ಉಳ್ಳವರ ಬಿಪಿಎಲ್‌ ಕಾರ್ಡ್‌ಗೆ ಬಂತು ಕುತ್ತು!

Team Udayavani, Jan 12, 2020, 11:38 AM IST

bg-tdy-2

ಸಾಂಧರ್ಬಿಕ ಚಿತ್ರ

ಚಿಕ್ಕೋಡಿ: ಹೆಚ್ಚು ಆದಾಯ ಹೊಂದಿರುವ, ಸರ್ಕಾರಿ ನೌಕರರು ಮತ್ತು ಪಿಂಚಣಿ ಸಿಬ್ಬಂದಿ ಅಕ್ರಮವಾಗಿ ಪಡೆದುಕೊಂಡಿರುವ ಬಿಪಿಎಲ್‌ ಪಡಿತರ ಕಾರ್ಡ್‌ಗಳನ್ನು ಮರಳಿ ಸರ್ಕಾರಕ್ಕೆ ಒಪ್ಪಿಸುತ್ತಿದ್ದು, ಚಿಕ್ಕೋಡಿ ತಾಲೂಕಿನ 579 ಜನರು ಇಂಥ ಕಾರ್ಡುಗಳನ್ನು ಸರ್ಕಾರಕ್ಕೆ ಮರಳಿಸಿದ್ದಾರೆ.

ಅಕ್ರಮ ಬಿಪಿಎಲ್‌ ರೇಶನ್‌ ಕಾರ್ಡ್‌ ಬಳಕೆ ಮಾಡಿದ ಆರೋಪದ ಮೇಲೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು 81 ಜನರಿಂದ 2.69 ಲಕ್ಷ ರೂ ದಂಡ ವಸೂಲಿ ಮಾಡಿದೆ. ಚಿಕ್ಕೋಡಿ ತಾಲೂಕಿನಲ್ಲಿ 1,97,026 ಪಡಿತರ ಕಾರ್ಡ್‌ಗಳಲ್ಲಿ 6,27,786 ಫಲಾನುಭವಿಗಳು ಇದ್ದಾರೆ. ಇದರಲ್ಲಿ 3,490 ಅಂತ್ಯೋದಯ, 16,614 ಎಪಿಎಲ್‌ ಮತ್ತು 1,50,264 ಬಿಪಿಎಲ್‌ ಕಾರ್ಡ್‌ಗಳನ್ನು ಸರ್ಕಾರ ನೀಡಿದೆ. ನಿಗದಿಗಿಂತ ಹೆಚ್ಚು ಆದಾಯ ಇದ್ದರೂ ಬಿಪಿಎಲ್‌ ರೇಶನ್‌ ಕಾರ್ಡ್‌ ಬಳಸುತ್ತಿದ್ದವರಿಂದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಮರಳಿ ಪಡೆಯುತ್ತಿದೆ.

ಈ ಮೊದಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಇಂತಹ ರೇಶನ್‌ ಕಾರ್ಡ್‌ಗಳನ್ನು ಮರಳಿ ಇಲಾಖೆಗೆ ಒಪ್ಪಿಸಬೇಕೆಂದು ಕಾಲಾವಕಾಶ ನೀಡಿತ್ತು. ಈ ನಿಟ್ಟಿನಲ್ಲಿ 579 ಜನರು ಮರಳಿ ಸರ್ಕಾರಕ್ಕೆ ಕಾರ್ಡ್‌ ಜಮಾ ಮಾಡಿದ್ದಾರೆ. ರಾಜ್ಯ ಸರ್ಕಾರ ನಾಗರಿಕರ ಹಸಿವು ನೀಗಿಸಲು ಅಕ್ಕಿ ಖರೀದಿ ಮಾಡಿ ಉಚಿತವಾಗಿ ವಿತರಣೆ ಮಾಡುತ್ತಿದೆ. ಬಿಪಿಎಲ್‌ ರೇಶನ್‌ ಕಾರ್ಡ್‌ನಲ್ಲಿ ಹೆಸರು ಇರುವ ಪ್ರತಿ ವ್ಯಕ್ತಿಗೆ ತಿಂಗಳಿಗೆ 7 ಕೆಜಿ ಅಕ್ಕಿ ನೀಡಲಾಗುತ್ತಿದೆ.

ನೈಜ ಫಲಾನುಭವಿಗಳು ಬಿಟ್ಟು ಇತರ ಉಳ್ಳವರು ಹಾಗೂ ಹಾಗೂ ಸರ್ಕಾರಿ ಸಿಬ್ಬಂದಿ ಇಮಥ ಕಾರ್ಡ್‌ ಪಡೆದಿದ್ದರಿಂದ ಖಜಾನೆಗೆ ನಷ್ಟವಾಗುವುದನ್ನು ತಪ್ಪಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಇಂತಹ ಕಾರ್ಯಾಚರಣೆ ನಡೆಸುತ್ತಿದೆ. ರಾಜ್ಯ ಮತ್ತು ಕೇಂದ್ರ ಸಿಬ್ಬಂದಿ ಹಾಗೂ ಪಿಂಚಣಿದಾರರು, ಆದಾಯ ತೆರಿಗೆ ತುಂಬುವ ವ್ಯಕ್ತಿ, ಜಮೀನುದಾರರು ಇಂಥವರ ಕಾರ್ಡ್‌ಗಳನ್ನು ರದ್ದು ಮಾಡಲಾಗುತ್ತಿದ್ದು, ಹೆಚ್ಚು ಆದಾಯ ಹೊಂದಿದ ವ್ಯಕ್ತಿಗಳು ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳುವ ಮುನ್ನವೇ ಬಿಪಿಎಲ್‌ ಕಾರ್ಡ್‌ಗಳನ್ನು ಮರಳಿ ಸರ್ಕಾರಕ್ಕೆ ಒಪ್ಪಿಸಬೇಕೆಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ ಆದಾಯ ಹೆಚ್ಚಿರುವ ವ್ಯಕ್ತಿಗಳಿಂದ ಪಡಿತರ ಕಾರ್ಡ್‌ಗಳನ್ನು ಮರಳಿ ಪಡೆದುಕೊಳ್ಳುತ್ತಿದ್ದೇವೆ. ಚಿಕ್ಕೋಡಿ ತಾಲೂಕಿನ 579 ಬಿಪಿಎಲ್‌ ರೇಶನ್‌ ಕಾರ್ಡ್‌ಗಳನ್ನು ಮರಳಿ ಪಡೆದಿದೆ. ಬಿಪಿಎಲ್‌ ಕಾರ್ಡ್‌ ಮರಳಿ ನೀಡದ ಇರುವ ವ್ಯಕ್ತಿಗಳನ್ನು ಗುರ್ತಿಸಿ 81 ಜನರಿಂದ 2.69 ಲಕ್ಷ ರೂ ದಂಡ ವಸೂಲಿ ಮಾಡಲಾಗಿದೆ. -ಎಂ.ಬಿ.ಡಂಗಿ, ನಿರೀಕ್ಷಕರು.  ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಚಿಕ್ಕೋಡಿ.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.