ಪ್ರಾದೇಶಿಕ ಆಯುಕ್ತರ ಹುದ್ದೆ ರದ್ದತಿಗೆ ಕಿಡಿ
ವಿಜಯಭಾಸ್ಕರ ಶಿಫಾರಸು! ಧ್ವನಿಗೂಡಿಸಿದ ಕಂದಾಯ ಸಚಿವ! ಹೋರಾಟಕ್ಕೆ ಸಜ್ಜಾದ ಅಭಿವೃದ್ಧಿ ಪರ ಚಿಂತಕರು
Team Udayavani, Jul 14, 2021, 8:21 PM IST
ವರದಿ: ಕೇಶವ ಆದಿ
ಬೆಳಗಾವಿ: ಅಧಿಕಾರ ವಿಕೇಂದ್ರೀಕರಣ ಮತ್ತು ಆಡಳಿತಾತ್ಮಕ ಅನುಕೂಲತೆ ಉದ್ದೇಶದಿಂದ ರಾಜ್ಯದ ನಾಲ್ಕು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾದೇಶಿಕ ಆಯುಕ್ತರ ಕಚೇರಿಗಳು ಸರ್ಕಾರಕ್ಕೆ ಭಾರವಾಗಿವೆಯೇ? ಇವುಗಳನ್ನು ರದ್ದು ಮಾಡುವದು ನ್ಯಾಯವೇ? ಇಂತಹ ಒಂದು ಚರ್ಚೆ ಈಗ ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಬಹಳ ಗಂಭೀರವಾಗಿ ನಡೆದಿದೆ.
ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದು ಮಾಡುವುದು ಸೂಕ್ತ ಎಂದು ನಿವೃತ್ತ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ ಅವರು ಸರ್ಕಾರಕ್ಕೆ ಶಿಫಾರಸು ಮಾಡಿ ವರದಿ ನೀಡಿದ ನಂತರ ಈ ಶಿಫಾರಸಿನ ಬಗ್ಗೆ ವ್ಯಾಪಕ ಪ್ರಮಾಣದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಆಡಳಿತ ಸುಧಾರಣಾ ಆಯೋಗ-2ರ ಶಿಫಾರಸುಗಳಂತೆ ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದುಗೊಳಿಸುವುದು ವಿಕೇಂದ್ರೀಕರಣದ ಮನೋಭಾವಕ್ಕೆ ವಿರುದ್ಧವಾಗಿದೆ. ಯಾವುದೇ ಕಾರಣಕ್ಕೂ ಈ ವರದಿಯನ್ನು ಸರ್ಕಾರ ಒಪ್ಪಿಕೊಳ್ಳಬಾರದು ಎಂಬ ಒತ್ತಾಯ ಸಹ ಕೇಳಿಬಂದಿದೆ. ಹೋರಾಟದ ಸುಳಿವು ಸಹ ಕಂಡಿದೆ. ಇನ್ನೊಂದು ಕಡೆ ಸ್ವತಃ ಕಂದಾಯ ಸಚಿವ ಆರ್.ಅಶೋಕ ಅವರು ಪ್ರಾದೇಶಿಕ ಆಯುಕ್ತರ ಕಚೇರಿಗಳು ಸರ್ಕಾರಕ್ಕೆ ಬಿಳಿಯಾನೆಯಂತಾಗಿವೆ ಎಂದು ಹೇಳಿರುವುದು ಸಾರ್ವಜನಿಕವಾಗಿ ಟೀಕೆಗಳಿಗೆ ಗುರಿಯಾಗಿದೆ.
ಬೆಂಗಳೂರಿನಲ್ಲಿ ಅನೇಕ ಬಿಳಿಯಾನೆಗಳು ಇವೆ. ರಿಗೆ ಈ ಆನೆಗಳು ಕಾಣಲಿಲ್ಲವೇ. ಅದೆಲ್ಲವನ್ನೂ ಬಿಟ್ಟು ಪ್ರಾದೇಶಿಕ ಆಯುಕ್ತರ ಕಚೇರಿಗಳ ಮೇಲೆ ಕಣ್ಣು ಹಾಕಿರುವುದು ಏಕೆ, ಇದರ ಹಿಂದೆ ಉನ್ನತಾಧಿಕಾರಿಗಳ ಲಾಬಿ ಕೆಲಸ ಮಾಡಿದೆಯಾ ಎಂದು ಹೋರಾಟಗಾರರು ಹಾಗೂ ಅಭಿವೃದ್ಧಿ ಪರ ಚಿಂತಕರು ಪ್ರಶ್ನೆಕಂದಾಯ ಸಚಿವ ಮಾಡಿದ್ದಾರೆ.
ರಾಜ್ಯದಲ್ಲಿಯ ನಾಲ್ಕು ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದುಗೊಳಿಸಿ ರಾಜ್ಯ ಮಟ್ಟದಲ್ಲಿ ಕಂದಾಯ ಸಚಿವಾಲಯವನ್ನು ರಚಿಸಬೇಕು ಎಂಬ ಶಿಫಾರಸು ಅಧಿಕಾರ ವಿಕೇಂದ್ರಿಕರಣದ ವಿರೋಧಿ. ಇಂತಹ ಕ್ರಮ ಜನರಿಗಾಗಲಿ, ಅಭಿವೃದ್ಧಿ ಮತ್ತು ಒಳ್ಳೆಯ ಆಡಳಿತಕ್ಕಾಗಲಿ ಅನುಕೂಲಕರವಾದದ್ದಲ್ಲ. ಹಿರಿಯ ಐಎಎಸ್ ಅಧಿಕಾರಿಗಳು ಬೆಂಗಳೂರಿನಿಂದ ಹೊರಗೆ ಹೋಗಲು ಇಚ್ಛಿಸುವದಿಲ್ಲ ಎಂಬ ಕಾರಣಕ್ಕೆ ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನೇ ರದ್ದುಗೊಳಿಸುವುದು ನ್ಯಾಯವಾದ ಕ್ರಮವಲ್ಲ ಎಂಬುದು ಉತ್ತರ ಕರ್ನಾಟಕದ ಹೋರಾಟಗಾರರ ಅಭಿಪ್ರಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Kundapura: ಸುಜ್ಞಾನ್ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್ ಆಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.