ಪ್ರಸಾದ: ಸಿಸಿಟಿವಿ ಕಣ್ಣು

Team Udayavani, Dec 18, 2018, 6:00 AM IST

10.jpg

ಬೆಳಗಾವಿ: ರಾಜ್ಯದಲ್ಲಿ ಇನ್ನು ಮುಂದೆ ಮುಜರಾಯಿ ಇಲಾಖೆ ಅಧೀನದಲ್ಲಿರುವ ದೇಗುಲಗಳಲ್ಲಿ ಪ್ರಸಾದ, ದಾಸೋಹ ಸಿದ್ಧಪಡಿಸುವ ಕೋಣೆಗಳಿಗೆ ಸಿಸಿಟಿವಿ ಕೆಮರಾ ಅಳವಡಿಕೆಯನ್ನು ಸರಕಾರ ಕಡ್ಡಾಯಗೊಳಿಸಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇಗುಲದಲ್ಲಿ ಪ್ರಸಾದ ಸೇವಿಸಿ 14 ಮಂದಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಮುಜರಾಯಿ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ 20 ಅಂಶಗಳ ಸುತ್ತೋಲೆ ಹೊರಡಿಸಿದೆ. ಮುಜರಾಯಿ ಇಲಾಖಾ ವ್ಯಾಪ್ತಿಗೆ ಒಳಪಡಿಸುವ ಅಧಿಸೂಚಿತ ಸಂಸ್ಥೆಗಳಲ್ಲಿ ಭಕ್ತರಿಗೆ ಪ್ರಸಾದ ರೂಪದಲ್ಲಿ ಅನ್ನದಾಸೋಹ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಇಲ್ಲಿ ಸುತ್ತೋಲೆಯ ಅಂಶಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.

ಅದರಂತೆ ಇನ್ನು ಮುಂದೆ ಪ್ರಸಾದ, ದಾಸೋಹ ಮಾತ್ರವಲ್ಲದೆ ದೇವರಿಗಿಡುವ ನೈವೇದ್ಯ ತಯಾರಿಕೆ ಕೂಡ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಲಿದೆ. ಜತೆಗೆ ಇವುಗಳಿಗೆ ಉಪಯೋಗಿಸುವ ಆಹಾರ ಪದಾರ್ಥಗಳ ಗುಣಮಟ್ಟ ತಪಾಸಣೆ ಖಾತರಿಯಾದ ಬಳಿಕವಷ್ಟೇ ಬಳಸುವುದನ್ನು ಕಡ್ಡಾಯಗೊಳಿಸಲಾಗಿದೆ. ಸ್ವಯಂಪ್ರೇರಿತವಾಗಿ ದಾಸೋಹ, ಪ್ರಸಾದ ವಿತರಿಸ ಬಯಸುವವರು ಕೂಡ ಇನ್ನು ಮುಂದೆ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಎಷ್ಟು ಮಂದಿಗೆ, ಯಾವ ಪ್ರಸಾದ ವಿತರಿಸಲಾಗುತ್ತದೆ ಎಂಬ ಮಾಹಿತಿ ಜತೆಗೆ ಸಿದ್ಧಪಡಿಸಿದ ಪ್ರಸಾದ, ದಾಸೋಹದ ಮಾದರಿಯನ್ನು ಆರೋಗ್ಯ ಪರಿವೀಕ್ಷಕರು ಪರಿಶೀಲಿಸಿ ಖಾತರಿಪಡಿಸಿದ ಬಳಿಕವಷ್ಟೇ ವಿತರಿಸಬೇಕಾಗುತ್ತದೆ. ಹಾಗಾಗಿ ಇನ್ನು ಮುಂದೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇಗುಲಗಳಲ್ಲಿ ಏಕಾಏಕಿ ಪ್ರಸಾದ ವಿತರಿಸಲು ಅವಕಾಶ ಇರುವುದಿಲ್ಲ. ಪೂರ್ವಾನುಮತಿ, ಅಗತ್ಯ ದೃಢೀಕರಣದ ಬಳಿಕವಷ್ಟೇ ಪ್ರಸಾದ, ದಾಸೋಹ ವಿತರಣೆಗೆ ಅನುಮತಿ ಸಿಗಲಿದೆ.

