ಗ್ರಾಮೀಣದಲ್ಲಿ ಬಿಜೆಪಿ ಬೇರು ಬಲವರ್ಧನೆ
ನಾಯಕರ ಚಿಂತನೆಗೆ ಶಕ್ತಿ ತುಂಬಿದ ಫಲಿತಾಂಶ | ನಿಪ್ಪಾಣಿ ತಾಲೂಕಿನಲ್ಲಿ ಕಮಲ ಪಡೆಗೆ ಆಘಾತ
Team Udayavani, Jan 1, 2021, 7:28 PM IST
ಬೆಳಗಾವಿ: ಜಿಲ್ಲೆಯಲ್ಲಿ ಗ್ರಾಪಂ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅತ್ಯಧಿಕ ಸ್ಥಾನಗಳಲ್ಲಿ ಜಯ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. 350ಕ್ಕೂ ಹೆಚ್ಚು ಗ್ರಾಪಂಗಳಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರ ನಡೆಸಲಿದ್ದಾರೆ.
ಜಿಲ್ಲೆಯಲ್ಲಿ ಚುನಾವಣೆ ನಡೆದ ಒಟ್ಟು 477 ಗ್ರಾಪಂಗಳ ಪೈಕಿ ಸುಮಾರು 350 ಗ್ರಾಪಂಗಳಲ್ಲಿ13 ಶಾಸಕರನ್ನು ಹೊಂದಿರುವ ಬಿಜೆಪಿ ಮೇಲುಗೈಸಾಧಿಸಿದೆ. ಐವರು ಶಾಸಕರನ್ನು ಹೊಂದಿರುವ ಕಾಂಗ್ರೆಸ್ 120ಕ್ಕೂ ಹೆಚ್ಚು ಗ್ರಾಪಂಗಳಲ್ಲಿ ತನ್ನ ಬೆಂಬಲಿತಸದಸ್ಯರ ಮೂಲಕ ಅಧಿಕಾರ ಹಿಡಿಯಲಿದೆ.ಗ್ರಾಮಮಟ್ಟದಲ್ಲಿ ಬಿಜೆಪಿ ಬೇರನ್ನು ಇನ್ನಷ್ಟುಗಟ್ಟಿಗೊಳಿಸಬೇಕು. ಈ ಬೇರು ಎಲ್ಲ ಕಡೆವಿಸ್ತಾರಗೊಳ್ಳಬೇಕು ಎಂಬ ಪಕ್ಷದ ನಾಯಕರಚಿಂತನೆಗೆ ಗ್ರಾಪಂ ಚುನಾವಣೆ ಫಲಿತಾಂಶ ಇನ್ನಷ್ಟು ಶಕ್ತಿ ನೀಡಿದೆ.
ಅಥಣಿ ಹಾಗೂ ಕಾಗವಾಡದಲ್ಲಿ ಬಿಜೆಪಿ ಪ್ರಾಬಲ್ಯ ಮೆರೆದಿದೆ. ಕಾಗವಾಡದಲ್ಲಿ ಎಲ್ಲ 23 ಪಂಚಾಯತ್ ಗಳು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪಾಲಾಗಿವೆ. ಅದೇ ರೀತಿ ಕುಡಚಿ ಮತ್ತು ರಾಯಬಾಗ ವಿಧಾನಸಭಾ ಕ್ಷೇತ್ರಗಳಲ್ಲಿ ಸಹ ಬಿಜೆಪಿ ಬೆಂಬಲಿತರುಅಧಿಕ ಸ್ಥಾನಗಳಲ್ಲಿ ಜಯ ಗಳಿಸಿದ್ದಾರೆ. ಹುಕ್ಕೇರಿವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತರು ಎಲ್ಲಕಡೆ ವಿಜಯ ಸಾಧಿಸಿ ಕತ್ತಿ ಸಹೋದರರಿಗೆ ಮತ್ತಷ್ಟು ಬಲ ತುಂಬಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಹ ಬಿಜೆಪಿ ಬೆಂಬಲಿತರು ಹೆಚ್ಚು ಗ್ರಾಪಂಗಳನ್ನುವಶಪಡಿಸಿಕೊಂಡಿದ್ದಾರೆ. ಜಾರಕಿಹೊಳಿ ಸಹೋದರರ ಹಿಡಿತದಲ್ಲಿರುವ ಮೂಡಲಗಿ ಹಾಗೂ ಗೋಕಾಕತಾಲೂಕಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಜಯಗಳಿಸಿದ್ದಾರೆ. ಬಿಜೆಪಿ ಶಾಸಕರಿರುವ ರಾಮದುರ್ಗಹಾಗೂ ಸವದತ್ತಿಯಲ್ಲಿ ಸಹ ಈ ಪಕ್ಷದ ಬೆಂಬಲಿತಅಭ್ಯರ್ಥಿಗಳು ವಿಜಯದ ಮಾಲೆ ಧರಿಸಿದ್ದಾರೆ. ಆದರೆ ಬೈಲಹೊಂಗಲ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆನಿರೀಕ್ಷೆ ಮಾಡಿದಷ್ಟು ಸ್ಥಾನ ಸಿಕ್ಕಿಲ್ಲ. ಬಿಜೆಪಿ ಇಬ್ಬರು ಮಾಜಿ ಶಾಸಕರು ತಮ್ಮ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿ ಬರುವಂತೆ ನೋಡಿಕೊಂಡಿದ್ದಾರೆ.
