ಚಿಕ್ಕೋಡಿ ಲೋಕಸಭೆ ಫಲಿತಾಂಶ: ತಂಗಿ ಎದುರು ಸೋಲನುಭವಿಸಿದ “ಅಣ್ಣಾ”
ನಿವೃತ್ತ ಐಎಎಸ್ ಅಧಿಕಾರಿ ಶಂಭು ಕಲ್ಲೋಳಕರ 25,351 ಮತಗಳನ್ನು ಪಡೆಯುವಲ್ಲಿ ಶಕ್ತರಾಗಿದ್ದಾರೆ.
Team Udayavani, Jun 5, 2024, 1:40 PM IST
ಉದಯವಾಣಿ ಸಮಾಚಾರ
ಚಿಕ್ಕೋಡಿ: ಮೇ 7ರಂದು ನಡೆದ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ವಿರುದ್ಧ ಯುವ ನಾಯಕಿ 27 ವರ್ಷದ ಪ್ರಿಯಾಂಕಾ ಸತೀಶ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸಿ ದಾಖಲೆ ಬರೆದಿದ್ದಾರೆ.
ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ವಿರುದ್ಧ 90,834 ಮತಗಳ ಅಂತರದಿಂದ ಜಯ ಗಳಿಸಿದರು. ಕಾಂಗ್ರೆಸ್-ಬಿಜೆಪಿ ಗೆಲುವಿಗೆ ಭಾರಿ ಕಸರತ್ತು ನಡೆಸಿದ್ದವು. ಅಂತಿಮವಾಗಿ ಮತದಾರರು ಕಾಂಗ್ರೆಸ್‌ಗೆ ಜೈ ಎಂದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 71,3461 ಮತ ಪಡೆದರೆ, ಪ್ರತಿಸ್ಪರ್ಧಿ ಅಣ್ಣಾಸಾಹೇಬ ಜೊಲ್ಲೆ 6,22,627 ಮತ ಪಡೆದಿದ್ದಾರೆ. ತೀವ್ರ ಸಂಚಲನ ಮೂಡಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಶಂಭು ಕಲ್ಲೋಳಕರ 25,351 ಮತಗಳನ್ನು ಪಡೆಯುವಲ್ಲಿ ಶಕ್ತರಾಗಿದ್ದಾರೆ.
ಕಾಂಗ್ರೆಸ್‌ಗೆ ಜೈ ಎಂದ ಮತದಾರ:
ಬಿಜೆಪಿ 10ನೇ ಸುತ್ತಿನಲ್ಲಿ 1194 ಮತಗಳ ಮುನ್ನಡೆ ಪಡೆಯಿತು. ನಂತರ 17ನೇ ಸುತ್ತಿನಲ್ಲಿ 2406 ಮತಗಳಿಂದ ಮುನ್ನಡೆ ಸಾಧಿಸಿತ್ತು. ಅಂಚೆ ಮತದಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರು 4459 ಮತ ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ 2638 ಮತ ಪಡೆದರು.
ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಎರಡನೇ ಬಾರಿಗೆ ಪುರುಷ ಅಭ್ಯರ್ಥಿ ವಿರುದ್ಧ ಮಹಿಳೆ ಗೆಲುವು ಸಾಧಿ ಸಿರುವುದು ಇತಿಹಾಸ. ಈ ಹಿಂದೆ ಏಳು ಬಾರಿ ಸಂಸತ್ ಸದಸ್ಯರಾಗಿದ್ದ ಬಿ.ಶಂಕರಾನಂದ ವಿರುದ್ಧ ರತ್ನಮಾಲಾ ಸವಣೂರ ಪ್ರಥಮ ಬಾರಿಗೆ ಗೆಲುವು ಸಾಧಿಸಿದ್ದರು. ಎರಡನೇ ಬಾರಿಗೆ ಅಣ್ಣಾಸಾಹೇಬ ಜೊಲ್ಲೆ ವಿರುದ್ಧ ಪ್ರಿಯಾಂಕಾ ಜಾರಕಿಹೊಳಿ ಗೆಲುವು ಸಾಧಿಸಿ ಸಂಸತ್ತು ಪ್ರವೇಶಿಸಿದ್ದಾರೆ.
2019ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ವಿರುದ್ಧ ಸ್ಪರ್ಧಿಸಿದ್ದ ಅಣ್ಣಾಸಾಹೇಬ ಜೊಲ್ಲೆ ಅವರು 1,18,877 ಮತಗಳ ಅಂತರದಿಂದ ಗೆದ್ದು ಸಂಸತ್ತು ಪ್ರವೇಶಿಸಿದ್ದರು.
ಮತ ಎಣಿಕೆ ಕೇಂದ್ರದತ್ತ ಸುಳಿಯದ ಅಭ್ಯರ್ಥಿಗಳು
ಲೋಕಸಭೆ ಚುನಾವಣೆ ಮತ ಎಣಿಕೆ ಮುಕ್ತಾಯವಾದರೂ ಮತ ಎಣಿಕೆ ಕೇಂದ್ರಕ್ಕೆ ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿಗಳು ಬರಲಿಲ್ಲ. ಕಾರ್ಯಕರ್ತರು, ಮಾಧ್ಯಮದವರು ಅವರ ದಾರಿ ಕಾಯ್ದು ಸುಸ್ತಾದರು. ಅಂತಿಮ ಫಲಿತಾಂಶ ಬಂದ ಬಳಿಕ ವಿಜೇತ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿ ಪ್ರಮಾಣ ಪತ್ರ ಪಡೆದರು.
■ ಮಹಾದೇವ ಪೂಜೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Andhra: ʼಗೇಮ್ ಚೇಂಜರ್ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
South Korea: ಅಧ್ಯಕ್ಷ ಯೂನ್ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!
ಕಾರ್ಕಳ ನಗರದಲ್ಲೂ ನೆಟ್ ಕಿರಿಕಿರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.