ಸರ್ಕಾರ ಪತನ ಭೀತಿಯಿಂದ ಸಂಪುಟ ವಿಸ್ತರಣೆ ಆಗುತ್ತಿಲ್ಲ: ಶೆಟ್ಟರ್
Team Udayavani, Dec 6, 2018, 6:05 AM IST
ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದ ದಿನವೇ ಸರಕಾರ ಪತನವಾಗುತ್ತದೆ ಎಂಬುದು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರಿಗೆ ಗೊತ್ತಿದೆ. ಇದೇ ಕಾರಣದಿಂದ ಸಂಪುಟ ವಿಸ್ತರಣೆ ಮಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಮ್ಮಿಶ್ರ ಸರಕಾರದಲ್ಲಿ ಬಹಳ ಅಸಮಾಧಾನ ಇದೆ. ಹೀಗಾಗಿ, ಸಂಸತ್ ಚುನಾವಣೆವರೆಗೆ ಸಂಪುಟ ವಿಸ್ತರಣೆ ನಡೆಯುವುದಿಲ್ಲ. ಈ ಸರ್ಕಾರ ಅಧಿಕಾರ ಸ್ವೀಕಾರ ಮಾಡಿದಾಗಿನಿಂದಲೂ ಅಸಮಾಧಾನ ಕೇಳಿ ಬರುತ್ತಲೇ ಇದೆ. ನಮ್ಮ ಕ್ಷೇತ್ರಗಳಿಗೆ ಅನುದಾನ ಬರುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ನೇರ ಆರೋಪ ಮಾಡಿದ್ದಾರೆ.
ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಪ್ರಯತ್ನ ಮಾಡಿದರೂ ಅವರು ನಮಗೆ ಸಿಗುತ್ತಿಲ್ಲ ಎಂಬ ಅಸಮಾಧಾನವನ್ನು ಕಾಂಗ್ರೆಸ್ ಶಾಸಕರು ಹೊರಹಾಕಿದ್ದಾರೆ. ಇದು ಸರ್ಕಾರದಲ್ಲಿನ ಭಿನ್ನಮತ ತೋರಿಸುತ್ತದೆ ಎಂದರು.
ಸರ್ಕಾರ ಕೇವಲ ಮೈಸೂರು ಭಾಗದ ಐದು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ. ಮುಖ್ಯಮಂತ್ರಿಗಳು ಉತ್ತರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷé ಮಾಡಿದ್ದಾರೆ. ಸರಕಾರದ ಈ ಧೋರಣೆ ಖಂಡಿಸಿ ಬಿಜೆಪಿ ವತಿಯಿಂದ ಡಿ.10ರಂದು ಬೆಳಗಾವಿಯಲ್ಲಿ ಬೃಹತ್ ಸಮಾವೇಶ ನಡೆಸಲಾಗುತ್ತಿದೆ. ಲಕ್ಷಾಂತರ ಕಾರ್ಯಕರ್ತರು ಹಾಗೂ ರೈತರು ಈ ಸಮಾವೇಶದಲ್ಲಿ ಭಾಗವಹಿಸಿ ಸರಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಲಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.