ರೆಸಾರ್ಟ್‌ ರಾಜಕಾರಣಕ್ಕೆ ರೈತರ ಕಿಡಿ

Team Udayavani, Jan 20, 2019, 10:29 AM IST

20-january-18.jpg

ಚಿಕ್ಕೋಡಿ: ಜಿಲ್ಲೆಯ ಅನೇಕ ತಾಲೂಕುಗಳಲ್ಲಿ ಬರಗಾಲ ಆವರಿಸಿದೆ. ಜನ ಕುಡಿಯುವ ನೀರಿಗೆ ಮತ್ತು ದನಕರುಗಳ ಮೇವಿಗಾಗಿ ಪರದಾಟ ಆರಂಭಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕ್ಷೇತ್ರದಲ್ಲಿದ್ದುಕೊಂಡು ಕೆಲಸ ಮಾಡುವುದನ್ನು ಬಿಟ್ಟು ಅಧಿಕಾರದ ಆಸೆಗಾಗಿ ರೆಸಾರ್ಟ್‌ ರಾಜಕಾರಣ ಮಾಡುವ ಶಾಸಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರೈತ ಸಂಘಟನೆ ಪದಾಧಿಕಾರಿಗಳು ಚಿಕ್ಕೋಡಿ ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ರೈತ ಸಂಘದ ವಕ್ತಾರ ತ್ಯಾಗರಾಜ ಕದಮ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಚಿಕ್ಕೋಡಿ ಲೋಕಸಭೆಯ ಎಂಟು ವಿಧಾನಸಭೆ ಕ್ಷೇತ್ರದ ಶಾಸಕರುಗಳ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ರೆಸಾರ್ಟಗೆ ಹೋಗಿರುವ ಶಾಸಕರೂ ಕೂಡಲೇ ಕ್ಷೇತ್ರಕ್ಕೆ ಆಗಮಿಸಿ ರೈತರ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದನೆ ನೀಡಬೇಕು ಎಂದು ಒತ್ತಾಯಿಸಿದರು.

ಶಾಸಕರ ಭಾವಚಿತ್ರಕ್ಕೆ ಬೆಂಕಿ: ಅಥಣಿ ಶಾಸಕ ಮಹೇಶ ಕುಮಟಳ್ಳಿ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ, ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಕುಡಚಿ ಶಾಸಕ ಪಿ.ರಾಜೀವ, ಚಿಕ್ಕೋಡಿ-ಸದಲಗಾ ಕ್ಷೇತ್ರದ ಶಾಸಕ ಗಣೇಶ ಹುಕ್ಕೇರಿ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ಹುಕ್ಕೇರಿ ಶಾಸಕ ಉಮೇಶ ಕತ್ತಿ, ಯಮಕನಮರಡಿ ಶಾಸಕ ಮತ್ತು ಸಚಿವ ಸತೀಶ ಜಾರಕಿಹೊಳಿ ಭಾವಚಿತ್ರಗಳಿಗೆ ರೈತ ಸಂಘಟನೆ ಕಾರ್ಯಕರ್ತರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದರು.

ಈ ವೇಳೆ ರೈತ ಸಂಘದ ವಕ್ತಾರ ತ್ಯಾಗರಾಜ ಕದಮ್‌ ಮಾತನಾಡಿ, ಸಮರ್ಪಕ ಮಳೆ ಆಗದೇ ಇರುವುದರಿಂದ ಜಿಲ್ಲೆಯಲ್ಲಿ ಬರ ಎದುರಾಗಿದೆ. ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸುವುದನ್ನು ಬಿಟ್ಟು ರೆಸಾರ್ಟ್‌ ರಾಜಕಾರಣ ಮಾಡುವ ಶಾಸಕರ ವಿರುದ್ಧ ರಾಜ್ಯಪಾಲರು ಶಿಸ್ತಿನ ಕ್ರಮ ಕೈಗೊಂಡು ಸ್ವಚ್ಚಂದ ಆಡಳಿತಕ್ಕೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸೇರಿದಂತೆ ಕನ್ನಡಪರ ಸಂಘಟನೆಗಳು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ರವೀಂದ್ರ ಪಟ್ಟೇಗಾರ, ಚಂದ್ರಶೇಖರ ಸಾರಂಗಿ, ಗಜು ಮತಾರೆ, ಶಂಕರ ವಡೇದ, ಅಪ್ಪಾಸಾಹೇಬ ಕುರಣೆ, ಆನಂದ ಪಾಶ್ಚಾಪೂರೆ, ಬಸವರಾಜ ಪಾಶ್ಚಾಪೂರೆ, ಮಹಾದೇವ ಸನದಿ, ಸತಿಗೌಡಾ ಪಾಟೀಲ ಸೇರಿದಂತೆ ರೈತ ಸಂಘಟನೆ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.