ಕಾಂಗ್ರೆಸ್ ಹಾಗೂ ಬಿಜೆಪಿ ಹೊರತುಪಡಿಸಿ ಜೆಡಿಎಸ್ ಬೆಂಬಲಿತ ಸುಮಾರು 110 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಇನ್ನು ಖಾನಾಪುರ ತಾಲೂಕಿನಲ್ಲಿ ಸಹ ಕಾಂಗ್ರೆಸ್‌ಗೆ ಹಿನ್ನಡೆ ಉಂಟಾಗಿದೆ. ಇಲ್ಲಿ ಕಾಂಗ್ರೆಸ್ ಶಾಸಕರಿದ್ದರೂ
ಒಟ್ಟಾರೆ ಸ್ಥಾನ ಗಳಿಕೆಯಲ್ಲಿ ಮೂರನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಏಕೀಕರಣ ಸಮಿತಿ ಬೆಂಬಲಿತರುಇಲ್ಲಿ ಅತ್ಯಧಿಕ ಸ್ಥಾನಗಳನ್ನುಗೆದ್ದಿದ್ದು 20ಕ್ಕೂ ಹೆಚ್ಚು ಗ್ರಾಪಂಗಳ ಮೇಲೆ ಹಿಡಿತ ಸಾಧಿಸಿದ್ದಾರೆ. ಎರಡನೇಸ್ಥಾನದಲ್ಲಿರುವ ಬಿಜೆಪಿ ಬೆಂಬಲಿತರು 18ಕ್ಕೂ ಹೆಚ್ಚು ಪಂಚಾಯತ್‌ಗಳಲ್ಲಿ ಅಧಿಕಾರದ ಗದ್ದುಗೆ ಹಿಡಿಯಲಿದೆ. ಕಾಂಗ್ರೆಸ್ ಬೆಂಬಲಿತರು 8 ರಿಂದ 10 ಪಂಚಾಯತ್‌ಗಳಲ್ಲಿ ಹಿಡಿತ ಸಾಧಿಸಲಿದ್ದಾರೆ.
ಬಿಜೆಪಿಗೆ ಆಘಾತ :
ನಿಪ್ಪಾಣಿ ತಾಲೂಕಿನ ಫಲಿತಾಂಶ ಬಿಜೆಪಿಗೆ ಆಘಾತ ಉಂಟುಮಾಡಿದೆ. ಕ್ಷೇತ್ರದಲ್ಲಿ ಬಲವಾದ ಹಿಡಿತ ಹೊಂದಿರುವ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಈ ಫಲಿತಾಂಶ ಆಲೋಚನೆ ಮಾಡುವಂತೆ ಮಾಡಿದೆ. ಬಿಜೆಪಿ ಬೆಂಬಲಿತರು 13 ಪಂಚಾಯತ್‌ಗಳಲ್ಲಿ ಅಧಿಕ ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ ಬೆಂಬಲಿತ ಸದಸ್ಯರೂ 13
ಪಂಚಾಯತ್‌ಗಳಲ್ಲಿ ಜಯಭೇರಿ ಬಾರಿಸಿದ್ದಾರೆ. ಇಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಶಾಸಕ ಗಣೇಶ ಹುಕ್ಕೇರಿ, ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ವೀರಕುಮಾರ ಪಾಟೀಲ ಅವರ ಪ್ರಭಾವ ಕೆಲಸ ಮಾಡಿದೆ.ಇನ್ನೂ, ಕಾಂಗ್ರೆಸ್ ಶಾಸಕ ಗಣೇಶ ಹುಕ್ಕೇರಿ ಹಿಡಿತದಲ್ಲಿರುವ ಚಿಕ್ಕೋಡಿ ತಾಲೂಕಿನಲ್ಲಿ ಬಿಜೆಪಿಬಲವಾದ ಪೈಪೋಟಿ ನೀಡಿದೆ. ಇಲ್ಲಿ ಕಾಂಗ್ರೆಸ್ ಶೇ. 60ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಬೆಂಬಲಿತರು ಒಟ್ಟು 25 ಗ್ರಾಪಂಗಳ ಪೈಕಿ 18ರಲ್ಲಿ ಅಧಿಕಾರ ಹಿಡಿಯಲಿದ್ದಾರೆ.
