ನಿರ್ವಹಣೆಯಿಲ್ಲದೇ ಹಾಳು ಬಿದ್ದ ಘಟಕಗಳು
63 ಗ್ರಾಪಂಗಳಲ್ಲಿವೆ 185 ಶುದ್ಧ ನೀರಿನ ಘಟಕನೂರಾರು ಕೋಟಿ ವ್ಯಯವಾದರೂ ಸಿಗದ ಲಾಭ
Team Udayavani, Mar 11, 2020, 2:03 PM IST
ಚಿಕ್ಕೋಡಿ: ಗ್ರಾಮೀಣ ಜನರು ಶುದ್ಧ ನೀರು ಕುಡಿದು ಆರೋಗ್ಯವಾಗಿರಬೇಕೆಂದು ರಾಜ್ಯ ಸರ್ಕಾರ ಪ್ರತಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅಳವಡಿಸಿದೆ. ಆದರೆ ಎಲ್ಲೆಡೆ ಅಳವಡಿಸಿರುವ ಶುದ್ಧ ನೀರಿನ ಘಟಕಗಳಿಗೆ ಸಮರ್ಪಕ ನಿರ್ವಹಣೆ ಇಲ್ಲದೇ ಇಂದು ಅಶುದ್ಧ ನೀರಿನ ಘಟಕಗಳಾಗಿ ಬಾಗಿಲು ಮುಚ್ಚಿಕೊಂಡಿವೆ.
ಹಿಂದಿನ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಎಚ್.ಕೆ. ಪಾಟೀಲ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಿದ್ದ ವೇಳೆಯಲ್ಲಿ ಗ್ರಾಮೀಣ ಭಾಗದ ಜನರು ಶುದ್ಧ ಕುಡಿಯುವ ನೀರು ಸೇವನೆ ಮಾಡಬೇಕೆಂದು ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜನಸಂಖ್ಯೆ ಅನುಗುಣವಾಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅಳವಡಿಸಲಾಗಿತ್ತು. ಆದರೆ ಆರಂಭದಲ್ಲಿ ಒಂದು ಅಥವಾ ಎರಡು ತಿಂಗಳ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಶುದ್ಧ ನೀರಿನ ಘಟಕಗಳು ಇಂದು ನೂರಾರು ಸಂಖ್ಯೆಯಲ್ಲಿ ಸಮರ್ಪಕ ನಿರ್ವಹಣೆ ಇಲ್ಲದೇ ಬಾಗಿಲು ಮುಚ್ಚಿಕೊಂಡಿವೆ. ಸರ್ಕಾರದ ನೂರಾರು ಕೋಟಿ ರೂ. ನೀರಿನಲ್ಲಿ ಹೋಮ ಮಾಡಿದಂತಾಗಿದೆ.
ಚಿಕ್ಕೋಡಿ ತಾಲೂಕಿನಲ್ಲಿವೆ 185 ಘಟಕಗಳು: ರಾಜ್ಯದಲ್ಲಿಯೇ ಅತಿ ದೊಡ್ಡ ಚಿಕ್ಕೋಡಿ ತಾಲೂಕಿನ 63 ಗ್ರಾಮ ಪಂಚಾಯತಗಳಲ್ಲಿ 185 ಶುದ್ಧ ನೀರಿನ ಘಟಕಗಳನ್ನು ಸರ್ಕಾರ ಅಳವಡಿಸಿದೆ. 185ರಲ್ಲಿ ಅರ್ಧಕ್ಕಿಂತ ಹೆಚ್ಚಿಗೆ ನೀರಿನ ಘಟಕಗಳು ನಿರ್ವಹಣೆ ಇಲ್ಲದೇ ಹಾಳು ಬಿದ್ದಿವೆ. ಕೆಲ ಗ್ರಾಮಗಳಲ್ಲಿ ಘಟಕಗಳನ್ನು ಅಳವಡಿಸಿ ಮರಳಿ ಪ್ರಾರಂಭ ಮಾಡದೇ ಇರುವ ಉದಾಹರಣೆ ನೋಡಲು ಸಿಗುತ್ತದೆ.
