Belagavi ಭ್ರಮಾಲೋಕದಿಂದ ಹೊರ ಬಾರದ ಬಿಜೆಪಿ-ಜೆಡಿಎಸ್: ಸಿದ್ದರಾಮಯ್ಯ
Team Udayavani, Dec 11, 2023, 7:30 PM IST
ಬೆಳಗಾವಿ:ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹೇಳುತ್ತಲೇ ಇರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇನ್ನೂ ಭ್ರಮಾಲೋಕದಲ್ಲೇ ಇದ್ದಾರೆ. ಅದರಿಂದ ಅವರು ಹೊರಬರುವುದೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ಸರ್ಕಾರ ಸುಭದ್ರವಾಗಿದೆ. ಆದರೆ ಬಿಜೆಪಿ ಮತ್ತು ಜೆಡಿಎಸ್ ನೀರಿನಿಂದ ತೆಗೆದ ಮೀನಿನಂತೆ ವಿಲವಿಲ ಒದ್ದಾಡುತ್ತಿದ್ದು ಭ್ರಮಾಲೋಕದಲ್ಲಿದ್ದಾರೆ. ಅಧಿವೇಶನದಲ್ಲಿ ವಿಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ.
ಅನಗತ್ಯವಾಗಿ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ. ಬರಗಾಲದ ಚರ್ಚೆ ಮೇಲೆ ಸರ್ಕಾರ ಸೂಕ್ತ ಉತ್ತರ ಕೊಡಲಿದೆ. ಬಿಜೆಪಿ ನಾಯಕರ ಮಧ್ಯೆ ಸಮನ್ವಯದ ಕೊರತೆಯಿಂದ ಕಲಾಪದ ಸಮಯ ವ್ಯರ್ಥವಾಗುತ್ತಿದೆ. ಬಿಜೆಪಿಯೊಳಗೆ ಎಂದಿಗೂ ಸಮನ್ವಯ ಇಲ್ಲ. ಅವರು ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದ್ದರು. ನಂತರ ಜನರು ಅವರನ್ನು ತಿರಸ್ಕರಿಸಿದ್ದಾರೆ. ಅವರಲ್ಲಿ ಸಮನ್ವಯ ಬರಲು ಸಾಧ್ಯವೇ ಇಲ್ಲ. ಅವರಲ್ಲೇ ಎರಡು ಗುಂಪುಗಳಿವೆ. ಸುವರ್ಣ ವಿಧಾನಸೌಧದಲ್ಲಿರುವ ಸಾರ್ವರ್ಕರ್ ಫೋಟೋ ತೆಗೆಯುವ ವಿಚಾರ ವಿಧಾನಸಭಾಧ್ಯಕ್ಷರಿಗೆ ಸಂಬಂಧಿಸಿದ್ದು. ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ಸರ್ಕಾರ ಪಂಚಮಸಾಲಿ ನಾಯಕರ ಮನವಿಗೆ ಸ್ಪಂದಿಸಿದೆ. 13ರಂದು ಅಧಿವೇಶನ ಮುಗಿದ ನಂತರ ಸ್ವಾಮೀಜಿಗಳ ಜತೆ ಚರ್ಚೆ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.