ಬಾಲ್ಯವಿವಾಹ ತಡೆಗೆ ಕಟ್ಟುನಿಟ್ಟಿ ನ ಸೂಚನೆ
Team Udayavani, Mar 9, 2021, 2:59 PM IST
ಬೆಳಗಾವಿ: ಮಕ್ಕಳ ಗ್ರಾಮಸಭೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಡೆಸಲು ಅನುಕೂಲವಾಗುವಂತೆ ನವೆಂಬರ್ ತಿಂಗಳಿನಲ್ಲಿ ಒಂದು ದಿನಾಂಕವನ್ನು ನಿಗದಿಪಡಿಸಿ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸಭೆ ನಡೆಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವದು ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಮಕ್ಕಳ ಸಹಾಯವಾಣಿಯ ಸಲಹಾ ಸಮಿತಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಈ ಸಂಬಂಧ ಜಿಲ್ಲಾ ಪಂಚಾಯತ್ ಸಿಇಓ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.
ಸಾಮೂಹಿಕ ವಿವಾಹ ನಡೆಯುವ ಸ್ಥಳಗಳಲ್ಲಿ ಬಾಲ್ಯವಿವಾಹ ತಡೆಗಟ್ಟುವುದಕ್ಕೆ ಸಂಬಂಧಿಸಿದಂತೆ ಹಾಗೂ ಶಿಕ್ಷೆಯ ಕುರಿತು ಮಾಹಿತಿ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು. ಬಾಲ್ಯವಿವಾಹ ಪ್ರಕರಣಕಂಡುಬಂದಾಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳುಹಾಗೂ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಅದಕ್ಕೆ ತಡೆಯಾಜ್ಞೆ ತರಬೇಕು ಎಂದು ಸೂಚನೆ ನೀಡಿದರು.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಕ್ಷಣ ವಿಚಾರಿಸಿ ಕ್ರಮವಹಿಸಲು ಪೊಲೀಸ್ ಇಲಾಖೆಗೆ ಈಗಾಗಲೇ ತಿಳಿಸಲಾಗಿದೆ. ಆದಾಗ್ಯೂ ಪ್ರಕರಣ ದಾಖಲಿಸಲು ವಿನಾಕಾರಣ ವಿಳಂಬ ಮಾಡಿದರೆಸಂಬಂಧಿಸಿದವರ ಮೇಲೆ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಬಾಲಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕಲು ಕೈಗಾರಿಕೆ ಮತ್ತು ಕಾರ್ಖಾನೆಗಳ ಮೇಲೆ ನಿಯಮಿತವಾಗಿ ದಾಳಿ ನಡೆಸಿ ಪರಿಶೀಲಿಸಬೇಕು. ಬಾಲಕಾರ್ಮಿಕರನ್ನು ನೇಮಿಸಿರುವುದು ಕಂಡುಬಂದರೆ ಸಂಸ್ಥೆಗಳ ಲೆ„ಸೆನ್ಸ್ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಯುನೈಟೆಡ್ ಕಲ್ಯಾಣ ಸಂಸ್ಥೆಯ ಮಕ್ಕಳ ಸಹಾಯವಾಣಿ ಕೇಂದ್ರದ ಸಂಯೋಜಕರಾದ ಮಲ್ಲೇಶ್ ಕುಂದರಗಿ ಅವರು 2019 ರ ಏಪ್ರಿಲ್ ದಿಂದ 2021 ರ ಜನವರಿ ವರೆಗಿನ ಸಹಾಯವಾಣಿ -1098 ಕುರಿತ ಪ್ರಗತಿ ವರದಿಯನ್ನು ಮಂಡಿಸಿದರು. ಈ ಅವಧಿಯಲ್ಲಿ ತಪ್ಪಿಸಿಕೊಂಡ ಮಕ್ಕಳು, ಬಾಲಕಾರ್ಮಿಕರು, ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳು, ಶಾಲೆಯಿಂದ ಹೊರಗುಳಿದ ಮಕ್ಕಳು ಸೇರಿದಂತೆ ಒಟ್ಟಾರೆ 1855 ಪ್ರಕರಣಗಳಲ್ಲಿ ಮಕ್ಕಳ ಮನವಿಗೆ ಸ್ಪಂದಿಸಲಾಗಿದೆ. ಇದರಲ್ಲಿ 235 ಮಕ್ಕಳು ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರಾಗಿದ್ದಾರೆ ಎಂದು ತಿಳಿಸಿದರು.
1098 ಸಹಾಯವಾಣಿ ಸಂಖ್ಯೆಗೆ ಮಕ್ಕಳು ಅಥವಾ ಕಾಳಜಿಯುಳ್ಳ ವಯಸ್ಕರು ಕರೆ ಮಾಡಿದಾಗ ಚೆ„ಲ್ಡ್‌ಕೇಂದ್ರಗಳಿಗೆ ಸಂಪರ್ಕಿಸುತ್ತದೆ. ಚೆ„ಲ್ಡ್ ಲೆ„ನ್ ತಂಡವು60 ನಿಮಿಷದೊಳಗೆ ಮಗುವಿನ ನೆರವಿಗಾಗಿ ಧಾವಿಸಿ,ಮಗುವಿಗೆ ಪುನರ್ವಸತಿ ಕಲ್ಪಿಸುತ್ತದೆ ಮತ್ತು ಸತತವಾಗಿ ಅನುಸರಣೆ ಮಾಡುತ್ತದೆ ಎಂದು ಹೇಳಿದರು.
ಯುನೈಟೆಡ್ ಕಲ್ಯಾಣ ಸಂಸ್ಥೆಯ ಅಧ್ಯಕ್ಷ ಬಿ.ಓ.ತಿಪ್ಪೇಸ್ವಾಮಿ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಆನಂದ ಲೋಬೋ, ಕಾರ್ಮಿಕ ಅಧಿಕಾರಿ ತರನ್ನುಂ ಸಭೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.