Chikkodi: ಶಿಕ್ಷಣ ಸಂಸ್ಥೆಗಳಿಗೆ ಸೌಲಭ್ಯ- ಹುಕ್ಕೇರಿ
34 ಲಕ್ಷ ರೂ ವೆಚ್ಚದಲ್ಲಿ 2 ಕೊಠಡಿ ನಿರ್ಮಾಣ ಮಾಡಲಾಗುತ್ತದೆ
Team Udayavani, Nov 11, 2023, 5:44 PM IST
ಚಿಕ್ಕೋಡಿ: ತಾಲೂಕಿನ ಮಜಲಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮಕ್ಕಳಿಗೆ ಅನುಕೂಲವಾಗಲು ಪ್ರತಿನಿತ್ಯ 4 ಬಸ್‌ಗಳನ್ನು ಬಿಡಬೇಕೆಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಕರ್ನಾಟಕ ದೆಹಲಿ ಪ್ರತಿನಿಧಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಸೂಚಿಸಿದರು.
ತಾಲೂಕಿನ ಮಜಲಟ್ಟಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ, ಉಪನ್ಯಾಸಕರು ಮತ್ತು ಎಸ್‌ಡಿಎಂಸಿ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.
ಮಜಲಟ್ಟಿ ಗ್ರಾಮದಲ್ಲಿ 4 ಸಾವಿರಕ್ಕೂ ಅಧಿಕ ಮಕ್ಕಳು ಸರ್ಕಾರಿ ಶಾಲೆ-ಕಾಲೇಜು ಕ್ಯಾಂಪಸ್‌ದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅದರಲ್ಲಿಯೂ ವಿಜ್ಞಾನ ವಿಭಾಗದಲ್ಲಿ 2 ಸಾವಿರಕ್ಕೂ ಅಧಿಕ ಮಕ್ಕಳು ವ್ಯಾಸಂಗ ಮಾಡುತ್ತಾರೆ. ಚಿಕ್ಕೋಡಿ ಮತ್ತು ಸಂಕೇಶ್ವರ
ಭಾಗದಿಂದ ಹೆಚ್ಚಿನ ಮಕ್ಕಳು ಮಜಲಟ್ಟಿಗೆ ಶಿಕ್ಷಣಕ್ಕೆ ಆಗಮಿಸುವುದರಿಂದ ಮಕ್ಕಳಿಗೆ ಬಸ್ಸಿನ ಕೊರತೆ ಇದೆ. ಹೀಗಾಗಿ ಮಕ್ಕಳಿಗೆ ಅನಾನುಕೂಲ ಆಗದಂತೆ ಪ್ರತಿನಿತ್ಯ 4 ಬಸ್‌ಗಳನ್ನು ಮಜಲಟ್ಟಿಗೆ ಬಿಡಬೇಕು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಜಲಟ್ಟಿ ಸರ್ಕಾರಿ ಗೋಮಾಳ ಜಾಗದಲ್ಲಿ ಬಸ್ ನಿಲ್ದಾಣ ಮಾಡಬೇಕೆಂಬ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಪ್ರಕಾಶ ಹುಕ್ಕೇರಿ ಅವರು, ಬಸ್ ನಿಲ್ದಾಣಕ್ಕೆ ಜಾಗ ನೀಡಬೇಕೆಂದು ತಹಶೀಲ್ದಾರ್‌ಗೆ ಸೂಚಿಸಿ ಶೀಘ್ರದಲ್ಲಿಯೇ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ ಮಾಡುವ ಭರವಸೆ ನೀಡಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಎರಡು ಕೊಠಡಿ ಮಂಜೂರು ಮಾಡಬೇಕೆಂದು ಉಪನ್ಯಾಸಕರ ಬೇಡಿಕೆಗೆ ಸ್ಪಂದಿ ಸಿದ ಅವರು, ತಕ್ಷಣ ಪ್ರಸ್ತಾವನೆ ಸಲ್ಲಿಸಿದರೆ ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ 34 ಲಕ್ಷ ರೂ ವೆಚ್ಚದಲ್ಲಿ 2 ಕೊಠಡಿ ನಿರ್ಮಾಣ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
ಬೆಳಗಾವಿ ಜಿಲ್ಲೆಯಲ್ಲಿಯೇ ಮಜಲಟ್ಟಿ ಶಿಕ್ಷಣದಲ್ಲಿ ಹೆಚ್ಚು ಪ್ರಗತಿ ಕಾಣುತ್ತಿದೆ. ಶೆ„ಕ್ಷಣಿಕವಾಗಿ ಮೂಲಭೂತ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ಪ್ರಕಾಶ ಹುಕ್ಕೇರಿ ತಿಳಿಸಿದರು.
ಉಪವಿಭಾಗಾಧಿಕಾರಿ ಎಸ್.ಎಸ್.ಸಂಪಗಾವಿ, ತಹಶೀಲ್ದಾರ್ ಸಿ.ಎಸ್.ಕುಲಕರ್ಣಿ, ಧುರೀಣ ರುದ್ರಪ್ಪ ಸಂಗಪ್ಪಗೋಳ, ಬಿಇಒ ಬಿ.ಎ.ಮೇಕನಮರಡಿ, ಪ್ರಾಚಾರ್ಯ ಆನಂದ ಕೋಳಿ, ಉಪಪ್ರಾಚಾರ್ಯ ಜೆ.ಪಿ.ತಂಗಡಿ, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾ ಧಿಕಾರಿ ಎಸ್.ಆರ್.ಮುಂಜಿ ಸೇರಿದಂತೆ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.