ಬಾಕಿ ಕಾಮಗಾರಿ ತ್ವರಿತ ಪೂರ್ಣಗೊಳಿಸಿ
ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ; ಅನುದಾನ ಮರಳಿ ಹೋಗದಂತೆ ಎಚ್ಚರಿಕೆ ವಹಿಸಲು ಎಲ್.ಕೆ. ಅತೀಕ್ ಸೂಚನೆ
Team Udayavani, Dec 4, 2022, 9:50 AM IST
ಬೆಳಗಾವಿ: ಪ್ರಸಕ್ತ ಆರ್ಥಿಕ ವರ್ಷದ ಅಂತಿಮ ಘಟ್ಟದಲ್ಲಿರುವುದರಿಂದ ಪ್ರತಿಯೊಂದು ಇಲಾಖೆಗಳು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ಅನುದಾನ ಮರಳಿ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 15ನೇ ಹಣಕಾಸು ಯೋಜನೆಯಡಿ ಅನುದಾನದ ಕಾಮಗಾರಿಗಳನ್ನು ಪರಿಶೀಲಿಸಬೇಕು. ಯಾವುದೇ ಹಂತದಲ್ಲಿ ಅವ್ಯವಹಾರವಾಗದಂತೆ ತಾಲೂಕು ಪಂಚಾಯತ್ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.
ಅಮೃತ ಗ್ರಾಮ ಪಂಚಾಯಿತಿಗಳ ಮೊದಲ ಹಂತದ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯಕ್ಕೆ ಹಾಗೂ ಎರಡನೇ ಹಂತದ ಕಾಮಗಾರಿಗಳನ್ನು ಮುಂಬರುವ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಅಮೃತ್ ಸರೋವರ ಕಾಮಗಾರಿಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪೂರ್ಣಗೊಳಿಸಬೇಕು. ಎಲ್ಲ ಗ್ರಾಮ ಪಂಚಾಯತ್ ಗಳಲ್ಲಿ ಮೊದಲು ಗ್ರಂಥಾಲಯ ಸ್ಥಾಪಿಸಬೇಕು. ನಂತರದ ದಿನಗಳಲ್ಲಿ ಇದನ್ನು ಡಿಜಿಟಲ್ ಗ್ರಂಥಾಲಯವಾಗಿ ಪರಿವರ್ತಿಸಬೇಕು ಎಂದರು.
ಜಿಲ್ಲೆಯ ಆರೋಗ್ಯ ಸೌಲಭ್ಯಗಳು ಮತ್ತು 23 ತಜ್ಞ ವೈದ್ಯರ ಕೊರತೆಯ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ಕೂಡಲೇ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ತಜ್ಞ ವೈದ್ಯರ ಕೊರತೆಯನ್ನು ನೀಗಿಸಲಾಗುವುದು. ಕೇರಳ ರಾಜ್ಯದ ಮಾದರಿಯಲ್ಲಿ ಶಿಶುಮರಣ ಹಾಗೂ 1 ರಿಂದ 5 ವಯಸ್ಸಿನ ಮಕ್ಕಳ ಮರಣ ಪ್ರಮಾಣವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪರಿಣಾಮಕಾರಿಯಾದ ಕ್ರಿಯಾಯೋಜನೆ ರೂಪಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿರುವ ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸುವುದರ ಜೊತೆಗೆ ಅರ್ಹ ಕುಟುಂಬಗಳನ್ನು ಗುರುತಿಸಿ ಅವರಿಗೆ ಕಾರ್ಡು ವಿತರಿಸಲು ಕ್ರಮ ಕೈಗೊಳ್ಳಬೇಕು.ಆದಾಯ ತೆರಿಗೆ ಪಾವತಿಸುವಂತಹ ವ್ಯಕ್ತಿಗಳ ಬಿಪಿಎಲ್ ಕಾರ್ಡು ರದ್ದುಪಡಿಸಬೇಕು ಎಂದರು.
ಶೌಚಾಲಯ ನಿರ್ಮಾಣ: ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಜಿಲ್ಲಾ ಪಂಚಾಯತ್ ಹಾಗೂ ನರೇಗಾ ಯೋಜನೆಯಡಿ ಎಲ್ಲ ನೆರವು ನೀಡಲಾಗುತ್ತಿದೆ. ಹೊಸದಾಗಿ ನಿರ್ಮಿಸಲಾದ ಶೌಚಾಲಯಗಳ ನಿರ್ವಹಣೆಗೆ ಆಯಾ ಶಾಲಾ ಮಂಡಳಿ ಅಥವಾ ಮುಖ್ಯೋಪಾಧ್ಯಾಯರು ಅಗತ್ಯ ಕ್ರಮ ವಹಿಸಬೇಕು. ಪ್ರತಿ ಶಾಲೆಯಲ್ಲಿ ಮೂಲಸೌಕರ್ಯ ಇರುವಂತೆ ನೋಡಿಕೊಳ್ಳುವುದು ಮುಖ್ಯೋಪಾಧ್ಯಾಯರ ಕರ್ತವ್ಯವಾಗಿದೆ ಎಂದರು.
ಜಿಲ್ಲೆಯ ಎಲ್ಲ ಅಂಗನವಾಡಿ ಕಟ್ಟಡಗಳ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಅಂಗನವಾಡಿಗೆ ಪೂರೈಕೆಯಾಗುವ ಆಹಾರ ಪದಾರ್ಥಗಳು ಮತ್ತು ಧಾನ್ಯಗಳ ಗುಣಮಟ್ಟವನ್ನು ಹಾಗೂ ಮಕ್ಕಳ ಹಾಜರಾತಿಯನ್ನು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.
ಅಥಣಿ ತಾಲೂಕಿನ ಕೊಕಟನೂರಿನಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಕೆರೆ ನಿರ್ಮಾಣ, ಸಸಿ ನೆಡುವುದು ಸೇರಿದಂತೆ ಮಳೆ ನೀರು ಕೊಯ್ಲು ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಸಲಹೆ ನೀಡಿದರು.
ಡಿಭಾಗದ ಜನರಿಗೆ ತುರ್ತು ಚಿಕಿತ್ಸೆ ಒದಗಿಸಲು ಅನುಕೂಲವಾಗುವಂತೆ ಗಡಿಭಾಗದಲ್ಲಿ ಒಂದು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪಿಸುವ ಅಗತ್ಯವಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಸಂಜೀವ ಪಾಟೀಲ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಶೌಚಾಲಯ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕಿದೆ. ಈ ನಿಟ್ಟಿನಲ್ಲಿ ಯಾವುದಾದರೂ ಯೋಜನೆಯಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ| ಪ್ರವೀಣ ಬಾಗೇವಾಡಿ, ಡಿಸಿಪಿ ರವೀಂದ್ರ ಗಡಾದಿ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಡಿಎಚ್‌ಒ ಡಾ| ಮಹೇಶ್ ಕೋಣಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್
Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ
Bengaluru: ಸಾಲ ವಾಪಸ್ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
Fraud Case: ಸಾಫ್ಟ್ ವೇರ್ ಕಂಪನಿಗೆ 56 ಲಕ್ಷ ರೂಪಾಯಿ ವಂಚನೆ: 6 ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.