ಚಿಕ್ಕೋಡಿ: ಮರುಭೂಮಿಯಂತಾದ ಕೃಷ್ಣೆ ಒಡಲು ಕುಡಿಯುವ ನೀರಿಗೂ ತತ್ವಾರ
ಮಳೆ ಆಗದೇ ಇರುವುದು ದೊಡ್ಡ ಸಮಸ್ಯೆಯ ಸುಳಿಗೆ ಸಿಲುಕಿದ್ದಾರೆ.
Team Udayavani, Jun 20, 2023, 6:38 PM IST
ಚಿಕ್ಕೋಡಿ: ಜೂನ ತಿಂಗಳು ಮೂರನೆ ವಾರ ಕಳೆಯುತ್ತಾ ಬಂದರೂ ಮುಂಗಾರು ಮಳೆ ಆಗುತ್ತಿಲ್ಲ. ಇದರಿಂದ ಗಡಿ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೆ ಏರಿದೆ. ಚಿಕ್ಕೋಡಿ. ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಗಳ ಜೀವನಾಡಿ ಕೃಷ್ಣಾ ನದಿ ಬತ್ತಿ ಬರಡಾಗಿದೆ. ಅನ್ನದಾತರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಚಿಕ್ಕೋಡಿ, ಕಾಗವಾಡ, ರಾಯಬಾಗ ಮತ್ತು ಅಥಣಿ ತಾಲೂಕಿನ ನಗರ, ಪಟ್ಟಣ ಪ್ರದೇಶ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನೀರು ಪೂರೈಕೆ ಮಾಡುವ ಯೋಜನೆಗಳು ಸ್ಥಗಿತಗೊಂಡಿವೆ. ಚಿಕ್ಕೋಡಿ ತಾಲೂಕಿನ ಕೆಲವು ಗ್ರಾಮಗಳ ಹತ್ತಿರ ತಗ್ಗು ಪ್ರದೇಶದಲ್ಲಿ ಕೃಷ್ಣಾ ನದಿ ನೀರು ಇದ್ದು. ಉಳಿದ ಕಡೆ ನದಿ ಬತ್ತಿ ಬರಿದಾಗಿದೆ. ಇದರಿಂದ ಜನ- ಜಾನುವಾರಗಳಿಗೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.
1500 ಕ್ಯೂಸೆಕ್ ನೀರು ಖಾಲಿ ಖಾಲಿ: ಕಳೆದ ವಾರದ ಹಿಂದೆಯಷ್ಟೇ ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್ ಮೂಲಕ ರಾಜ್ಯಕ್ಕೆ 1500 ಕ್ಯೂಸೆಕ್ ನೀರು ಬಂದಿತ್ತು. ಆ ನೀರು ಚಿಕ್ಕೋಡಿ ತಾಲೂಕಾ ಗಡಿಯವರೆಗೆ ಮಾತ್ರ ತಲುಪಿದವು. ಉಳಿದ ಕಾಗವಾಡ, ಅಥಣಿ, ಕುಡಚಿ ಭಾಗದಲ್ಲಿ ಕೃಷ್ಣಾ ನದಿ ನೀರು ಇಲ್ಲದೇ ಮರುಭೂಮಿಯಂತಾಗಿದೆ.
ಕೋಯ್ನಾ ಜಲಾಶಯದಲ್ಲಿ ನೀರು ಇಳಿಕೆ: ರಾಜ್ಯದ ಕೃಷ್ಣಾ ನದಿಗೆ ನೀರು ಬರುವ ಮಹಾರಾಷ್ಟ್ರದ ಕೋಯ್ನಾ ಜಲಾಶಯದಲ್ಲಿ ಸದ್ಯ 11 ಟಿಎಂಸಿ ನೀರು ಮಾತ್ರ ಇದೆ ಎಂದು ಅಲ್ಲಿನ ನೀರಾವರಿ ಇಲಾಖೆ ಮಾಹಿತಿ ನೀಡಿದೆ. 103 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿರುವ ಕೋಯ್ನಾ ಜಲಾಶಯದಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವುದು ಮಹಾರಾಷ್ಟ್ರ ಮತ್ತು ಕರ್ನಾಟಕ ರೈತರಲ್ಲಿ ಆತಂಕ ಹೆಚ್ಚಿಸಿದೆ.
