ಉಪ ಚುನಾವಣೆ ದಿಕ್ಸೂಚಿಯಲ್ಲ: ಪರಂ
Team Udayavani, Oct 23, 2018, 6:55 AM IST
ಬೆಳಗಾವಿ: ಮುಂದಿನ ಲೋಕಸಭೆ ಚುನಾವಣೆಗೆ ಈಗ ನಡೆಯುತ್ತಿರುವ ಉಪಚುನಾವಣೆ ದಿಕ್ಸೂಚಿಯಲ್ಲ. ಐದೂ ಕ್ಷೇತ್ರಗಳಲ್ಲಿ ಸಮ್ಮಿಶ್ರ ಸರಕಾರಕ್ಕೆ ಗೆಲುವು ಸಿಗಲಿದೆ ಎಂದು ಉಪಮುಖ್ಯಮಂತ್ರಿ ಡಾ|ಜಿ.ಪರಮೇಶ್ವರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಮತ್ತೂಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬಾರದು ಎನ್ನುವುದು ಜನರ ಅಭಿಪ್ರಾಯವಾಗಿದ್ದು, ಸಮ್ಮಿಶ್ರ ಸರಕಾರಕ್ಕೆ ಈ ಚುನಾವಣೆ ಶಕ್ತಿ ತುಂಬಲಿದೆ ಎಂದರು.
ಸಚಿವರಾದ ರಮೇಶ ಜಾರಕಿಹೊಳಿ ಹಾಗೂ ಡಿ.ಕೆ. ಶಿವಕುಮಾರ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ಅವರಿಬ್ಬರೂ ಮೊದಲಿನಿಂದಲೂ ಸ್ನೇಹಿತರು. ಈ ತರಹ ಮಾತನಾಡುವುದು ಸಹಜವಾಗಿ ಬಿಟ್ಟಿದೆ. ಬಹಿರಂಗವಾಗಿ ಇಂಥ ಹೇಳಿಕೆ ನೀಡದಂತೆ ಇಬ್ಬರಿಗೂ ಸೂಚಿಸಲಾಗುವುದು ಎಂದು ಹೇಳಿದರು.
ಪ್ರತಿವರ್ಷ ಕರ್ನಾಟಕ ರಾಜ್ಯೋತ್ಸವದಂದು ಎಂಇಎಸ್ ಕರಾಳ ದಿನ ಆಚರಿಸುತ್ತಿದ್ದು, ಈ ಸಲವೇನೂ ಅದು ಹೊಸದಲ್ಲ. ಆದರೆ ಕರಾಳ ದಿನಾಚರಣೆ ಬಗ್ಗೆ ಕಾನೂನು ಚೌಕಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ಡಾ| ಜಿ. ಪರಮೇಶ್ವರ್, ಉಪಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್ ವಿವಾಹ?
Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
Max Movie: ಬಿಗ್ ಬಾಸ್ ವೇದಿಕೆಯಲ್ಲಿ ʼಮ್ಯಾಕ್ಸ್ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.