ಗಂಡು ಮಗು ಜನಿಸಲಿಲ್ಲವೆಂದು ನೆರೆಮನೆಯ ಗಂಡು ಮಗುವನ್ನು ಕೊಲೆಗೈದ ಮಹಿಳೆಗೆ ಜೀವಾವಧಿ ಶಿಕ್ಷೆ
Team Udayavani, Mar 16, 2023, 7:10 PM IST
ಚಿಕ್ಕೋಡಿ: ಗಂಡು ಮಗು ಜನಿಸಲಿಲ್ಲವೆಂದು ಹತಾಶೆಗೊಂಡು ಸಂಬಂಧಿಕರ ಗಂಡು ಮಗುವನ್ನು ನೀರಿನ ಬ್ಯಾರಲ್ ನಲ್ಲಿ ಮುಳುಗಿಸಿ ಕೊಲೆ ಮಾಡಿದ ಆರೋಪಿ ಮಹಿಳೆಗೆ ಚಿಕ್ಕೋಡಿ ಏಳನೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದೆ.
ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಜಯಶ್ರೀ ಬಾಹುಬಲಿ ಅಲಾಸೆ ಎಂಬ ಮಹಿಳೆಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ.
ಕಳೆದ ದಿ.24-8-2018 ರಂದು ಶೇಡಬಾಳ ಗ್ರಾಮದ ಕುರುಬರ ಗಲ್ಲಿಯ ರಾಜು ತಾತ್ಯಾಸಾಬ ಅಲಾಸೆ ಎಂಬುವವರ ಮಗುವನ್ನು ಆರೋಪಿತಳು ನನಗೆ ಗಂಡು ಮಗು ಜನಿಸಲಿಲ್ಲ ಎಂಬ ಹತಾಶೆಯಿಂದ ಕಾರ್ತಿಕ ಎಂಬ ಎರಡುವರೆ ವರ್ಷದ ಗಂಡು ಮಗುವನ್ನು ಮನೆಗೆ ಕರೆದುಕೊಂಡು ಹೋಗಿ ನೀರಿನ ಬ್ಯಾರೇಲ್ ಒಳಗೆ ಹಾಕಿ ಕೊಲೆ ಮಾಡಿರುವ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಚಿಕ್ಕೋಡಿ ಏಳನೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಡಸ್.ಎಲ್.ಚೌವ್ಹಾಣ ಅವರು ಆರೋಪಿತಳಾದ ಜಯಶ್ರೀ ಅಲಾಸೆಗೆ ಜೀವಾವಧಿ ಶಿಕ್ಷೆ ಮತ್ತು 5 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಅಭಿಯೋಜಕ ವೈ.ಜಿ.ತುಂಗಳ ವಾದ ಮಂಡಿಸಿದ್ದರು.
ಇದನ್ನೂ ಓದಿ: 55 ತಿಂಗಳ ಬಳಿಕ ತವರಿನಲ್ಲಿ ಬಿಜೆಪಿ ವೇದಿಕೆಯಲ್ಲಿ ಕಾಣಿಸಿಕೊಂಡ ಸ್ಪೀಕರ್ ಕಾಗೇರಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.