ಸಂಪ್ರದಾಯ ಬದಿಗೊತ್ತಿ ವಿಧವೆಯರಿಂದ ಗೃಹ ಪ್ರವೇಶ
Team Udayavani, Oct 20, 2018, 4:43 PM IST
ಚಿಕ್ಕೋಡಿ: ಮನೆ ನಿರ್ಮಿಸಿ ವಾಸ್ತು ಪೂಜೆ ನೆರವೇರಿಸಲು ಪೂಜೆ ಪುನಸ್ಕಾರ ನೆರವೇರಿಸಿ ಮಂಗಳಕರ ಧಾರ್ಮಿಕ ವಿಧಿ ವಿಧಾನಗಳು ನಡೆಸುವುದು ಸಾಮಾನ್ಯ. ಎಲ್ಲರೂ ನಂಬಿಕೊಂಡು ಬಂದ ಸಂಪ್ರದಾಯ. ಆದರೆ ಇಲ್ಲೊಬ್ಬರು ವಿಧವೆಯರಿಗೆ ಮಹಾನ್ ಪುರುಷರ ಭಾವಚಿತ್ರ ನೀಡಿ ಅವರಿಂದ ಗೃಹ ಪ್ರವೇಶ ಮಾಡುವ ಮೂಲಕ ವಿಧವೆಯರನ್ನು ಸಮಾಜ ಮುಖ್ಯವಾಹಿನಿಗೆ ತರಲು ವಿನೂತನ ಕಾರ್ಯ ಮಾಡಿದ್ದಾರೆ.
ಅಂಕಲಿ ಗ್ರಾಮದ ಸಮೀಪದಲ್ಲಿರುವ ರಾಯಬಾಗ ತಾಲೂಕಿನ ಬಾವನ ಸೌದತ್ತಿ ಗ್ರಾಮದ ರಾಜು ಮರಿನಾಯಿಕ ಎಂಬವರು ಹೊಸ ಮನೆ ನಿರ್ಮಿಸಿದ್ದು, ಅದರ ವಾಸ್ತು ಶುಕ್ರವಾರ ಹಮ್ಮಿಕೊಂಡಿದ್ದರು. ಇದಕ್ಕಾಗಿ ಅನೇಕ ಧಾರ್ಮಿಕ ವಿಧಿವಿಧಾನಗಳನ್ನು ಬದಿಗೊತ್ತಿದ ಅವರು, ಅಮಂಗಲಕರವೆಂದು ಭಾವಿಸಲಾದ ವಿಧವೆಯರ ಗೃಹ ಪ್ರವೇಶಕ್ಕೆ ಪ್ರಾತಿನಿಧ್ಯ ನೀಡಿದ್ದಾರೆ. ರಾಜು ಮರಿನಾಯಿಕ ಅವರು ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರ ನೇತೃತ್ವದ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತರು. ನಂತರ ರಾಜು ಮರಿನಾಯಿಕ ಮನೆಗೆ ಆಗಮಿಸಿದ ಮಾಜಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಮೂಢನಂಬಿಕೆ ನಿವಾರಿಸಲು ಅನೇಕ ಮಹಾತ್ಮರು ಹೋರಾಟ ಮಾಡಿದ್ದಾರೆ. ಆದರೂ ನಮ್ಮ ಜನ ಇವುಗಳ ಮೇಲೆ ಅಗಾಧ ನಂಬಿಕೆ ಇಟ್ಟುಕೊಂಡಿದ್ದು, ಇದನ್ನು ಹೋಗಲಾಡಿಲು ಇಂತಹ ವಿಶಿಷ್ಟ ಕಾರ್ಯಗಳು ನಡೆಯುವ ಮೂಲಕ ಯುವ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕು ಎಂದರು.
ಬುದ್ಧ, ಬಸವ, ಅಂಬೇಡ್ಕರ್ ಆದರ್ಶಗಳನ್ನು ಪಾಲನೆ ಮಾಡಿದ್ದೇ ಆದರೆ ಧರ್ಮಗಳ ಮಧ್ಯೆ ಸಂಘರ್ಷ ನಡೆಯುತ್ತಿರಲಿಲ್ಲ, ಅವರ ವಿಚಾರ, ಆದರ್ಶಗಳನ್ನು ತಿಳಿಸುವ ಉದ್ದೇಶದಿಂದ ಮಾನವ ಬಂಧುತ್ವ ವೇದಿಕೆ ಮೂಲಕ ಮೂಡನಂಭಿಕೆ ತೆಗೆದುಹಾಕುವ ಕಾರ್ಯಗಳು ನಡೆಯುತ್ತಿವೆ. ಸ್ಮಶಾನ ಕಾರ್ಯಕ್ರಮ, ಪುರೋಹಿತರು ಇಲ್ಲದೇ ಗೃಹ ಪ್ರವೇಶ, ಅಮವಾಸ್ಯೆ ದಿನ ಅಭಿವೃದ್ಧಿ ಕಾರ್ಯಗಳ ಚಾಲನೆ ಹೀಗೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು. ಮನೆ ವಾಸ್ತು ಪೂಜೆಗೆ ಮಾಡುವ ವೆಚ್ಚವನ್ನು ಕಡಿಮೆ ಮಾಡಿ ಅದೇ ಹಣದಲ್ಲಿ ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡಬೇಕು ಎಂದರು. ಈರಗೌಡ ಪಾಟೀಲ, ಮಹಾವೀರ ಮೋಹಿತೆ, ದುಳಗೌಡ ಪಾಟೀಲ, ಸದಾಶಿವ, ರಾಜು ನಾಯ್ಕರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.