ರೋಮಾಂಚನ ಮೂಡಿಸಿದ ಟಗರಿನ ಕಾಳಗ

Team Udayavani, Dec 20, 2018, 4:39 PM IST

20-december-17.gif

ಚಿಕ್ಕೋಡಿ: ಚಿಕ್ಕೋಡಿ ಜಿಲ್ಲಾ ಮಟ್ಟದ ಕನಕದಾಸ ಜಯಂತಿ ಉತ್ಸವದ ಅಂಗವಾಗಿ ನಾಗರಮುನ್ನೋಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮೈದಾನದಲ್ಲಿ ಹಮ್ಮಿಕೊಂಡ ಅಂತಾರಾಜ್ಯ ಮಟ್ಟದ ಭವ್ಯ ಟಗರಿನ ಕಾಳಗ ನೆರೆದ ಜನರಲ್ಲಿ ರೋಮಾಂಚನ ಮೂಡಿಸಿ ತುದಿಗಾಲಲ್ಲಿ ನಿಂತು ನೋಡುವಂತೆ ಮಾಡಿತು.

ಗ್ರಾಮದಲ್ಲಿ ಮಂಗಳವಾರ ಸಂಜೆ ಆರಂಭವಾದ ಭವ್ಯ ಟಗರಿನ ಕಾಳಗ ಬುಧವಾರ ಬೆಳಗ್ಗೆ 10 ಗಂಟೆಯವರೈಗೂ ನಡೆಯಿತು. ಕಾಳಗದಲ್ಲಿ ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಶಿವಮೊಗ್ಗ, ಬೆಂಗಳೂರು, ವಿಜಯಪುರ, ನೆರೆ ರಾಜ್ಯಗಳಾದ ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ, ಪುಣೆ, ಮುಂಬಯಿ, ಆಂಧ್ರದಿಂದ ಸುಮಾರು 300ಕ್ಕೂ ಹೆಚ್ಚಿನ ಟಗರುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು ಬಿರುಸಿನ ಸೆಣಸಾಟ ನಡೆಸಿದವು.

ಅಂತಾರಾಜ್ಯ ಮಟ್ಟದ ಟಗರಿನ ಕಾಳಗ ವೀಕ್ಷಿಸಲು ಚಿಕ್ಕೋಡಿ ಜಿಲ್ಲೆಯ ಮತ್ತು ನೆರೆಯ ಬಾಗಲಕೋಟೆ ಜಿಲ್ಲೆಯ ಸಾವಿರಾರು ಸಂಖ್ಯೆಯ ಜನರು ಆಗಮಿಸಿ ಸ್ಪರ್ಧಾಕಣಕ್ಕೆ ರಂಗೇರಿಸಿದರು. ಸ್ಪರ್ಧೆ ಫಲಿತಾಂಶ: ಟಗರಿನ ಕಾಳಗದಲ್ಲಿ ಐದು ವಿಭಾಗದಲ್ಲಿ ಸ್ಪರ್ಧೆ ನಡೆಯಿತು. ಹಾಲು ಹಲ್ಲಿನ ಟಗರಿನ ಕಾಳಗದಲ್ಲಿ ದುರ್ಗಾ ಪರಮೇಶ್ವರಿ ಗುತ್ತಿಗುಳಿ ಟಗರು ಪ್ರಥಮ, ಅಪ್ಪಾಜಿ ಆಶೀರ್ವಾದ ಬೆಲ್ಲದ ಬಾಗೇವಾಡಿ ಟಗರು ದ್ವಿತೀಯ ಸ್ಥಾನ ಪಡೆಯಿತು.

ಎರಡು ಹಲ್ಲಿನ ಟಗರಿನ ಕಾಳಗದಲ್ಲಿ ವೀರಸಿದ್ದೇಶ್ವರ ಹುಚ್ಚಾ ಕಪರಟ್ಟಿ ಟಗರು ಪ್ರಥಮ, ಮುಗಳಕೋಡ ಟೈಗರ ಜಿಂದಾಲ ಟಗರು ದ್ವಿತೀಯ ಸ್ಥಾನ ಪಡೆಯಿತು. ನಾಲ್ಕು ಹಲ್ಲಿನ ಟಗರಿನ ಪಂದ್ಯದಲ್ಲಿ ಕಪರಟ್ಟಿ ಡೇಂಜರ ಕರಿಯಾ ಟಗರು ಪ್ರಥಮ, ಪೋಳಗಾಂವದ ರವಣಾಥ ಟಗರು ದ್ವಿತೀಯ ಸ್ಥಾನ ಪಡೆಯಿತು. ಆರು ಹಲ್ಲಿನ ಟಗರಿನ ಪಂದ್ಯದಲ್ಲಿ ಹಿರೇ ಮುಚ್ಚಾಳಗುಡ್ಡದ ಕರಿಸಿದ್ದೇಶ್ವರ ಚಿಕ್ಕರಾಯನ ಟಗರು ಪ್ರಥಮ, ರನ್ನ ಬೆಳಗಲಿಯ  ರಮಾನಂದ ಪ್ರಸನ್‌ ಟಗರು ದ್ವಿತೀಯ ಸ್ಥಾನ ಪಡೆಯಿತು. ಎಂಟು ಹಲ್ಲಿನ ಟಗರಿನ ಕಾಳಗದಲ್ಲಿ ಸಾಂಗಲಿಯ ಹುಸೆನ್‌ ಪಟೇಲ ಟಗರು ಪ್ರಥಮ, ಕಪ್ಪಟ್ಟಿ ಗೂಲಿ ಟಗರು ದ್ವಿತೀಯ ಸ್ಥಾನ ಪಡೆದು ನಗದು ಬಹುಮಾನ ಮತ್ತು ಶೀಲ್ಡ್‌ ಪಡೆದುಕೊಂಡವು.

ಗ್ರಾಮ ಪಂಚಾಯತ್‌ ಅಧ್ಯಕ್ಷ ಸಿದ್ದಪ್ಪ ಮರ್ಯಾಯಿ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಮಲ್ಲಗೌಡ ನೇರ್ಲಿ ಟಗರಿನ ಕಾಳಗಕ್ಕೆ ಚಾಲನೆ ನೀಡಿದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಯುವ ಮುಖಂಡ ಶಿವು ಮರ್ಯಾಯಿ, ನ್ಯಾಯವಾದಿ ಎಚ್‌.ಎಸ್‌.ನಸಲಾಪೂರೆ, ಎಂ.ಕೆ.ಪೂಜೇರಿ, ಬೀರಪ್ಪ ನಾಗರಾಳೆ, ಶಿವಪುತ್ರ ಮನಗೂಳಿ, ಲಕ್ಷ್ಮೀಕಾಂತ ಈಟಿ, ಅನೀಲ ಈಟಿ, ರಾಘವೇಂದ್ರ ಬಡಿಗೇರ ಮುಂತಾದವರು ಇದ್ದರು.

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.