ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಮಣೆ
Team Udayavani, May 24, 2019, 12:23 PM IST
ಬೈಲಹೊಂಗಲ: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಬೈಕ್ ರ್ಯಾಲಿ ನಡೆಸಿ, ಗುಲಾಲು ಎರಚಿ, ಸಿಹಿ ಹಂಚಿ ಸಂಭ್ರಮಿಸಿದರು.
ಬೆಳಗಾವಿ ಜಿಲ್ಲಾ ಬಿಜೆಪಿ ಗ್ರಾಮೀಣ ಅಧ್ಯಕ್ಷ ಡಾ| ವಿಶ್ವನಾಥ ಪಾಟೀಲ ಮಾತನಾಡಿ, ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶದ ಜನತೆಯ ಜನಮಾನಸವನ್ನು ಗೆದ್ದಿದ್ದು, ಭ್ರಷ್ಟಾಚಾರ ರಹಿತ ಆಡಳಿತ ನಡೆಸಿ ದಿನ ದಲಿತರ, ರೈತರ, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹಲವಾರು ಯೋಜನೆ ಜಾರಿಗೆ ತಂದಿದ್ದಾರೆ. ಅವರ ಆಡಳಿತ ವೈಖರಿ ಮೆಚ್ಚಿ ವಿಶ್ವದ ಅಗ್ರಗಣ್ಯ ನಾಯಕರೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ ಎಂದರು.
ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾತನಾಡಿ, ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ದಿನದ 24ಗಂಟೆಯಲ್ಲಿ 18 ನಿರಂತರವಾಗಿ ದೇಶದ ಅಭಿವೃದ್ಧಿ ಪರ ಚಿಂತನೆ ಮಾಡುವುದು ಅತ್ಯಂತ ಶ್ಲಾಘನೀಯವಾಗಿದೆ. ಮತ್ತೂಮ್ಮೆ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರಕ್ಕೆ ಜನತೆ ಆಶೀರ್ವಾದ ಮಾಡಿರುವುದು ಹರ್ಷದಾಯಕವಾಗಿದೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಫಲಿತಾಂಶ ಹೋರಬಿಳುತ್ತಿದ್ದಂತೆ ಮಾಜಿ ಶಾಸಕರುಗಳಾದ ಡಾ| ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ ಅಭಿಮಾನಿ ಬಳಗ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಸುಧೀರ ವಾಲಿ, ಗುರು ಮೆಟಗುಡ್ಡ, ಜಗದೀಶ ಜಂಬಗಿ, ಶಿವಾನಂದ ಕೋಲಕಾರ, ಸಾಗರ ಭಾವಿಮನಿ, ಬ್ಲಾಕ್ ಅಧ್ಯಕ್ಷ ಮಡಿವಾಳಪ್ಪ ಹೋಟಿ, ಶಿವಾನಂದ ಬಡ್ಡಿಮನಿ, ಬಸವರಾಜ ನೇಸರಗಿ, ಬಸವರಾಜ ಹಲಸಿ, ಮಲ್ಲಿಕಾರ್ಜುನ ವಕ್ಕುಂದಮಠ, ಮಲ್ಲು ಮತ್ತಿಕೊಪ್ಪ, ಮಾರುತಿ ತಿಗಡಿ, ಮಹೇಶ ಹರಕುಣಿ, ರಾಜು ನರಸನ್ನವರ, ವಿರೇಶ ಹೊಳೆಪ್ಪನವರ, ಕುಮಾರ ಭರಮನ್ನವರ, ಬಸನಗೌಡ ಪಾಟೀಲ, ಉಮೇಶ ಕಾದ್ರೋಳಿ, ಅಶೋಕ ಬೋರಕನವರ, ಅಶೋಕ ಜವಳಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.