ರೈತ ಹೋರಾಟವು ಸರ್ಕಾರದ ವಿರುದ್ಧದ ಅಥವಾ ಕಾಂಗ್ರೆಸ್‌ ಪರವಲ್ಲ: ಚುಕ್ಕಿ ನಂಜುಂಡಸ್ವಾಮಿ

Team Udayavani, Mar 13, 2021, 3:30 PM IST

ರೈತ ಹೋರಾಟವು ಸರ್ಕಾರದ ವಿರುದ್ಧದ ಅಥವಾ ಕಾಂಗ್ರೆಸ್‌ ಪರವಲ್ಲ: ಚುಕ್ಕಿ ನಂಜುಂಡಸ್ವಾಮಿ

ಬೆಳಗಾವಿ: ಕೃಷಿಗೆ ಸಂಬಂಧಿಸಿದ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ದೇಶದೆಲ್ಲೆಡೆ ನಡೆಯುತ್ತಿರುವ ಹೋರಾಟ ರೈತ ಕುಲದ ಅಸ್ತಿತ್ವ ಉಳಿಸಿಕೊಳ್ಳುವ ಉದ್ದೇಶದ್ದೇ ಹೊರತು, ಸರ್ಕಾರದ ವಿರುದ್ಧದ ಅಥವಾ ಕಾಂಗ್ರೆಸ್‌ ಪರ ಅಲ್ಲ ಎಂದು ರೈತ ಸಂಘದ ನಾಯಕಿ ಚುಕ್ಕಿ ನಂಜುಂಡಸ್ವಾಮಿ ಸ್ಪಷ್ಟಪಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಕೇವಲ ರೈತ ಸಂಘದ ಹೋರಾಟವಲ್ಲ. ಇಡೀ ಸಮಾಜದ ಚಳವಳಿಯಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಎಲ್ಲರಿಗೂ ತೊಂದರೆಯಾಗಿಲ್ಲವೇ?ಎಂದು ಪ್ರಶ್ನಿಸಿದರು.

ಉತ್ತರ ಭಾರತದಲ್ಲಿ ರೈತರು ನಡೆಸುತ್ತಿರುವ ಚಳವಳಿಗೆ ಸರ್ಕಾರ ಎಷ್ಟರ ಮಟ್ಟಿಗೆ ಸ್ಪಂದಿಸಿದೆ ಎಂಬುದು ಜನರಿಗೆ ಗೊತ್ತಾಗಿದೆ. ಕೊರೆಯುವ ಚಳಿಯಲ್ಲೂ ದೆಹಲಿಯ ಗಡಿಗಳಲ್ಲಿ ಅವರು ಚಳವಳಿ ಮಾಡುತ್ತಿದ್ದಾರೆ. 230 ಮಂದಿ ಅಲ್ಲಿನ ವಾತಾವರಣ ತಾಳಲಾರದೆ ಪ್ರಾಣ ತ್ಯಾಗ ಮಾಡಿದ್ದಾರೆ. ಬೇರೆ ಬೇರೆ ಸ್ವರೂಪದಲ್ಲಿ ಹೋರಾಟ ಮುಂದುವರಿದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ ಎಂದರು.

ಇದನ್ನೂ ಓದಿ:ಆಂತರಿಕ ಕಲಹ ಮರೆಮಾಚಲು ಕಾಂಗ್ರೆಸ್ ನಿಂದ ಯಾತ್ರೆ ನಾಟಕ: ಜಗದೀಶ್ ಶೆಟ್ಟರ್

ಕೃಷಿಗೆ ಸಂಬಂಧಿಸಿದ ಕಾಯ್ದೆಗಳಿಗೆ ತಿದ್ದುಪಡಿ ತಂದಿರುವದು ರೈತರಿಗೆ ನೇರ ಹೊಡೆತ ಬಿದ್ದಿದೆ. ರೈತರೊಂದಿಗೆ ಕಾರ್ಮಿಕ ಸೇರಿದಂತೆ ವಿವಿಧ ಸಂಘಟನೆಗಳು ದನಿ ಎತ್ತಿದರೂ ಸರ್ಕಾರ ಸ್ಪಂದಿಸಿಲ್ಲ. ಚಳವಳಿ ನಡೆಸುತ್ತಿರುವವರ ರೈತರಲ್ಲ, ಅವರಿಗೆ ಹಣ ಎಲ್ಲಿಂದ ಬರುತ್ತಿದೆ ಎಂಬಿತ್ಯಾದಿ ಮಾತುಗಳ ಮೂಲಕ ಅಪಪ್ರಚಾರ ಮಾಡಲಾಗುತ್ತಿದೆ ಎಂದು ದೂರಿದರು.

ದೇಶದ ವಿವಿಧೆಡೆ ನಡೆಯುತ್ತಿರುವ ಕಿಸಾನ್ ಮಹಾಪಂಚಾಯತ್‌ಗಳಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳುತ್ತಿರುವುದು ಚಳವಳಿಯ ಗಟ್ಟಿತನವನ್ನು ತೋರಿಸುತ್ತಿದೆ ಎಂದರು.

ಈಗ ರೈತ ಸಂಘ ಸೇರಿದಂತೆ ಹಲವು ಸಂಘಗಳು ಸೇರಿ ದಕ್ಷಿಣ ಭಾರತಕ್ಕೂ ಚಳವಳಿಯನ್ನು ವಿಸ್ತರಿಸುತ್ತಿದ್ದೇವೆ. ಮೊದಲಿಗೆ ರಾಜ್ಯದ ಮೂರು ಕಡೆಗಳಲ್ಲಿ ರೈತರ ಮಹಾಪಂಚಾಯತ್‌ಗಳನ್ನು ನಡೆಸಲಾಗುತ್ತಿದೆ. ರೈತರ ಉಳಿವಿಗಾಗಿ ಈ ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಉಪ್ಪಿನಂಗಡಿ:ಮಗುಚಿಬಿದ್ದ ಡೀಸೆಲ್ ಟ್ಯಾಂಕರ್; ಬಿಟ್ಟಿ ಡೀಸೆಲ್ ಗೆ ನೂಕುನುಗ್ಗಲು,ಲಾಠಿ ಪ್ರಹಾರ

ಸಂಘದ ಉತ್ತರ ಕರ್ನಾಟಕದ ಗೌರವ ಅಧ್ಯಕ್ಷ ಶಶಿಕಾಂತ ಪಡಿಸಲಗಿ ಮಾತನಾಡಿ ಬೆಳಗಾವಿ ಜಿಲ್ಲಾಡಳಿತ ಯಾವುದೇ ಸ್ಥಳ ನೀಡುತ್ತಿಲ್ಲ. ಚನ್ನಮ್ಮ ವೃತ್ತದಲ್ಲೂ ಅವಕಾಶ ಕೊಡದಿದ್ದರೆ ಜೈಲ್ ಭರೋ ಚಳವಳಿ ಆಗಬಹುದು. ರೈತ ಸಂಘದ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ ಎಂದರು.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.