ತಿಂಗಳೊಳಗೆ ಡ್ಯಾಂ ಕಾಮಗಾರಿ ಮುಗಿಸಿ
Team Udayavani, May 3, 2020, 2:55 PM IST
ಬೆಳಗಾವಿ: ಬೆಳಗಾವಿ ಗ್ರಾಮೀಣ ಭಾಗಕ್ಕೆ ನೀರು ಕೊಡುವ ಉದ್ದೇಶದಿಂದ ನಿರ್ಮಾಣ ಮಾಡುತ್ತಿರುವ ಕಿಣಯೇ ಡ್ಯಾಂ ಕಾಮಗಾರಿಯನ್ನು ಇನ್ನು ಒಂದು ತಿಂಗಳ ಕಾಲಮಿತಿಯೊಳಗೆ ಮುಕ್ತಾಯಗೊಳಿಸಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಿಣಯೇ ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ ಜಲಾಶಯ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದ ಸಚಿವರು ಅಲ್ಲಿಯೇ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬರುವ ಮಳೆಗಾಲದೊಳಗೆ ಜಲಾಶಯದ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ನೀರಾವರಿ ನಿಗಮದ ಮುಖ್ಯ ಅಭಿಯಂತರರಿಗೆ ಸೂಚಿಸಿದರು.
ಕರ್ನಾಟಕ ನೀರಾವರಿ ನಿಗಮದ ಮೂಲಕ ಈ ಜಲಾಶಯದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ, ಜಲಾಶಯದ ವ್ಯಾಪ್ತಿಯಲ್ಲಿ ಎರಡು ಕಾಲುವೆಗಳನ್ನು ನಿರ್ಮಿಸಲಾಗುತ್ತಿದ್ದು ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ನಿರ್ಮಾಣ ಮತ್ತು ಭೂಸ್ವಾದೀನಕ್ಕೆ 78 ಕೋಟಿ ರೂಪಾಯಿಗಳ ಅನುದಾನ ನೀಡಲಾಗಿದೆ ಎಂದರು.
ಕಿಣಯೇ ಡ್ಯಾಂ ವ್ಯಾಪ್ತಿಯಲ್ಲಿ 10 ಕಿ.ಮೀ ಉದ್ದದ ಎರಡು ಕಾಲುವೆ ನಿರ್ಮಿಸಲಾಗುತ್ತಿದೆ. ಬಲದಂಡೆಯ ಕಾಲುವೆ 6 ಕಿ.ಮೀ ವ್ಯಾಪ್ತಿ ಹೊಂದಿದ್ದು, ಕಿಣಯೇ, ರಣಕುಂಡೆ, ಸಂತಿಬಸ್ತವಾಡ, ವಾಘವಾಡೆ ಗ್ರಾಮಗಳ 2300 ಎಕರೆ ಭೂಮಿ ನೀರಾವರಿಗೆ ಒಳಪಡಲಿದೆ. ಎಡದಂಡೆ ಕಾಲುವೆ 4 ಕಿ.ಮೀ ವ್ಯಾಪ್ತಿ ಹೊಂದಿದ್ದು, ಕಿಣಯೇ ಮತ್ತು ಬಾದರವಾಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ 700 ಎಕರೆ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸಲಿದೆ ಎಂದು ಸಚಿವರು ತಿಳಿಸಿದರು.
ಒಂದು ಕಾಲುವೆ ವಾಘವಾಡೆ ಗ್ರಾಮದ ಕೆರೆಗೆ ಮುಕ್ತಾಯವಾಗಲಿದ್ದು, ಇನ್ನೊಂದು ಕಾಲುವೆ ಬಾದರವಾಡಿ ಗ್ರಾಮದ ಕೆರೆ ಪ್ರದೇಶ ಮುಟ್ಟಲಿದೆ. ಈ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ತ್ವರಿತಗತಿಯಲ್ಲಿ ನಡೆಯಬೇಕು ಎಂದು ಹೇಳಿದ ಸಚಿವರು, ಭೂ ಸ್ವಾಧೀನಕ್ಕೆ ಅನುದಾನದ ಅಡಚಣೆ ಇಲ್ಲ. ರೈತರ ಮನವಿಯಂತೆ ಅಗತ್ಯವಿರುವ ಕಡೆ ರಸ್ತೆಗಳನ್ನು ನಿರ್ಮಾಣಮಾಡಬೇಕು ಎಂದರು.
ಹೊಸ ಕಾಮಗಾರಿ ವರದಿಗೆ ಸೂಚನೆ: ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪರಿಶೀಲಿಸಿದ ಸಚಿವರು ಜಿಲ್ಲೆಯಲ್ಲಿ ಹೊಸದಾಗಿ ಕೈಗೊಳ್ಳಬೇಕಿರುವ ಯೋಜನೆಗಳ ಕುರಿತು ವಿಸ್ತೃತ ಯೋಜನಾ ವರದಿ(ಡಿಪಿಆರ್) ಸಿದ್ಧಪಡಿಸುವಂತೆ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಬಹುತೇಕ ಕಾಮಗಾರಿಗಳು ಸ್ಥಗಿತಗೊಂಡಿವೆ. ಕಾರಣ ಮುಂಬರುವ ದಿನಗಳಲ್ಲಿ ಇನ್ನಷ್ಟು ವೇಗದಿಂದ ಕೆಲಸ ನಿರ್ವಹಿಸುವಂತೆ ನಿರ್ದೇಶನ ನೀಡಿದರು. ಮಾಜಿ ಶಾಸಕ ಸಂಜಯ ಪಾಟೀಲ, ನೀರಾವರಿ ನಿಗಮದ ಉತ್ತರ ವಲಯದ ಮುಖ್ಯ ಎಂಜಿನಿಯರ್ ಅರವಿಂದ್ ಕಣಗಿಲ್ ಹಿರಿಯ ಅಧಿಕಾರಿಗಳು, ರೈತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು 0 ಪರ್ಸೆಂಟ್ ಅಭಿವೃದ್ಧಿ,100 ಪರ್ಸೆಂಟ್ ಭ್ರಷ್ಟಾಚಾರದ ಸರಕಾರ: ಸುನಿಲ್
ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ
Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್ ಆಸ್ಪತ್ರೆ: ಶರಣಪ್ರಕಾಶ್ ಪಾಟೀಲ್
Online Gaming: ಪ್ರತ್ಯೇಕ ಚರ್ಚೆಗೆ ಪಕ್ಷಾತೀತವಾಗಿ ಒತ್ತಾಯ
Almatti ಡ್ಯಾಂ ವಿಸ್ತರಣೆಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Service Variation: ಸರಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ
Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ
Kundapura: ಸರಕಾರಿ ಕಾಲೇಜಿನ ಎನ್‌ವಿಆರ್ ಕೆಮರಾ ಕಳವು
Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್
Belthangady: ಕಾರು-ದ್ವಿಚಕ್ರ ವಾಹನ ಅಪಘಾತ: ಗಾಯಾಳಾಗಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.