ಜಾತಿ ಗಣತಿ ವರದಿ ವಿವರ ಶೀಘ್ರ ಬಹಿರಂಗ: ಸಚಿವ ಕೋಟ ಶ್ರೀನಿವಾಸ ಪೂಜಾರಿ
Team Udayavani, Dec 23, 2022, 8:33 PM IST
ಸುವರ್ಣವಿಧಾನಸೌಧ: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಜಾತಿ ಗಣತಿಯ ವಿವರಗಳನ್ನು ಮುಖ್ಯಮಂತ್ರಿಗಳ ಜತೆ ಮಾತನಾಡಿ ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ ಅವರ ಪ್ರಶ್ನೆಗೆ ಉತ್ತರಿಸಿ, ಈ ಹಿಂದೆ ರಚಿಸಲಾಗಿದ್ದ ಎಚ್.ಕಾಂತರಾಜ್ ಆಯೋಗವು ಸರ್ಕಾರಕ್ಕೆ ವರದಿ ನೀಡಿದೆ. ಆದರೆ ಅದರ ಪುನರ್ ಪರಿಶೀಲನೆ ಅಗತ್ಯವಿದೆ ಎಂದು ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಹೇಳಿದ್ದಾರೆ. ಹೀಗಾಗಿ ಶೀಘ್ರವೇ ವರದಿ ವಿವರಗಳನ್ನು ಬಹಿರಂಗಗೊಳಿಸುವುದಾಗಿ ಹೇಳಿದರು.
ಇದಕ್ಕೇ ಆಕ್ಷೇಪ ವ್ಯಕ್ತಪಡಿಸಿದ ಕೆ.ಪಿ.ನಂಜುಂಡಿ, ಕಳೆದ ನಾಲ್ಕು ವರ್ಷಗಳಿಂದಲೂ ಸರ್ಕಾರ ಹೀಗೆ ಹೇಳುತ್ತಲೇ ಬಂದಿದೆ. ಇನ್ನೂ ವರದಿ ವಿವರ ಬಹಿರಂಗಗೊಳಿಸಿಲ್ಲ ಎಂದರು. ಆದಷ್ಟು ಬೇಗ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ವರದಿ ವಿವರ ಬಹಿರಂಗಗೊಳಿಸುವುದಾಗಿ ಸಚಿವ ಪೂಜಾರಿ ಭರವಸೆ ನೀಡಿದರು.
ಹಿಂದುಳಿದ ವರ್ಗ ಮೀಸಲು ನಿಶ್ಚಿತ: ನಾಗಮೋಹನದಾಸ್ ವರದಿ ಕುರಿತು ಪ್ರಸ್ತಾಪಿಸಿದ ಜೆಡಿಎಸ್ ಸದಸ್ಯ ಟಿ.ಎ.ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಬಿ.ಶ್ರೀರಾಮುಲು, ಎಸ್.ಟಿ.ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲು ನೀಡಲು ಆಗಿರಲಿಲ್ಲ. ಆದರೆ ಇದೇ ಮೊದಲ ಬಾರಿ ಕರ್ನಾಟಕದಲ್ಲಿ ಹಿಂದುಳಿದ ವರ್ಗದ ಮೀಸಲು ಪ್ರಮಾಣ ಹೆಚ್ಚಿಸಲಾಗಿದೆ. ಇದಕ್ಕೆ ಅಗತ್ಯ ಇರುವ ಎಲ್ಲಾ ಕಾನೂನು ಕ್ರಮಗಳನ್ನು ಪೂರ್ಣಗೊಳಿಸಿ ಕೇಂದ್ರದಿಂದ ಆಗಬೇಕಿರುವ ಕೆಲಸಗಳನ್ನು ಪೂರ್ತಿ ಮಾಡಿ ಇದನ್ನು 9ನೇ ಪರಿಚ್ಛೇದಕ್ಕೆ ಸೇರಿಸಲಾಗುವುದು ಎಂದು ಹೇಳಿದರು.
ಬ್ರಾಹ್ಮಣ ಅಭಿವೃದ್ಧಿ ನಿಗಮದ ಹಣ ಬಿಡುಗಡೆಗೆ ಕ್ರಮ
ಸುವರ್ಣವಿಧಾನಸೌಧ: ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ ನೀಡಬೇಕಿರುವ ಬಾಕಿ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೋವಿಡ್ ಸಂದರ್ಭದಿಂದಾಗಿ ನಿಗಮಕ್ಕೆ ಅನುದಾನ ಪೂರೈಕೆಯಲ್ಲಿ ವ್ಯತ್ಯಾಸವಾಗಿರಬಹುದು. ಶೀಘ್ರವೇ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅನುದಾನ ಪೂರೈಕೆ ಮಾಡಲಾಗುವುದು. ನಿಗಮದಿಂದ ಈ ಸಮುದಾಯದ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಸಾಕಷ್ಟು ಯೋಜನೆಗಳಿದ್ದು ಅವುಗಳನ್ನು ತಲುಪಿಸಲಾಗುವುದು ಎಂದು ಸಚಿವರು ಹೇಳಿದರು.
ರೈತ ಉತ್ಪಾದಕ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣ
ಸುವರ್ಣವಿಧಾನಸೌಧ: ಕೃಷಿ ಯಂತ್ರೋಪಕರಣಗಳ ನಿರ್ಮಾಣವನ್ನು ರೈತ ಉತ್ಪಾದಕ ಕೇಂದ್ರಗಳಿಗೆ ನೀಡಲು ಚಿಂತನೆ ನಡೆದಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಅ.ದೇವೇಗೌಡ ಪ್ರಶ್ನೆಗೆ ಉತ್ತರಿಸಿ, ಕೃಷಿ ಯಂತ್ರೋಪಕರಣ ನಿರ್ಮಿಸುವ ಅನೇಕ ಖಾಸಗಿ ಕಂಪನಿಗಳು ಯಂತ್ರೋಪಕರಣ ನಿರ್ಮಿಸಿ ಕೊಡಲು ಹಿಂದೇಟು ಹಾಕಿವೆ. ಕೆಲವು ಕಂಪನಿಗಳು ಟೆಂಡರ್ ರದ್ದುಮಾಡಿಕೊಳ್ಳಲು ಮುಂದಾಗಿವೆ. ಒಟ್ಟು 400 ಕೋಟಿ ರೂ.ಗಳಷ್ಟು ಹಣವನ್ನು ಈಗಾಗಲೇ ಒದಗಿಸಲಾಗಿದೆ. ಅದರೆ ಕಂಪನಿಗಳ ಹಿಂದೇಟಿನಿಂದ ಯೋಜನೆಗೆ ಕೊಂಚ ಅಡೆತಡೆ ಎದುರಾಗಿವೆ. ಇದನ್ನು ಸರಿಪಡಿಸಿಕೊಂಡು ಯುವ ಮತ್ತು ಉತ್ಸಾಹಿ ಕಂಪನಿಗಳ ಜೊತೆಗೆ ರೈತ ಉತ್ಪಾದಕ ಕೇಂದ್ರಗಳಿಗೆ ಹೆಚ್ಚಿನ ಅವಕಾಶ ನೀಡಿ ಯಂತ್ರೋಪಕರಣಗಳನ್ನು ರೈತರಿಗೆ ಪೂರೈಕೆ ಮಾಡಲಾಗುವುದು ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.