ದೇಶದಲ್ಲೇ ರಾಜ್ಯದ ಪೊಲೀಸರು ಉತ್ತಮ ಎನಿಸಿದ್ದಾರೆ:  ಸಿಎಂ ಬೊಮ್ಮಾಯಿ

Team Udayavani, Dec 28, 2022, 2:19 PM IST

tdy-15

ಬೆಳಗಾವಿ: ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಕೃತ್ಯಗಳು ನಡೆದ ಸಂದರ್ಭದಲ್ಲಿ ಕ್ಷಿಪ್ರ ಗತಿಯಲ್ಲಿ ಕಾರ್ಯಾಚರಣೆ ನಡೆಸಿ ಅಪರಾಧಿಗಳನ್ನು ಬಂಧಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ಬೆಳಗಾವಿ ನಗರ ಪೊಲೀಸ್‌ ಆಯುಕ್ತರ ನೂತನ ಕಚೇರಿಯ ಕಟ್ಟಡವನ್ನು ಬುಧವಾರ ಉದ್ಘಾಟಸಿ ಮಾತನಾಡಿದ ಅವರು,ಬೆಳಗಾವಿ ಸೇರಿದಂತೆ ಎಲ್ಲಾ ಜಿಲ್ಲೆಗಳ ಪೊಲೀಸರು ಜನರೊಂದಿಗೆ ನಿಕಟ ಸಂಪರ್ಕ ಇಟ್ಟುಕೊಳ್ಳಬೇಕು. ಪೊಲೀಸ್ ಇಲಾಖೆ ಜನರ ಸಹಕಾರದಿಂದ ಶಾಂತಿ ಸುವ್ಯವಸ್ಥಿತ ಕಾಪಾಡಬೇಕು. ಪೊಲೀಸರಿಗೆ ಗಡಿ ಭಾಗದ ಸವಾಲುಗಳು ಭಿನ್ನವಾಗಿವೆ ಎಂದರು.

ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆದ ಸಂದರ್ಭದಲ್ಲಿ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ‌ 24 ಗಂಟೆಯ ಒಳಗೆ ಅಪರಾಧಿಗಳನ್ನು ಬಂಧಿಸಿದ್ದಾರೆ. ದೇಶದಲ್ಲೇ ರಾಜ್ಯದ ಪೊಲೀಸರು ಉತ್ತಮ ಎನಿಸಿದ್ದಾರೆ ಎಂದು ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯ ಪೊಲೀಸ್ ವಸತಿ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಈ ವರ್ಷವೇ 2500 ಮನೆಗಳು ನಿರ್ಮಾಣವನ್ನು ಪೂರ್ಣಗೊಳಿಸಲಾಗುವುದು. ಸರ್ಕಾರದ ವತಿಯಿಂದ ಒಂದು 116 ಪೊಲೀಸ್ ಠಾಣೆಗಳನ್ನು  ನಿರ್ಮಿಸಲಾಗಿದೆ. ಎಲ್ಲಾ ಪೊಲೀಸ್ ಠಾಣಗಳು ಉದ್ಘಾಟನೆ ಹಂತದಲ್ಲಿ. ಪೊಲೀಸ್ ಸಾರಿಗೆ ವ್ಯವಸ್ಥೆ ಬಲಪಡಿಸಲು ರೂ.80 ಕೋಟಿಗಳನ್ನು ನೀಡಲಾಗಿದೆ. 300ಕ್ಕೂ ಅಧಿಕ ವಾಹನಗಳನ್ನು ಖರೀದಿ ಮಾಡಲಾಗಿದೆ.  ವಿವಿಧ ಹಂತದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೂ ವಾಹನಗಳನ್ನು ಒದಗಿಸಲು ಸರ್ಕಾರ ಆದೇಶ ಹೊರಡಿಸಿದೆ ಎಂದರು.

ಡಿ.ವೈ.ಎಸ್ ಹಂತ ಅಧಿಕಾರಿಗಳಿಗೆ ಸ್ಕಾರ್ಪಿಯೋ ವಾಹನ ನೀಡಲಾಗುವುದು. ರಾಜ್ಯ ಪೊಲೀಸ್ ವಸತಿ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ದಕ್ಷತೆ ಯಿಂದ ಕೆಲಸ ಮಾಡುತ್ತಿದೆ ಎಂದರು.

