Congress ಅಭ್ಯರ್ಥಿ ಮಹಾವೀರ ಮೋಹಿತೆ ನಾಮಪತ್ರ ಸಲ್ಲಿಕೆ
ಅಪಾರ ಬೆಂಬಲಿಗರೊಂದಿಗೆ ಬೃಹತ್ ಮೆರವಣಿಗೆ
Team Udayavani, Apr 19, 2023, 7:33 PM IST
ಚಿಕ್ಕೋಡಿ: ರಾಯಬಾಗ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಮಹಾವೀರ ಮೋಹಿತೆ ಅಪಾರ ಬೆಂಬಲಿಗರೊಂದಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ರಾಯಬಾಗ ಪಟ್ಟಣದ ದಿಗ್ಗೆವಾಡಿ ಕ್ರಾಸ್ ದಿಂದ ತಹಶೀಲ್ದಾರರ ಕಚೇರಿಯವರಿಗೆ ಬೃಹತ್ ಮೆರವಣಿಗೆ ನಡೆಸಿ ಚುನಾವಣಾಧಿಕಾರಿ ಬಳಿ ಕಾಂಗ್ರೆಸ್ ಅಭ್ಯರ್ಥಿ ಮಹಾವೀರ ಮೋಹಿತೆ ನಾಮಪತ್ರ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು. ರಾಯಬಾಗ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ವಿಶ್ವಾಸ ಮೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ. ಶಾಸಕಿ ಲಕ್ದ್ಮೀ ಹೆಬ್ಬಾಳಕರ ಮಾರ್ಗದರ್ಶನದಲ್ಲಿ ಹೈಕಮಾಂಡ್ ಟಿಕೆಟ್ ನೀಡಿದೆ. ಈ ಚುನಾವಣೆಯಲ್ಲಿ ಹೆಚ್ಚಿನ ಮತಗಳ ಅಂತರದಿಂದ ನನ್ನ ಗೆಲುವು ಖಚಿತವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಯಬಾಗ ಕ್ಷೇತ್ರದಲ್ಲಿ ಕಳೆದ 10 ವರ್ಷದಿಂದ ಪಕ್ಷ ಸಂಘಟನೆ ಮಾಡಲಾಗಿತ್ತು. ಕಾಂಗ್ರೆಸ್ ಪಕ್ಷ ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಿದೆ. ಕ್ಷೇತ್ರದ ಮತದಾರರು ತಮ್ಮ ಸೇವೆ ಮಾಡಲು ನನಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ರಾಯಬಾಗ ಕ್ಷೇತ್ರದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಬೇಕು. ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೈಟಿಕ್ ಆಸ್ಪತ್ರೆ ನಿರ್ಮಾಣ. ಹೈಟಿಕ ಶಾಲೆಗಳು ಮತ್ತು ಯುವಕರಿಗೆ ಉದ್ಯೋಗ ಕಲ್ಪಿಸುವ ಕೈಗಾರಿಕೆ ಸ್ಥಾಪನೆ ಮಾಡುವ ಗುರಿ ಇದೆ. ಕಾರ್ಯಕರ್ತರು ಅಪಾರವಾಗಿ ಬೆಂಬಲ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ದ್ಮಣರಾವ ಚಿಂಗಳೆ, ಮುಖಂಡರಾದ ಸದಾಶಿವ ದೇಶಿಂಗೆ, ಅರ್ಜುನ ನಾಯಿಕವಾಡಿ, ರಾಜು ಕೊಟಗಿ, ರಾಜು ಪಾಟೀಲ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.