ನೆರೆ ಸಂತ್ರಸ್ತರಿಗೆ ನೆರವಾದ ವಾಣಿಜ್ಯ ತೆರಿಗೆ

•ಒಂದೂವರೆ ಕೋಟಿ ರೂ. ಮೌಲ್ಯದ ವಸ್ತುಗಳ ವಿತರಣೆ •ಸಂಪರ್ಕವೇ ಇಲ್ಲದ ಊರುಗಳಿಗೆ ತೆರಳಿ ಸಹಾಯ

Team Udayavani, Aug 19, 2019, 11:51 AM IST

bg-tdy-3

ಬೆಳಗಾವಿ: ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ವಾಣಿಜ್ಯ ತೆರಿಗೆ ಇಲಾಖೆಯವರು ವಿತರಿಸಿದರು.

ಬೆಳಗಾವಿ: ಜಲಪ್ರಳಯಕ್ಕೆ ನಲುಗಿ ನಿರಾಶ್ರಿತಗೊಂಡವರಿಗೆ ಅನೇಕ ಸಂಘ-ಸಂಸ್ಥೆಗಳು ಸೇರಿದಂತೆ ಎಲ್ಲ ವಲಯದಿಂದಲೂ ಮಾನವೀಯ ಹೃದಯಗಳು ಸಹಾಯಕ್ಕೆ ನಿಂತಿವೆ. ಆದರೆ ಸರ್ಕಾರಿ ಇಲಾಖೆಯೊಂದರ ಅಧಿಕಾರಿಗಳೇ ಸ್ವತಃ ಫಿಲ್ಡ್ಗಿಳಿದು ಸುಮಾರು ಒಂದೂವರೆ ಕೋಟಿ. ರೂ. ಮೌಲ್ಯದ ವಸ್ತುಗಳನ್ನು ನೀಡಿ ನೆರವಾಗಿ ಕಷ್ಟಕ್ಕೆ ಸ್ಪಂದಿಸಿ ಸಂತ್ರಸ್ತರ ಕಣ್ಣೀರು ಒರೆಸಿದ್ದಾರೆ.

ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಸೇವಾ ಸಂಘದ ಸದಸ್ಯರು ಸರ್ಕಾರದ ಸಹಾಯಕ್ಕಾಗಿ ಕಾಯದೇ ತಾವೇ ಅಗತ್ಯ ವಸ್ತುಗಳನ್ನು ಸಂಗ್ರಹಿಸಿ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಸಂತ್ರಸ್ತರಿಗೆ ಹಂಚಿದ್ದಾರೆ. ಬೆಂಗಳೂರಿನಿಂದ ಸುಮಾರು 9 ಲೋಡ್‌ಗಳಷ್ಟು ಬಟ್ಟೆ, ಆಹಾರ ಸಾಮಗ್ರಿ ಹಾಗೂ ದಿನಬಳಕೆ ವಸ್ತುಗಳನ್ನು ಸಂತ್ರಸ್ತರಿಗೆ ವಿತರಿಸಿದ್ದಾರೆ.

ಕಾಗವಾಡ ತಾಲೂಕಿನ ಜುಗುಳ, ಮಂಗಾವತಿ, ಶಹಾಪುರ ಗ್ರಾಮಗಳಿಗೆ ಹೋಗಲು ಸಾಧ್ಯವೇ ಇರಲಿಲ್ಲ. ಅಲ್ಲಿ ಸರ್ಕಾರದ ಯಾವುದೇ ಪುನರ್ವಸತಿ ಕೇಂದ್ರಗಳೂ ಇರಲಿಲ್ಲ. ಯಾವ ವಾಹನಗಳೂ ಈ ಊರಿಗೆ ತಲುಪಲು ಸಾಧ್ಯವಿರಲಿಲ್ಲ. ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವೈಯಕ್ತಿಕವಾಗಿ ಹೊಣೆ ಹೊತ್ತುಕೊಂಡು 20 ಸಾವಿರ ಸಂತ್ರಸ್ತರಿಗೆ ನೆರವು ನೀಡಿದ್ದಾರೆ.

