ಬಿಎಸ್‌ವೈ ಸಿಎಂ ಕನಸು ನನಸಾಗಲ್ಲ: ಸಿದ್ದರಾಮಯ್ಯ
Team Udayavani, Sep 29, 2018, 6:55 AM IST
ಜಮಖಂಡಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮತ್ತೆ ಮುಖ್ಯಮಂತ್ರಿಯಾಗುವ ಕನಸು ಕಂಡಿದ್ದು, ಅದು ನನಸಾಗಲ್ಲ ಎಂದು ಬಾದಾಮಿ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಮಾತನಾಡಿ, ಯಡಿಯೂರಪ್ಪನವರು ಕಾಂಗ್ರೆಸ್ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮುಂದಾಗಿದ್ದಾರೆ. ಆದರೆ, ಅವರು ಹೆಣೆದಿರುವ ಬಲೆಗೆ ಕಾಂಗ್ರೆಸ್ ಶಾಸಕರು ಬೀಳಲ್ಲ ಎಂದರು. ರಾಜ್ಯದಲ್ಲಿ ಕೋಮುವಾದಿ ಬಿಜೆಪಿ ಅಧಿ ಕಾರಕ್ಕೆ ಬರಬಾರದೆಂದು ಜೆಡಿಎಸ್ ಪಕ್ಷದೊಂದಿಗೆ ಸರ್ಕಾರ ರಚಿಸಲಾಗಿದೆ. ಮುಂಬರುವ ಲೋಕಸಭೆಯಲ್ಲಿ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ. ರಾಹುಲ್ ಗಾಂ ಧಿ ಪ್ರಧಾನಿಯಾಗಿ ಅಧಿಕಾರದ ಚುಕ್ಕಾಣೆ ಹಿಡಿಯುವುದು ಖಚಿತ ಎಂದು ಭವಿಷ್ಯ ನುಡಿದರು.
ಯುದ್ಧ ವಿಮಾನ ಖರೀದಿಗೆ ಅಗ್ರಿಮೆಂಟ್ ಮಾಡಿಕೊಂಡ ಕೇಂದ್ರ ಸರ್ಕಾರ 40 ಸಾವಿರ ಕೋಟಿ ರೂ. ಅವ್ಯವಹಾರ ನಡೆಸಿದೆ. ರಕ್ಷಣಾ ಇಲಾಖೆಯಲ್ಲಿ ಇಷ್ಟೊಂದು ಪ್ರಮಾಣದ ಭ್ರಷ್ಟಾಚಾರ, ಹಗರಣ ನಡೆದಿರುವುದು ಇದೇ ಮೊದಲು. ಇಷ್ಟೊಂದು ಹಣದ ವ್ಯವಹಾರ ನಡೆಸುವ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಹಿಂದೇಟು ಹಾಕುತ್ತಿದೆ ಎಂದು ಲೇವಡಿ ಮಾಡಿದರು.
ಆನಂದ ನ್ಯಾಮಗೌಡ ಸ್ಪರ್ಧೆ: ರಸ್ತೆ ಅಪಘಾತದಲ್ಲಿ ನಿಧನರಾದ ಜಮಖಂಡಿ ಮತಕ್ಷೇತ್ರದ ಶಾಸಕ ದಿ| ಸಿದ್ದು ನ್ಯಾಮಗೌಡರು ಸಮಾಜಕ್ಕೆ ನೀಡಿರುವ ಸೇವೆ ಅಪಾರ. ವಿಧಾನಸಭಾ ಉಪಚುನಾವಣೆಯಲ್ಲಿ ಅವರ ಪುತ್ರ ಆನಂದ ನ್ಯಾಮಗೌಡ ಸ್ಪ ರ್ಧಿಸಲಿದ್ದಾರೆ. ಅವರ ಗೆಲುವಿಗೆ ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ಕನ್ನಡ ನಾಡಿನಲ್ಲಿ ನಾನು 100 ವರ್ಷಗಳ ಕಾಲ ಜೀವಂತವಾಗಿ ಬದುಕುವೆ. ಹುಟ್ಟು-ಸಾವು ನಡುವೆ ಸಮಾಜಕ್ಕೆ ಕೊಡುಗೆ ನೀಡುವೆ.
– ಸಿದ್ದರಾಮಯ್ಯ, ಬಾದಾಮಿ ಶಾಸಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.