ಏತ ನೀರಾವರಿ ಯೋಜನೆಗಳಿಗೆ ಶೀಘ್ರ ಚಾಲನೆ


Team Udayavani, Sep 26, 2021, 12:51 PM IST

cghjfyhjfty

ಸಂಕೇಶ್ವರ: ಶಂಕರಲಿಂಗ ಏತ ನೀರಾವರಿ ಹಾಗೂ ಅಡವಿ ಸಿದ್ದೇಶ್ವರ ಏತ ನೀರಾವರಿ ಯೋಜನೆಗಳನ್ನು ಶೀಘ್ರ ಆರಂಭಿಸಲಾಗುವುದು. ಅದೇ ರೀತಿ ಆರು ಬ್ಯಾರೇಜ್‌ ತುಂಬಿಸಲು ಆದಷ್ಟು ಬೇಗನೇ ಮಂಜೂರಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಸಂಕೇಶ್ವರ ಪಟ್ಟಣದಲ್ಲಿ ಶನಿವಾರ 4 ಕೋಟಿ ರೂ. ವೆಚ್ಚದ ನೂತನ ಬಸ್‌ ನಿಲ್ದಾಣ ಹಾಗೂ ಎಸ್‌ ಎಫ್‌ಸಿ 3.50 ಕೋಟಿ ರೂ. ಅನುದಾನದಲ್ಲಿ ನಿರ್ಮಿಸಲಾದ ಪುರಸಭೆ ಕಟ್ಟಡ ಉದ್ಘಾಟಿಸಿದ ಬಳಿಕ ನೇಸರಿ ಗಾರ್ಡನ್‌ ನಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ನೆಲ-ಜಲ ಹಾಗೂ ಜನರ ರಕ್ಷಣೆಗೆ ಸರ್ಕಾರ ಕಟಿಬದ್ಧವಾಗಿದೆ. ಇದಲ್ಲದೇ ಉತ್ತರ ಕರ್ನಾಟಕ ಅಭಿವೃದ್ಧಿ ಸೇರಿದಂತೆ ಕೃಷ್ಣಾ ಯೋಜನೆಯಡಿ ರಾಜ್ಯದ ಪಾಲಿನ ನೀರಿನ ಸಂಪೂರ್ಣ ಬಳಕೆಗೆ ಸರ್ಕಾರ ಬದ್ಧವಿದೆ. ಸೂಕ್ತ ವ್ಯವಸ್ಥೆ ಲಭ್ಯವಾದರೆ ರಾಜ್ಯದಲ್ಲಿ ವಿದ್ಯುತ್‌ ವಿತರಣೆ ವ್ಯವಸ್ಥೆ ವಿಕೇಂದ್ರೀಕರಣಕ್ಕೆ ಸರ್ಕಾರ ಸಿದ್ಧವಿದೆ ಎಂದು ಅವರು ತಿಳಿಸಿದರು.

ಸರ್ಕಾರಿ ಸೇವೆಗಳ ವಿಕೇಂದ್ರೀಕರಣ: ಜ.26 ರಿಂದ ಐದು ಜಿಲ್ಲೆಗಳಲ್ಲಿ ಸರ್ಕಾರದ ಪ್ರತಿಯೊಂದು ಸೇವೆಗಳನ್ನು ಗ್ರಾಪಂ ಮೂಲಕ ನೀಡುವ ವ್ಯವಸ್ಥೆ ಮಾಡಲಾಗುವುದು. ಸರ್ಕಾರಿ ಸೇವೆಗಳ ವಿಕೇಂದ್ರೀಕರಣ ಮಾಡುವ ಮೂಲಕ ಜನರ ಮನೆ ಬಾಗಿಲಿಗೆ ಸೇವೆ ಒದಗಿಸಲಾಗುವುದು. ಇದಕ್ಕೆ ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.

ರೈತರ ಮಕ್ಕಳಿಗೆ ‌ಶಿಷ್ಯವೇತನ ಒದಗಿಸುವ ಮೂಲಕ ಅವರ ಬದುಕಿಗೆ ಸರ್ಕಾರ ಆಸರೆಯಾಗಲಿದೆ. ರೈತರ ಮಕ್ಕಳು ಬೇರೆ ಬೇರೆ ರೀತಿಯ ವೃತ್ತಿ ಶಿಕ್ಷಣ ಪಡೆಯಲು ಈ ಯೋಜನೆ ಸಹಕಾರಿಯಾಗಲಿದೆ. ಅಮೃತ ಯೋಜನೆಗಳ ಜಾರಿ ಮೂಲಕ ಹಳ್ಳಿಗಳ ಪ್ರಗತಿಗೆ ಸರ್ಕಾರ ಮುಂದಾಗಿದೆ.

ಪ್ರಧಾನಿ ದೂರ ದೃಷ್ಟಿಯಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿ ಸುವ ಮೂಲಕ ಒಟ್ಟಾರೆ ಅಭಿವೃದ್ಧಿ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡಲಿದೆ ಎಂದು ಹೇಳಿದರು.

ಸಂಕೇಶ್ವರ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ:ಸಂಕೇಶ್ವರ ಪಟ್ಟಣಕ್ಕೆ ಸಂಪೂರ್ಣಒಳಚರಂಡಿ ವ್ಯವಸ್ಥೆ ಯೋಜನೆಗೆ ವರ್ಷಾಂತ್ಯದಲ್ಲಿ ಅನುಮತಿ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದರು. ವಿಶ್ವನಾಥ್‌ ಕತ್ತಿ ಹಾಗೂ ತಮ್ಮ ತಂದೆಯವರಾದ ದಿ. ಎಸ್‌.ಆರ್‌.ಬೊಮ್ಮಾಯಿ ಅವರ ಆತ್ಮೀಯ ಒಡನಾಟವನ್ನು ಸ್ಮರಿಸಿದರು.

ಜಮೀನು ಹಸ್ತಾಂತರ: ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು, ಸಂಕೇಶ್ವರ ಹೋಬಳಿಯ ಹರಗಾಪುರ ಗ್ರಾಮದ ಸರಕಾರಿ ಗಾಯರಾಣದ 50 ಎಕರೆ ಜಮೀನನ್ನು ವಸತಿರಹಿತರಿಗೆ ವಸತಿ ಕಲ್ಪಿಸಲು ಸಂಕೇಶ್ವರ ಪುರಸಭೆಗೆ ಹಸ್ತಾಂತರಿಸಿದರು.

ಅರಣ್ಯ, ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವ ಉಮೇಶ ಕತ್ತಿ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕ ದುರ್ಯೋಧನ ಐಹೊಳೆ, ಪರಿಷತ್‌ ಸದಸ್ಯ ಹಣಮಂತ ನಿರಾಣಿ, ಪುರಸಭೆ ಅಧ್ಯಕ್ಷೆ ಸೀಮಾ ಹತನೂರೆ ಇತರರು ಇದ್ದರು.

ಸಂಕೇಶ್ವರ ಪುರಸಭೆಗೆ 20 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಕೋರಿ ಪುರಸಭೆಯ ಅಧ್ಯಕ್ಷೆ ಸೀಮಾ ಹತನೂರೆ ಮುಖ್ಯಮಂತ್ರಿಗಳಿಗ ೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸ್ವಾಗತಿಸಿದರು. ಪುರಸಭೆಯ ಸದಸ್ಯರು, ಪಟ್ಟಣದ ಗಣ್ಯರು ಸೇರಿದಂತೆ ಅನೇಕರ ಕಾರ್ಯಕ್ರಮದ‌ ಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.