ಗೆಲುವಿನ ಲೆಕ್ಕಾಚಾರ :
ಜಿಲ್ಲೆಯ ಒಟ್ಟು 499 ಗ್ರಾಪಂಗಳ ಪೈಕಿ 477ಕ್ಕೆ ಚುನಾವಣೆ ನಡೆದಿತ್ತು. ಒಟ್ಟು 8195 ಸ್ಥಾನಗಳ ಪೈಕಿ 769 ಸ್ಥಾನಗಳಿಗೆಅವಿರೋಧ ಆಯ್ಕೆಯಾಗಿತ್ತು. 31 ಸ್ಥಾನಗಳಿಗೆ ಯಾವುದೇನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಲಭ್ಯ ಮಾಹಿತಿಯಂತೆ 31ಸ್ಥಾನಗಳನ್ನು ಹೊರತುಪಡಿಸಿ ಒಟ್ಟು 8164 ಗ್ರಾಪಂ ಸ್ಥಾನಗಳಲ್ಲಿಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 4850 ಸ್ಥಾನಗಳಲ್ಲಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ 2935 ಅಭ್ಯರ್ಥಿಗಳುಆಯ್ಕೆಯಾಗಿದ್ದರೆ. ಜೆಡಿಎಸ್ ಕೇವಲ 110 ಸ್ಥಾನಕ್ಕೆ ತೃಪ್ತಿಪಟ್ಟಿದೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಸೇರಿದಂತೆ ಇತರ ಅಭ್ಯರ್ಥಿಗಳು 269 ಕಡೆ ಜಯ ಗಳಿಸಿದ್ದಾರೆ.
ಜನರ ಒಲವು ಬಿಜೆಪಿ ಕಡೆಗೆ ಇದೆ ಎಂಬುದನ್ನು ಗ್ರಾಪಂ ಚುನಾವಣೆತೋರಿಸಿಕೊಟ್ಟಿದೆ. ಗ್ರಾಮೀಣ ಭಾಗದಲ್ಲೂ ಈಗ ಬಿಜೆಪಿ ಬೇರು ಬಹಳ ಗಟ್ಟಿಯಾಗುತ್ತಿದೆ.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರಕಾರ್ಯಕ್ರಮ ಮತ್ತು ಯೋಜನೆ ಸಾಕಷ್ಟು ನೆರವಾಗಿವೆ. –ರಾಜೇಶ ನೇರ್ಲಿ, ಬಿಜೆಪಿ ಚಿಕ್ಕೋಡಿ ಜಿಲ್ಲಾಧ್ಯಕ್ಷ
ಜಿಲ್ಲೆಯಲ್ಲಿ ಶೇ. 60ಕ್ಕೂ ಹೆಚ್ಚು ಗ್ರಾಪಂಗಳಲ್ಲಿ ಕಾಂಗ್ರೆಸ್ ಮೇಲುಗೈಸಾಧಿಸಿದೆ. ಬಿಜೆಪಿ ಆಡಳಿತವನ್ನುಗ್ರಾಮಮಟ್ಟದಲ್ಲಿ ತಿರಸ್ಕರಿಸಲಾಗಿದೆ. ಕೇಂದ್ರಹಾಗೂ ರಾಜ್ಯ ಸರಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗೆ ಜನರು ಪಾಠ ಕಲಿಸಿದ್ದಾರೆ –ಲಕ್ಷ್ಮಣರಾವ್ ಚಿಂಗಳೆ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ
–ಕೇಶವ ಆದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Padubidri: ಅಪರಿಚಿತ ವಾಹನ ಢಿಕ್ಕಿ; ಪಾದಚಾರಿಗೆ ತೀವ್ರ ಗಾಯ
Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ
Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.