ಜತೆಗೆ ಬಾಗಲಕೋಟೆ ಜಿಲ್ಲೆಯ ಐದಾರು ಹಳ್ಳಿಗಳಿಗೆ ಹೋಗಿ 48,500 ಬಾಟಲಿ ನೀರು, 20 ಸಾವಿರ ರೊಟ್ಟಿ, 5 ಸಾವಿರ ಸೀರೆ, 5 ಸಾವಿರ ಲುಂಗಿ, 5 ಸಾವಿರ ಬೆಡ್‌ಶೀಟ್, ಸಾವಿರ ಬಿಸ್ಕಿಟ್, 5 ಸಾವಿರ ಹಣ್ಣಿನ ರಸದ ಬಾಕ್ಸ್‌ಗಳು, 5 ಸಾವಿರ ಟಾವೆಲ್, 2 ಸಾವಿರ ಮ್ಯಾಟ್, 5 ಕೆಜಿ. ಪಾಕೆಟ್‌ನ 2500 ಕೆಜಿ. ಗೋದಿ ಹಿಟ್ಟು, ಬ್ರಿಟಾನಿಯಾ ಬನ್‌ ಸೇರಿದಂತೆ ಸುಮಾರು ಒಂದೂವರೆ ಕೋಟಿ ರೂ. ಮೌಲ್ಯದ ಅಗತ್ಯ ವಸ್ತುಗಳನ್ನು ನೀಡಿದ್ದಾರೆ. ಈ ಎಲ್ಲ ವಸ್ತುಗಳನ್ನು ವಿತರಿಸಲು ಹೋದಾಗ ಕೆಲವರು ತೆಗೆದುಕೊಳ್ಳಲು ಮುಂದೆ ಬರುತ್ತಿರಲಿಲ್ಲ. ಅಷ್ಟೊಂದು ಸ್ವಾಭಿಮಾನದಿಂದ ಬದುಕುವ ಆ ಜನರಲ್ಲಿ ವಿಶ್ವಾಸ ತುಂಬಿ, ಸಹಾಯ ನೀಡಲು ಬಂದಿರುವುದಾಗಿ ತಿಳಿ ಹೇಳಿ ನೆರವಾಗಿದ್ದೇವೆ. ಈ ಕಾರ್ಯ ಮಾಡಿರುವುದು ಸಾರ್ಥಕವಾಗಿದೆ ಎನ್ನುತ್ತಾರೆ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಶಿವಪ್ರಕಾಶ.

ರಾಜ್ಯ ವಾಣಿಜ್ಯ ತೆರಿಗೆ ಅಧಿಕಾರಿಗಳ ಸೇವಾ ಸಂಘಕ್ಕೆ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಅವರ ಸಹಾಯ ಮೆಚ್ಚುವಂಥದ್ದು. ಹಳ್ಳಿ ಹಳ್ಳಿಗೆ ಅಗತ್ಯ ವಸ್ತುಗಳನ್ನು ತಲುಪಿಸಲು ಪೊಲೀಸರು ಸಹಕಾರ ನೀಡಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಬೆಳಗಾವಿ ಉತ್ತರ ವಲಯ ಜಂಟಿ ಆಯುಕ್ತರಾದ ಕೆ. ರಾಮನ್‌, ಮೇಘನ್ನವರ ಸೇರಿದಂತೆ ಹಿರಿಯ ಅಧಿಕಾರಿಗಳು ತಂಡದಲ್ಲಿದ್ದರು. ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಹಂಚಲು 20 ಅಧಿಕಾರಿಗಳು ಹಾಗೂ 30 ಜನ ಸಿಬ್ಬಂದಿ ತಂಡ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ. ಈಗಾಗಲೇ ನಮ್ಮ ಇಲಾಖೆಯ 800 ಅಧಿಕಾರಿಗಳು ಹಾಗೂ 4 ಸಾವಿರ ಸಿಬ್ಬಂದಿ ಒಂದು ದಿನದ ವೇತನವನ್ನು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಶಿವಪ್ರಕಾಶ ತಿಳಿಸಿದ್ದಾರೆ.

•ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.