ಚನ್ನಮ್ಮನ ಕಿತ್ತೂರು: ಟೈರ್ ಟ್ಯೂಬ್ ಮೇಲೆ ಕುಳಿತು ಕೆರೆ ದಾಟುವ ಮಕ್ಕಳು!
Team Udayavani, Aug 7, 2024, 6:06 PM IST
ಉದಯವಾಣಿ ಸಮಾಚಾರ
ಚನ್ನಮ್ಮನ ಕಿತ್ತೂರು: ವಾಡಿಕೆಗಿಂತ ಹೆಚ್ಚು ಮಳೆಯಾದ ಕಾರಣ ತುಂಬಿ ಹರಿಯುತ್ತಿರುವ ಕೆರೆಯಲ್ಲಿ ವಿದ್ಯಾರ್ಥಿಗಳು ಟ್ರಾಕ್ಟರ್ ಟ್ಯೂಬ್ ಮೇಲೆ ಕುಳಿತು ದಾಟಿ ಪ್ರತಿನಿತ್ಯ ಶಾಲೆಗೆ ಹೋಗುತ್ತಿರುವ ಘಟನೆ ತಾಲೂಕಿನ ನಿಂಗಾಪೂರ ಗ್ರಾಮದಲ್ಲಿ
ವರದಿಯಾಗಿದೆ.
ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿರುವ ಕಾರಣ ಧಾರವಾಡ ತಾಲೂಕಿನ ಹುಲಿಕೇರಿ ಗ್ರಾಮದ ಕೆರೆ
ಸಂಪೂರ್ಣ ಭರ್ತಿಯಾಗಿದೆ. ಸುಮಾರು 93 ಎಕರೆ ವಿಸ್ತೀರ್ಣದ ಕೆರೆ ಇದಾಗಿದ್ದು, ಇದರ ಹಿನ್ನೀರು ಚನ್ನಮ್ಮನ ಕಿತ್ತೂರು ತಾಲೂಕಿನ ಕುಲವಳ್ಳಿ ಗ್ರಾಪಂ ವ್ಯಾಪ್ತಿಯ ನಿಂಗಾಪುರ್ ಗ್ರಾಮದ ತುಂಬೆಲ್ಲ ಆವರಿಸಿಕೊಂಡಿದ್ದರಿಂದ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿತ್ತು.
ಗ್ರಾಮಸ್ಥರು ಬೇರೆಡೆ ಹೋಗಬೇಕೆಂದರೆ ಹಳ್ಳದಲ್ಲಿ ಈಜಿ ಅಥವಾ ಟೈರ್ ಟ್ಯೂಬ್ ಮೇಲೇರಿ ಕೆರೆ ದಾಟಿ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ದಿನಂಪ್ರತಿ ಮಕ್ಕಳು ಪ್ರಾಣದ ಹಂಗು ತೊರೆದು ಟೈರ್ ಟ್ಯೂಬ್ ಮೇಲೆ ಶಾಲೆಗೆ ತೆರಳುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಇದನ್ನು ತಿಳಿದ ಶಾಸಕ ಬಾಬಾಸಾಹೇಬ ಪಾಟೀಲ ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಂಬಂಧಿತ ಇಲಾಖೆ ಅಧಿಕಾರಿಗಳ ಜತೆ ಮಾತನಾಡಿ ಎಸ್‌ಡಿಆರ್‌ಎಫ್ ತಂಡವನ್ನು ಕರೆಸಿ ಸುಮಾರು 8 ಜನರನ್ನು ಹೊತ್ತು ಸಾಗುವ ದೋಣಿ ವ್ಯವಸ್ಥೆ ಮಾಡಿದ್ದಾರೆ. ವಾಡಿಕೆಗಿಂತ ಹೆಚ್ಚು ಮಳೆಯಾದಾಗ ಇಂತಹ ಪರಿಸ್ಥಿತಿಗಳು ಉದ್ಭವವಾಗುತ್ತವೆ.ಯಾರೂ ಕೂಡ ಆತಂಕ ಪಡಬಾರದು. ಮುಂದಿನ ದಿನಗಳಲ್ಲಿ ಯಾವುದೇ ತರಹದ ತೊಂದರೆಯಾಗದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ
ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.