ಟೈಮ್ ಪಾಸಿಗಾಗಿ ಬರೆದ ಪುಸ್ತಕಗಳು ಗ್ರಂಥಗಳಾಗಿವೆ: ಸತೀಶ್ ಜಾರಕಿಹೊಳಿ
Team Udayavani, Nov 7, 2022, 4:59 PM IST
ನಿಪ್ಪಾಣಿ: ಟೈಮ್ ಪಾಸಿಗಾಗಿ ಬರೆದ ಪುಸ್ತಕಗಳು ಇಂದು ಗ್ರಂಥಗಳಾಗಿವೆ. ಆ ಗ್ರಂಥಗಳು ಇಂದು ನಮ್ಮನ್ನು ಆಳುವಂತಾಗಿದೆ. ಕೈ, ಕಾಲಿಗೆ ಬೇಡಿ ಹಾಕಿಲ್ಲ ಮೆದುಳಿಗೆ ಬೇಡಿ ಹಾಕಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆ ಕರ್ನಾಟಕ ವತಿಯಿಂದ ಹಮ್ಮಿಕೊಂಡಿದ್ದ “ಮನೆ ಮನೆಗೆ ಬುದ್ಧ, ಬಸವ, ಅಂಬೇಡ್ಕರ್ ವಿನೂತನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಹಕ್ಕುಗಳನ್ನು ಪಡೆಯಬೇಕಾಗಿದ್ದು, ಆದಕಾರಣ ಈ ಹೋರಾಟ ಪ್ರಾರಂಭ ಮಾಡಲಾಗಿದೆ ಎಂದು ತಿಳಿಸಿದರು.
ಮನುಷ್ಯರಾಗಿ ಮನುಷ್ಯರನ್ನು ನೋಡುವುದು ಬಹಳ ಮುಖ್ಯ. ಅವನು ಆ ಜಾತಿ, ಈ ಜಾತಿ ಅಂತಾ ಮುಟ್ಟಿಸಿಕೊಳ್ಳುವುದಿಲ್ಲ. ಅನಿಷ್ಟ ಪದ್ಧತಿಗಳು ಹೋಗಬೇಕು, ಅದಕ್ಕೆ ನಮ್ಮ ಹೋರಾಟ. ದಲಿತ ನೀರು ಮುಟ್ಟಿದರೆ ಅಶುದ್ಧ ಅಂತಾರೆ. ಅದೇ ಒಂದು ಎಮ್ಮೆ ಬೆಳಗ್ಗೆಯಿಂದ ಸಂಜೆವರೆಗೂ ನೀರಲ್ಲೇ ಇರುತ್ತದೆ. ಇದರ ವಿರುದ್ಧ ನಮ್ಮ ಹೋರಾಟವಿದೆ. ಗುಡಿ ಕಟ್ಟುವವರೂ ನಾವು, ದೇಣಿಗೆ ಕೊಡುವವರೂ ನಾವು. ದೇಗುಲ ರೆಡಿಯಾದ ಮೇಲೆ ದಲಿತರಿಗೆ ಅಲ್ಲಿ ಪ್ರವೇಶ ಇಲ್ಲ. ದೇವಸ್ಥಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ಸಿಗಲಿ. ಶಿಕ್ಷಣ ಜ್ಞಾನ ಒಂದೇ ನಮ್ಮನ್ನ ಬದುಕಿಸಲು ಸಾಧ್ಯವಿಲ್ಲ. ಬದುಕಿನಲ್ಲಿ ಬರುವ ಜ್ಞಾನ ಬಹಳ ಮುಖ್ಯ ಎಂದರು.