ಇದನ್ನೂ ಓದಿ:ಧೋನಿ ಮಗಳಿಗೆ ವಿಶೇಷ ಗಿಫ್ಟ್ ನೀಡಿದ ವಿಶ್ವಕಪ್ ಹೀರೋ ಲಿಯೋನೆಲ್ ಮೆಸ್ಸಿ

ನಾನು ಗೃಹ ಮಂತ್ರಿಯಾಗಿದ್ದಾಗ ಆರಂಭವಾಗಿದ್ದ ಕಟ್ಟಡಗಳು ಒಂದು ವರ್ಷದಲ್ಲಿ ಪೂರ್ಣಗೊಂಡಿವೆ. ಇವುಗಳನ್ನು ಮುಖ್ಯಮಂತ್ರಿಯಾದ ಬಳಿಕ ಉದ್ಘಾಟಿಸಿದ್ದೇನೆ. ನಿಗಮದ ವತಿಯಿಂದ ರಾಜ್ಯದಲ್ಲಿ ಎರಡು ಬಂಧಿಖಾನೆಗಳನ್ನು ನಿರ್ಮಾಣ ಮಾಡಲಾಗುವುದು. ವಿಧಿ ವಿಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸಲಾಗಿದ್ದು. ಅಗತ್ಯ ತಜ್ಞರ ನೇಮಕಾತಿ ಮಾಡಲಾಗಿದೆ. ಹಿಂದೆ ವಿದಿ ವಿಜ್ಞಾನ ವರದಿಗಳು ಕೈಸೇರಲು ಮೂರು ತಿಂಗಳು ಹಿಡಿಯುತ್ತಿತ್ತು. ಸದ್ಯ 30 ದಿನಗಳ ವರದಿಗಳನ್ನು ನೀಡಲಾಗುತ್ತಿದೆ. 15 ದಿನದಲ್ಲಿ ವಿದಿ ವಿಜ್ಞಾನ ವರದಿ ನೀಡಲು ಕ್ರಮ ವಹಿಸುವುದಾಗಿ ಹೇಳಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ ಪೊಲೀಸರು ಗಡಿ ವಿಚಾರದಂತಹ ಭಾವನಾತ್ಮಕ ವಿಚಾರಗಳಲ್ಲಿ ಸಹನೆಯಿಂದ ಕಾರ್ಯ ನಿರ್ವಹಿಸಿದ್ದಾರೆ. ಪೊಲೀಸ್ ಇಲಾಖೆ ಗೃಹ ನಿರ್ಮಾಣದ ಜೊತೆಗೆ ನೂತನ ಪೊಲೀಸ್ ಠಾಣೆ, ಎಫ್‌ಎಸ್‌ಎಲ್ ಲ್ಯಾಬ್ ನಿರ್ಮಾಣ, ವಾಹನ ಹಾಗೂ ನೂತನ ಶಸ್ತ್ರಾಸ್ತ್ರ ಖರೀದಿಸಲು ಮುಖ್ಯಮಂತ್ರಿಗಳು ಅಗತ್ಯ ಅನುದಾನ ನೀಡಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಅನಿಲ್ ಎಸ್‌. ಬೆನಕೆ ಬೆಳಗಾವಿ ಪೊಲೀಸರ ಬಗ್ಗೆ ಅಪಾರ ಪ್ರೀತಿಯಿದೆ. ಕೊರನಾ ಕಾಲದಲ್ಲಿ ಪೊಲೀಸರು ಕೊರೋನಾ ಎದುರಿಸಿಯೂ ಜನರ ಸೇವೆ ಮಾಡಿದ್ದಾರೆ. ಬೆಳಗಾವಿ ನಗರದ ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡಿದ್ದಾರೆ ಎಂದರು.          ಬ್ರಿಟಿಷ್ ಕಾಲೋನಿಯಲ್ಲಿ ಪೊಲೀಸರಿಗೆ ಗೃಹಗಳನ್ನು ನಿರ್ಮಿಸಬೇಕು. ಬಂದೊಬಸ್ತ್ ಆಗಮಿಸುವ ಪೊಲೀಸರಿಗೆ ನಗರದಲ್ಲಿ ವಿಶ್ರಾಂತಿ ಕೊಠಡಿ ನಿರ್ಮಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಲ ಸಂಪನ್ಮೂಲ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ, ಸಂಸದೆ ಮಂಗಲ ಸುರೇಶ ಅಂಗಡಿ ಶಾಸಕ ಮಹೇಶ ಕುಮಠಳ್ಳಿ, ಒಳಾಡಳಿತ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್, ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ನಿಗಮ ವ್ಯವಸ್ಥಾಪಕ ನಿರ್ದೇಶಕರು ಅರುಣ ಜೆ. ಚಕ್ರವರ್ತಿ, ಬೆಳಗಾವಿ ಪ್ರಾದೇಶಿಕ ಆಯುಕ್ತ ಎಂ. ಜಿ. ಹಿರೇಮಠ, ಉತ್ತರ ಬೆಳಗಾವಿ ಆರಕ್ಷಕ ಮಹಾನಿರೀಕ್ಷಕ ಎನ್. ಸತೀಶ್ ಕುಮಾರ್, ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ, ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕ  ಡಾ. ಸಂಜೀವ ಎಂ. ಪಾಟೀಲ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Suvarna-obama

Belagavi Session: ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.