ಸಹಕಾರ ಸಂಸ್ಥೆ ಆದಾಯ ತೆರಿಗೆಯಿಂದ ಮುಕ್ತಗೊಳಿಸಿ
Team Udayavani, Dec 18, 2019, 12:20 PM IST
ಬೆಳಗಾವಿ: ಸಹಕಾರ ಸಂಸ್ಥೆಗಳನ್ನು ಆದಾಯ ತೆರಿಗೆಯಿಂದ ಮುಕ್ತಗೊಳಿಸುವಂತೆ ಆಗ್ರಹಿಸಿ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಪದಾಧಿಕಾರಿಗಳು ಹಾಗೂ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಸಹಕಾರ ಕ್ಷೇತ್ರ ಸಮಾಜದ ಪ್ರತಿಯೊಬ್ಬ ವ್ಯಕ್ತಿಗೆ ಆರ್ಥಿಕ ಸಹಾಯಒದಗಿಸುವ ಮೂಲಕ ಅವರ ನೆರವಿಗೆ ಬರುತ್ತದೆ. ಯಾವುದೇ ಸಂದರ್ಭದಲ್ಲಿ ಆರ್ಥಿಕ ಸಹಾಯ ಮಾಡುವಲ್ಲಿ ಮುಂಚೂಣಿಯಲ್ಲಿ ಇರುತ್ತದೆ. ಆದರೆ ಕೇಂದ್ರ ಸರ್ಕಾರ ಸಹಕಾರ ಸಂಘಗಳ ಮೇಲೆ ಆದಾಯ ತೆರಿಗೆ ವಿಧಿಸುವ ಮೂಲಕ ಬರೆ ಎಳೆಯುವ ಕೆಲಸ ಮಾಡುತ್ತಿದೆ ಎಂದು ದೂರಿದರು. ಆದಾಯ ತೆರಿಗೆ ವಿಧಿಸುವುದರಿಂದ ಸಹಕಾರ ಸಂಘಗಳನ್ನು ನಡೆಸುವುದು ಕಷ್ಟವಾಗುತ್ತಿದೆ. ಎಲ್ಲ ಸಂಘಗಳು ಆದಾಯ ತೆರಿಗೆಯಿಂದ ನಷ್ಟದಲ್ಲಿ ಸಿಲುಕುವುದರ ಮೂಲಕ ಆರ್ಥಿಕ ದಿವಾಳಿ ಅನುಭವಿಸುತ್ತವೆ. ಈಗಾಗಲೇ ಅನೇಕ ಸಂಘಗಳು ಮುಚ್ಚಿದ್ದು, ಮುಂದೆ ಆರ್ಥಿಕವಾಗಿ ಸದೃಢವಾಗುವುದು ಕಷ್ಟಕರವಾಗಿದೆ. ಹೀಗಾಗಿ ಆದಾಯತೆರಿಗೆಯಿಂದ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು.
115 ವರ್ಷಗಳ ಇತಿಹಾಸಹೊಂದಿರುವ ಸಹಕಾರಿ ಕ್ಷೇತ್ರ ಉಳಿಸುವ ನಿಟ್ಟಿನಲ್ಲಿ ಸರ್ಕಾರ ಸಹಕರಿಸಬೇಕು. ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಹಕಾರಿ ಸಂಸ್ಥೆಗಳ ಏಳ್ಗೆಗೆ ಮುತುವರ್ಜಿ ವಹಿಸಬೇಕು. ಸಹಕಾರ ಕ್ಷೇತ್ರವನ್ನು ಸ್ವತಂತ್ರ ಹಾಗೂ ಆರ್ಥಿವಾಗಿ ಸದೃಢವಾಗಿ ಬೆಳೆಯಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು. ಮುಖಂಡರಾದ ಸಂಜಯ ಹೊಸಮಠ, ಉಮೇಶ ಬಾಳಿ, ತಮ್ಮಣ್ಣ ಕೆಂಚರಡ್ಡಿ, ಪಿ.ಬಿ. ಹಂಜಿ, ಎಂ. ಸಲೀಂ ಸೇರಿದಂತೆ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಪದಾಧಿಕಾರಿಗಳು, ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.