ ತಂದಿದ್ದಾರೆ. 3 ಕೋಟಿ ಜನರಿಗೆ ಮನೆ, ವಿದ್ಯುತ್, 10 ಕೋಟಿ ಜನರಿಗೆ ಶೌಚಾಲಯ, 13 ಕೋಟಿ ಜನರಿಗೆ ಸಿಲಿಂಡರ್, 60 ಕೋಟಿ ಜನರಿಗೆ ಆಯುಷ್ಮಾನಭವ ಯೋಜನೆಯಡಿ 5 ಲಕ್ಷ ರೂ.ವರೆಗೆ ವಿಮೆ ನೀಡುವ ಕೆಲಸ ಬಿಜೆಪಿ ಮಾಡಿದೆ ಎಂದರು.
ಕಾಂಗ್ರೆಸ್-ಜೆಡಿಎಸ್ ಕುಟುಂಬ ರಾಜಕಾರಣ
ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಕುಟುಂಬ ರಾಜಕಾರಣಕ್ಕೆ ಹೆಸರುವಾಸಿ. ಕುಟುಂಬ ರಾಜಕಾರಣದ ಪಕ್ಷಗಳು ಒಂದೆಡೆಯಾದರೆ, ರಾಷ್ಟ್ರ ಭಕ್ತರ ಪಕ್ಷ ಬಿಜೆಪಿ ಮತ್ತೊಂದು ಕಡೆಗೆ ಇದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಅಮಿತ್ ಶಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.