Belagavi ಸುವರ್ಣ ವಿಧಾನಸೌಧಕ್ಕೆ ಸಭಾಪತಿ, ಸ್ಪೀಕರ್ ಭೇಟಿ, ಪರಿಶೀಲನೆ
Team Udayavani, Mar 19, 2024, 8:54 PM IST
ಬೆಳಗಾವಿ: ಸುವರ್ಣ ವಿಧಾನಸೌಧಕ್ಕೆ ಮಂಗಳವಾರ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುವರ್ಣ ವಿಧಾನಸೌಧದ ನಿರ್ವಹಣೆಯಲ್ಲಿ ಈ ಹಿಂದೆ ಕಂಡುಬಂದಿದ್ದ ಕೆಲವೊಂದು ನ್ಯೂನತೆಗಳನ್ನು ಸರಿಪಡಿಸಲು ನೀಡಲಾಗಿರುವ ನಿರ್ದೇಶನಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದ ವಿಧಾನಮಂಡಲದ ಚಳಿಗಾಲ ಅದಿವೇಶನದ ಸಂದರ್ಭದಲ್ಲಿ ಪರಿಷತ್ ಹಾಗೂ ವಿಧಾನಸಭೆಯ ಸಭಾಂಗಣ ನಿರ್ವಹಣೆಯ ಕುರಿತು ನೀಡಲಾಗಿರುವ ನಿರ್ದೇಶನಗಳನ್ನು ಪಾಲಿಸಬೇಕು ಎಂದರು.
ಡಿಸೆಂಬರ್‌ದಲ್ಲಿ ನಡೆದ ವಿಧಾನಮಂಡಲ ಅಧಿವೇಶನದ ಯಶಸ್ಸಿಗೆ ವಿವಿಧ ಸಮಿತಿಗಳ ಮುಖ್ಯಸ್ಥರು ಹಾಗೂ ಸದಸ್ಯರುಗಳು ಶ್ರಮಿಸುವ ಮೂಲಕ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಸಭಾಪತಿ ಹೊರಟ್ಟಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾದಿಕಾರಿ ನಿತೇಶ್ ಪಾಟೀಲ ನೇತೃತ್ವದಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಯ ಅದಿಕಾರಿಗಳು ಯಾವುದೇ ಅನಾನುಕೂಲ ಆಗದಂತೆ ಅದಿವೇಶನವನ್ನು ಯಶಸ್ವಿಯಾಗಿ ನಡೆಸಿದ್ದು, ಅವರೆಲ್ಲರೂ ಅಭಿನಂದನಾರ್ಹರು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಶೈಲ್ ಕಂಕಣವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಕರ್ನಾಟಕ ವಿಧಾನಸಭಾ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ವಿಧಾನಸಭೆ ಕಾರ್ಯದರ್ಶಿ ಮಹಾಲಕ್ಷ್ಮಿ, ಲೋಕೋಪಯೋಗಿ ಇಲಾಖೆಯ ಅದೀಕ್ಷಕ ಎಂಜಿನಿಯರ್ ಅರುಣಕುಮಾರ್ ಪಾಟೀಲ ಉಪಸ್ಥಿತರಿದ್ದರು.
ಇದನ್ನೂ ಓದಿ: Mangaluru: ಲೋಕಸಭಾ ಚುನಾವಣೆ ಹಿನ್ನೆಲೆ… ಮೂವರ ವಿರುದ್ಧ ಗೂಂಡಾ ಕಾಯಿದೆಯಡಿ ಪ್ರಕರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.