ಜೂನ್ ತಿಂಗಳ ಮೊದಲ ವಾರದಲ್ಲಿ ಕೊಂಕಣ ಭಾಗದಲ್ಲಿ ಮಳೆ ಆಗುತ್ತಿತ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಕೂಡ ಮಳೆ ವಾತಾವರಣ ಇಲ್ಲವಾಗಿದೆ. ಮಳೆ ನೋಡಿಕೊಂಡು ಮಹಾರಾಷ್ಟ್ರ ನೀರಾವರಿ ಇಲಾಖೆ ಅ ಧಿಕಾರಿಗಳು ಕೃಷ್ಣಾ ನದಿಗೆ ನೀರು ಬಿಡುತ್ತಾರೆ. ಆದರೆ ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿಯೇ ಮಳೆ ಇಲ್ಲದೇ ಇರುವುದು ಸಮಸ್ಯೆ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ.
ನೀರು ಇಲ್ಲದೆ ಒಣಗಿದ ಬೆಳೆಗಳು: ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಕುಡಚಿ, ರಾಯಬಾಗ, ಅಥಣಿ ಮತ್ತು ಚಿಕ್ಕೋಡಿ ತಾಲೂಕಿನ ಮಡ್ಡಿ ಪ್ರದೇಶಗಳಲ್ಲಿ ನೀರು ಇಲ್ಲದೆ ಕಬ್ಬು ಒಣಗಿ ಹೋಗಿವೆ. ಸಾಲ ಸೋಲ ಮಾಡಿ ಬೆಳೆಸಿದ ರೈತನ ಹೊಟ್ಟೆಯ ಮೇಲೆ ಬರೆ ಎಳೆದಂತಾಗಿದೆ. ಕಳೆದ ಎರಡು ಮೂರು ವರ್ಷದಲ್ಲಿ ಕೊರೊನಾ, ಅತಿವೃಷ್ಟಿಯಿಂದ ಕಂಗೆಟ್ಟಿರುವ ರೈತನಿಗೆ ಈಗ ಮಳೆ ಆಗದೇ ಇರುವುದು ದೊಡ್ಡ ಸಮಸ್ಯೆಯ ಸುಳಿಗೆ ಸಿಲುಕಿದ್ದಾರೆ.
ಕೋಯ್ನಾ ಮತ್ತು ವಿವಿಧ ಡ್ಯಾಂಗಳಿಂದ ಕೃಷ್ಣಾ ನದಿಗೆ ನೀರು ಹರಿಸಬೇಕೆಂದು ಗಡಿ ಭಾಗದ ರೈತರು ಸರಕಾರಕ್ಕೆ ಒತ್ತಾಯಿಸಿದ್ದಾರೆ. ಕೃಷ್ಣಾ ನದಿಗೆ ನೀರು ಹರಿಸಬೇಕೆಂದು ಈಗಾಗಲೇ ಮಹಾರಾಷ್ಟ್ರ ಸರಕಾರಕ್ಕೆ ಮುಖ್ಯಮಂತ್ರಿ
ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ನದಿ ನೀರಿನ ಮಟ್ಟ ಕಡಿಮೆ ಆದಾಗ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಈಗಾಗಲೇ ಎರಡು ಬಾರಿ ನೀರು ಬಿಡಿಸಿಕೊಂಡು ಬಂದಿದ್ದಾರೆ. ಆದರೂ ಚಿಕ್ಕೋಡಿ ಉಪವಿಭಾಗದ ಗಡಿಯವರೆಗೆ ನೀರು ಹೋಗದೇ ಇರುವುದು ರೈತರಿಗೆ ಸಮಸ್ಯೆಯುಂಟಾಗಿದೆ. ರಾಜ್ಯ ಸರಕಾರ ಸೂಕ್ತ ಗಮನ ಹರಿಸಿ ನದಿಗೆ ನೀರು ಬಿಡಿಸಲು ಎಲ್ಲ ಜನಪ್ರತಿನಿ ಧಿಗಳು ಪ್ರಯತ್ನ ಮಾಡಬೇಕು ಎಂದು ರೈತ ಮುಖಂಡ ಮಂಜುನಾಥ ಪರಗೌಡ ಒತ್ತಾಯಿಸಿದ್ದಾರೆ.
*ಮಹಾದೇವ ಪೂಜೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.