ಸುತ್ತೋಲೆ ಪ್ರಮುಖ ಅಂಶಗಳು ಹೀಗಿವೆ 
ದೇವರ ನೈವೇದ್ಯ ಮತ್ತು ದಾಸೋಹಕ್ಕಾಗಿ ಇರುವ ಅಡುಗೆ ಕೋಣೆ ಸಿಸಿಟಿವಿ ಹೊಂದಿರಲೇಬೇಕು ಎಂದಿದೆ. ಅಡುಗೆ ಕೋಣೆಗೆ ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ಕಟ್ಟುನಿಟ್ಟಾಗಿ ನಿಗಾ ವಹಿಸಬೇಕು. ತಯಾ ರಿಸಿರುವ ನೈವೇದ್ಯ/ಅಡುಗೆ ಸ್ವೀಕರಿಸಲು ಯೋಗ್ಯವಾಗಿರುವ ಬಗ್ಗೆ ಖಚಿತಪಡಿಸಿಕೊಂಡ ಅನಂತರ ವಿತರಣೆ ಮಾಡಲು ಕ್ರಮ ವಹಿಸಬೇಕು. ದೇಗುಲದ ಪರಿಸರದಲ್ಲಿ ಭಕ್ತರೇ ಪ್ರಸಾದ ತಯಾರಿಸಿ ನೇರವಾಗಿ ವಿತರಿಸುವ ವಿಚಾರದಲ್ಲಿ ಪೂರ್ವಭಾವಿ ಅನುಮತಿ ಪಡೆಯಬೇಕು. ಭಕ್ತರಿಗೆ ವಿತರಿಸುವ ಮುನ್ನ ಆರೋಗ್ಯ ಇಲಾಖೆಯ ಆಹಾರ ಸುರಕ್ಷತಾ ತಂಡದಿಂದ ಪರೀಕ್ಷೆಗೆ ಒಳಪಡಿಸಿ ಪ್ರಸಾದವು ಸ್ವೀಕರಿಸಲು ಯೋಗ್ಯವಾಗಿರುವ ಬಗ್ಗೆ ದೃಢೀಕರಣ ಪಡೆದುಕೊಳ್ಳಬೇಕು.

ಪ್ರಸಾದದಲ್ಲಿ  ಸೇರಿದ್ದು  ಮೊನೋ ಕ್ರೋಟೋಪಾಸ್‌!
ಮೈಸೂರು: ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಸೇವನೆ ಘಟನೆಗೆ ಸಂಬಂಧಿಸಿದ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದಿದೆ. ಆಹಾರದಲ್ಲಿ ಕ್ರಿಮಿನಾಶಕ ಮೊನೋ ಕ್ರೋಟೋಪಾಸ್‌ನ ಆರ್ಗನೋ ಫಾಸ್ಪರಸ್‌ ಅಂಶ ಬೆರೆತಿರುವುದು ಪತ್ತೆಯಾಗಿದೆ. ತನಿಖೆ ಮುಂದುವರಿದಿರುವುದರಿಂದ ಕ್ರಿಮಿನಾಶಕ ಎಷ್ಟು ಪ್ರಮಾಣದಲ್ಲಿ ಬೆರೆತಿದೆ ಎಂಬುದನ್ನು ಈಗಲೇ ಬಹಿರಂಗಪಡಿಸಲಾಗುವುದಿಲ್ಲ ಎಂದು ದಕ್ಷಿಣ ವಲಯ ಐಜಿಪಿ ಶರತ್‌ಚಂದ್ರ ತಿಳಿಸಿದ್ದಾರೆ. ಜೆಎಸ್‌ಎಸ್‌ ಆಸ್ಪತ್ರೆ ಮತ್ತು ಕೆ.ಆರ್‌.ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಘಟನೆ ಸಂಬಂಧ ಸಾಕಷ್ಟು ಸುಳಿವು ಸಿಕ್ಕಿದ್ದು, 13 ಅಧಿಕಾರಿಗಳು ವಿವಿಧ ಕೋನಗಳಲ್ಲಿ ತನಿಖೆ ಮಾಡುತ್ತಿದ್ದಾರೆ. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ತನಿಖೆ ಉತ್ತಮ ಹಾದಿಯಲ್ಲಿ ನಡೆಯುತ್ತಿದೆ ಎಂದಷ್ಟೇ ಹೇಳಬಹುದು ಎಂದರು.

ಟಾಪ್ ನ್ಯೂಸ್

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.