ರಾಜಕೀಯ ಅಧಿಕಾರಕ್ಕಿಂತ ನಮಗೆ ಈ ಅಧಿಕಾರ ಬಹಳ ಮುಖ್ಯ. ಮನುಷ್ಯರಾಗಿ ಮನುಷ್ಯರನ್ನ ನೋಡುವುದು ಬಹಳ ಮುಖ್ಯ. ಅಧಿಕಾರ ಬರುತ್ತೆ ಅಧಿಕಾರ ಹೋಗುತ್ತದೆ. ಮಹಾತ್ಮಾ ಜ್ಯೋತಿಬಾ ಫುಲೆ ಇಲ್ಲದಿದ್ದರೇ ಛತ್ರಪತಿ ಶಿವಾಜಿ ಅವರ ಇತಿಹಾಸ ಹೊರಗೆ ಬರುತ್ತಿರಲಿಲ್ಲ. ಅವರ ಇತಿಹಾಸವನ್ನು ಮುಚ್ಚಿಡಲಾಗಿತ್ತು. ಸತ್ಯ ಶೋಧಕ ಸಂಸ್ಥೆಯಿಂದ ಅವರ ಇತಿಹಾಸ ಹೊರಗೆ ಬಂದಿದೆ. ಶಿವಾಜಿ ಎಲ್ಲರನ್ನು ಸಮಾನತೆಯಿಂದ ನೋಡುತ್ತಿದ್ದರು. ವಿಶ್ವದಲ್ಲಿ ಶಿವಾಜಿ ಅವರ ಒಂದೇ ಪೇಂಟಿಂಗ್ ಇರುವುದು ಅದನ್ನು ಯಾರೋ ಕುಲಕರ್ಣಿ, ದೇಶಪಾಂಡೆ ಅವರು ತಯಾರಿಸಿಲ್ಲ. ಮೊಹಮ್ಮದ್ ಮದಾರಿ ಎನ್ನುವ ಚಿತ್ರಕಾರ ಆ ಪೇಂಟಿಂಗ್ ತಯಾರಿಸಿದ್ದರು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಕುನೋ: ಮೊದಲ ಬೇಟೆಯಾಡಿದ ನಮೀಬಿಯಾದಿಂದ ಬಂದ ಚೀತಾಗಳು
ಪ್ರತಾಪಗಡ್ ಕೋಟೆಯಲ್ಲಿ ಶಿವಾಜಿ ಮಸೀದಿ ನಿರ್ಮಾಣ ಮಾಡಿರುವ ಇತಿಹಾಸವಿದೆ. ಅವರ ಕಾಲದಲ್ಲಿ ಸಮಾನತೆಯಿತ್ತು. ಆದರೆ ಈಗ ಮರಾಠಾ, ಮುಸ್ಲಿಂ, ದಲಿತರ ನಡುವೆ ದಿನನಿತ್ಯ ಜಗಳವಾಗುತ್ತಿವೆ. ಇತಿಹಾಸ ಬೇರೆ ಇದೆ. ನಮಗೆ ಬೇರೆ ಇತಿಹಾಸ ತೋರಿಸಲಾಗುತ್ತಿದೆ. ಬಸವಣ್ಣ, ಶಿವಾಜಿ, ಸಂತ ತುಕಾರಾಮ ಸೇರಿದಂತೆ ಮಹಾನ್ ಪುರುಷರ ಇತಿಹಾಸವನ್ನು ಬೇರೆ ತೋರಿಸಲಾಗುತ್ತಿದೆ. ಬಸವಣ್ಣವರ ಕಾಲದಲ್ಲಿ ಸಾಕಷ್ಟು ಹತ್ಯೆಗಳು ನಡೆದವು ಅದನ್ನು ಮುಸ್ಲಿಮರು ಮಾಡಿದರಾ? ಒಂದು ಲಕ್ಷ ಜೈನರ ಹತ್ಯೆಗಳಾಗಿವೆ ಎಂದು ಜೈನ್ ಸ್ವಾಮೀಜಿ ಹೇಳಿದ್ದಾರೆ. ಜೈನರ ಹತ್ಯೆಯನ್ನು ಆದೀಲ್ ಶಾ ಮಾಡಿದರೆ? ಈ ಎಲ್ಲದರ ಕುರಿತು ಚರ್ಚೆ ಆಗಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಿಕ್ಚರ್ ಅಭಿ ಬಾಕಿ ಹೈ: ಸ್ಥಳೀಯರಿಗೆ ನಿಪ್ಪಾಣಿಯಲ್ಲಿ ಆದ್ಯತೆ ನೀಡಲಾಗುವುದು. ಅದಕ್ಕೆ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮುಂದಿನ ದಿನಗಳಲ್ಲಿ ನಿಪ್ಪಾಣಿಯಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ನಡೆಸಿ, ಜನ ಜಾಗೃತಿ ಮೂಡಿಸಲಾಗುತ್ತದೆ. ಇದು ಟ್ರೇಲರ್ ಅಷ್ಟೇ ಪಿಕ್ಚರ್ ಅಭಿ ಬಾಕಿ ಹೈ ಎಂದು ವಿರೋಧಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಅವರು ಎಚ್ಚರಿಕೆ ಸಂದೇಶವನ್ನು ರವಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Belagavi: ಗಾಂಧಿ ಭಾರತ ಹಿನ್ನೆಲೆ ಡಿ. 26, 27 ರಂದು ಕೆಲ ಶಾಲೆಗಳಿಗೆ ರಜೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.