ಅರಳಿಕಟ್ಟಿ ಸರ್ಕಲ್ ಬಸ್ ನಿಲ್ದಾಣ ವಿಸ್ತರಿಸಿದ್ರೆ ಅನುಕೂಲ
ಮಳೆ-ಬಿಸಿಲಲ್ಲಿ ಆಶ್ರಯ ನೀಡುವ ಬಸ್ ತಂಗುದಾಣ ನಿರ್ಮಿಸಲು ಆಗ್ರಹ
Team Udayavani, Sep 22, 2022, 4:24 PM IST
ಚನ್ನಮ್ಮನ ಕಿತ್ತೂರು: ಅರಳಿಕಟ್ಟಿ ಸರ್ಕಲ್‌ನಲ್ಲಿ ನಿಲ್ಲಲು ಸಮರ್ಪಕ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮಳೆಗಾಲ-ಬೇಸಿಗೆಯಲ್ಲಿ ಪರದಾಡುವಂತಾಗಿದೆ.
ಕಿತ್ತೂರು ಸುತ್ತಮುತ್ತಲಿನ ಗ್ರಾಮಗಳಾದ ನಂದಿಹಳ್ಳಿ, ಕಲಭಾವಿ, ಶಿವನೂರು, ಮರಿಗೇರಿ, ಜಮಳೂರು, ಹೂಲಿಕಟ್ಟಿ, ಉಗರಕೋಡ, ತೇಗೂರು, ಖೋದಾನಪೂರ ಸಂಗೊಳ್ಳಿ ಸೇರಿದಂತೆ ಇನ್ನೂ ಅನೇಕ ಗ್ರಾಮಗಳಿಂದ ಕೆಲಸಕ್ಕೆ ಗ್ರಾಮಸ್ಥರು, ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಬಸ್ ಮುಖಾಂತರ ಆಗಮಿಸುತ್ತಾರೆ. ಅವರು ಮರಳಿ ತಮ್ಮ ತಮ್ಮ ಗ್ರಾಮಗಳಿಗೆ ಹೋಗುವಾಗ ಅರಳಿಕಟ್ಟಿ ಸರ್ಕಲ್‌ನಲ್ಲಿ ಇರುವ ಬಸ್ ತಂಗುದಾಣ ಚಿಕ್ಕದಿರುವುದರಿಂದ ಬಹುತೇಕರಿಗೆ ನೆರಳಲ್ಲಿ ನಿಲ್ಲಲು-ಕುಳಿತುಕೊಳ್ಳಲು ಸಿಗುತ್ತಿಲ್ಲ.
ಈಗ ಮಳೆಯಿಂದ ರಸ್ತೆಗಳು ಹದಗೆಟ್ಟಿದ್ದು, ಬಹುತೇಕ ಬಸ್‌ಗಳು ತಡವಾಗಿ ಸಂಚರಿಸುತ್ತಿರುವುದರಿಂದ, ಬಸ್ ಬರುವವರೆಗೆ ಸುರಿಯುವ ಮಳೆಯಲ್ಲಿ ನೆನೆದು ಮತ್ತು ಬೇಸಿಗೆಯಲ್ಲಿ ನೆತ್ತಿ ಸುಡುವ ಬಿಸಿಲಿನಲ್ಲಿ ಕಾಯುವ ದುಸ್ಥಿತಿ ಇದೆ. ಇದರಿಂದ ಮುಖ್ಯವಾಗಿ ವಿದ್ಯಾರ್ಥಿನಿಯರು, ಮಹಿಳೆಯರು, ವೃದ್ಧರು ಪರದಾಡುವಂತಾಗಿದೆ.
ಅಧಿಕಾರಿಗಳು ಎಚ್ಚೆತ್ತು ಬಸ್ ತಂಗುದಾಣ ವಿಸ್ತರಿಸುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಪ್ರಯಾಣಿಕರು ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ರಾಜಕಾಣಿಗಳು ಏರ್‌ಕಂಡಿಷನ್ ಕಾರನ್ಯಾಗ ಓಡಾಡೂದ್ರಿಂದ ನಮ್ಮ ಕಷ್ಟ ಅವರಿಗೆಲ್ಲಿ ಗೊತ್ತಾಗಬೇಕ್ರಿ ದಿನಾಲೂ ನಾವು ಸರಿಯಾಗಿ ಬಿಸಿಲು ಚಾಲೂ ಆಗುವ ಹೊತ್ತಿಗೆ ಕಾಲೇಜಿನಿಂದ ನಡಕೊಂತ ಬಂದ ರಣರಣ ಬಿಸಿಲು ಮತ್ತು ಮಳೆಯಲ್ಲಿ ಗಿಡದ ನೆಳ್ಳಿಗೆ ಕುಂತ ತಾಸಗಟ್ಟಲೆ ಕಾಯ್ತಿàವಿ. ಇಲ್ಲಿ ಎಲ್ಲರಿಗೂ ಕುಳಿತುಕೊಳ್ಳಲು ಒಂದ ಬಸ್‌ಸ್ಟ್ಯಾಂಡ್ ಮಾಡಿದ್ರ ಬಾಳ ಚೊಲೊ ಅಕ್ಕೇತ್ರಿ. –ಹೆಸರು ಹೇಳಲು ಇಚ್ಛಿಸದ ಗ್ರಾಮೀಣ ವಿದ್ಯಾರ್ಥಿ.
ಈ ವಿಷಯ ತಮ್ಮ ಮೂಲಕ ಗಮನಕ್ಕೆ ಬಂದಿದ್ದು ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಅಲ್ಲಿನ ಬಸ್ ತಂಗುದಾಣ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು. ಮಹಾಂತೇಶ ದೊಡ್ಡಗೌಡರ, ಶಾಸಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.