185ರಲ್ಲಿ ಕೇವಲ 7 ಘಟಕಗಳು ಮಾತ್ರ ಬಂದ್ ಇದ್ದು, ಉಳಿದೆಲ್ಲವೂ ಚಾಲ್ತಿಯಲ್ಲಿವೆ ಎಂದು ಸ್ಥಳೀಯ ಅಧಿಕಾರಿಗಳು ಸರ್ಕಾರಕ್ಕೆ ವರದಿ ನೀಡುತ್ತಲೇ ಬಂದಿದ್ದಾರೆ. ಈಗಾಗಲೇ ತಾಲೂಕಿನ ಕರಗಾಂವ ಗ್ರಾಪಂ ವ್ಯಾಪ್ತಿಯ ಹಂಚನಾಳ ಕೆಕೆ, ನಾಗರಮುನ್ನೋಳ್ಳಿ, ಉಮರಾಣಿ, ಭೀಮಾಪುರವಾಡಿ, ಡೋಣೆವಾಡಿ, ಇಟ್ನಾಳ, ಭೋಜವಾಡಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಬಂದ್ ಇವೆ.
ಘಟಕಗಳಿಗೆ ಬೀಗ: ಆರಂಭದಲ್ಲಿ ಖಾಸಗಿ ಏಜನ್ಸಿಗಳು ಘಟಕಗಳನ್ನು ಅಳವಡಿಸಿ ಗ್ರಾಮ ಪಂಚಾಯತಿಗೆ ಹಸ್ತಾಂತರಿಸಿ ಹೋಗಿವೆ. ಶುದ್ಧ ನೀರಿನ ಘಟಕಗಳ ಏನೇ ನಿರ್ವಹಣೆ ಇದ್ದರೂ ಅದನ್ನು ಅಳವಡಿಸಿರುವ ಖಾಸಗಿ ಏಜನ್ಸಿಯವರೇ ಮಾಡಬೇಕಿತ್ತು. ಆದರೆ ಘಟಕಗಳ ನಿರ್ವಹಣೆ ವೆಚ್ಚ ದುಬಾರಿಯಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಮರಳಿ ನೋಡಿಲ್ಲ, ಹೀಗಾಗಿ ಘಟಕಗಳಿಗೆ ಬೀಗ ಬಿದ್ದಿವೆ. ಮತ್ತೆ ಸರ್ಕಾರ ನಿರ್ವಹಣೆ ಮಾಡಲು ಲ್ಯಾಂಡ್ ಆರ್ಮಿಗೆ ವಹಿಸಿತ್ತು. ಆದರೂ ಅದು ಸಮರ್ಪಕ ನಿರ್ವಹಣೆ ಆಗದೇ ಇರುವುದರಿಂದ ಈಗ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯವರು ಜವಾಬ್ದಾರಿ ಹೊತ್ತುಕೊಂಡು ಪಾಳು ಬಿದ್ದ ನೀರಿನ ಘಟಕಗಳನ್ನು ದುರಸ್ತಿಗೊಳಿಸುವ ಕೆಲಸ ಮಾಡುತ್ತಿದ್ದಾರೆ.
ನಿರ್ವಹಣೆ ಸಮಸ್ಯೆ: ಶುದ್ಧ ಕುಡಿಯುವ ನೀರು ಘಟಕಗಳ ಬಹುಮುಖ್ಯ ಸಮಸ್ಯೆ ಎಂದರೆ ನಿರ್ವಹಣೆ. ಖಾಸಗಿ ಸಂಸ್ಥೆಗಳು ಅಳವಡಿಸಿದ ಘಟಕಗಳನ್ನು 5 ವರ್ಷ ಅವರೇ ನಿರ್ವಹಣೆ ಮಾಡಬೇಕಿತ್ತು. ಸಹಕಾರ ಸಂಘಗಳು ಅಳವಡಿಸಿದ ಘಟಕಗಳನ್ನು ಅವರೇ ನಿರ್ವಹಣೆ ಮಾಡಬೇಕು ಮತ್ತು ಕೆಆರ್ ಐಡಿಸಿಎಲ್ ಅಳವಡಿಸಿರುವ ಘಟಕಗಳನ್ನು ಸ್ಥಳೀಯ ಗ್ರಾಮ ಪಂಚಾಯತ್‌ದವರು ನಿರ್ವಹಣೆ ಮಾಡಬೇಕಿತ್ತು. ಆದರೆ ಘಟಕಗಳ ನಿರ್ವಹಣೆಗೆ ವೆಚ್ಚ ಮತ್ತು ಸಿಬ್ಬಂದಿ ವೇತನ ಭರಿಸಬೇಕಾದ ಹೊರೆ ಗ್ರಾಮ ಪಂಚಾಯತಿಗೆ ಬಿದ್ದಿರುವ ಪರಿಣಾಮ ಗ್ರಾಮ ಪಂಚಾಯತ್ ಅಧಿಕಾರಿಗಳು ಘಟಕಗಳ ನಿರ್ವಹಣೆಗೆ ಮೀನಾಮೇಷ ಅನುಸರಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಈಗ ಎಲ್ಲ ಘಟಕಗಳ ನಿರ್ವಹಣೆಯ ಹೊಣೆಯನ್ನು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗೆ ನೀಡಿದೆ. ಹಾಳಾದ ಘಟಕಗಳನ್ನು ದುರಸ್ತಿಗೊಳಿಸಿ ಸಮರ್ಪಕ ನಿರ್ವಹಣೆ ಮಾಡಲಾಗುತ್ತದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಹೇಳುತ್ತಾರೆ.
ತಾಲೂಕಿನಲ್ಲಿ ಅಳವಡಿಸಿರುವ ಶುದ್ಧ ನೀರಿನ ಘಟಕಗಳು ನಿರ್ವಹಣೆ ಇಲ್ಲದೇ ಬಂದ್ ಬಿದ್ದಿವೆ. ಸರ್ಕಾರ ಸೂಕ್ತ ನಿರ್ವಹಣೆ ಮಾಡಿ ಜನರಿಗೆ ನೀರು ಕೊಡಬೇಕು. ಸ್ಥಳೀಯ ಉಮರಾಣಿ ಗ್ರಾಮದಲ್ಲಿ ಅಳವಡಿಸಿರುವ ಘಟಕ ಬಂದ್ ಆಗಿ ಎರಡು ವರ್ಷ ಕಳೆದಿದೆ. ಇನ್ನೂ ದುರಸ್ತಿಯಾಗಿಲ್ಲ, ಕೂಡಲೇ ಅಧಿಕಾರಿಗಳು ಸೂಕ್ತ ಗಮನ ಹರಿಸಿ ಶುದ್ಧ ನೀರು ಕೊಡಲು ಮುಂದೆ ಬರಬೇಕು. ಮುರಿಗೆಪ್ಪ ಅಡಿಸೇರಿ
ಮಾಜಿ ಅಧ್ಯಕ್ಷರು ಉಮರಾಣಿ
ಚಿಕ್ಕೋಡಿ ತಾಲೂಕಿನ 185 ಘಟಕಗಳಲ್ಲಿ ಈಗ ಎಲ್ಲವನ್ನೂ ದುರಸ್ತಿಗೊಳಿಸಲಾಗಿದೆ. ಏಳು ಘಟಕಗಳನ್ನು ದುರಸ್ತಿ ಮಾಡಬೇಕಿದೆ. ಬರುವ ಒಂದು ವಾರದೊಳಗೆ ಎಲ್ಲ ಘಟಕಗಳನ್ನು ದುರಸ್ತಿಗೊಳಿಸಲಾಗುತ್ತದೆ. ನಿರ್ವಹಣೆ ಮಾಡಲು ಖಾಸಗಿ ಏಜೆನ್ಸಿಗೆ ಟೆಂಡರ್ ಕೊಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಗ್ರಾಮೀಣ ಜನರು ಸಹ ಸಮರ್ಪಕವಾಗಿ ನೀರು ಬಳಕೆ ಮಾಡಿಕೊಳ್ಳಬೇಕು.
ಆನಂದ ಬಣಕಾರ,
ಎಇಇ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ
ಮಹಾದೇವ ಪೂಜೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.