Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Team Udayavani, Jan 3, 2025, 2:34 PM IST
ಬೆಳಗಾವಿ: ಬೆಂಗಳೂರಿನಲ್ಲಿ ನಮ್ಮ ನಿವಾಸದಲ್ಲಿ ನಡೆದ ಔತಣಕೂಟ ಮತ್ತು ಸಭೆಗೆ ಯಾವುದೇ ರಾಜಕೀಯ ಮಹತ್ವ ನೀಡಬೇಕಾದ ಅಗತ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿಯಲ್ಲಿ ಶುಕ್ರವಾರ (ಜ.03) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಔತಣಕೂಟ ನಡೆಸುತ್ತಿರುವುದು ಇದೇ ಮೊದಲೇನಲ್ಲ. ಈಗಾಗಲೇ ಸಾಕಷ್ಟು ಸಲ ಇಂತಹ ಸಭೆ ಮಾಡಿದ್ದೇವೆ. ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದೇವೆ. ಹೀಗಿರುವಾಗ ಈ ಸಭೆಗೆ ಮಹತ್ವ ನೀಡಬೇಕಿಲ್ಲ ಎಂದರು.
ಮುಖ್ಯಮಂತ್ರಿಗಳು ನಮ್ಮ ಮನೆಗೆ ಬರುವುದು ಹೊಸದೇನಲ್ಲ. ನಾವು ಅವರ ಮನೆಗೆ ಹೋಗುತ್ತೇವೆ. ಅವರು ನಮ್ಮ ಮನೆಗೆ ಬರುತ್ತಾರೆ. ಮುಖ್ಯಮಂತ್ರಿಗಳ ಜೊತೆಗೆ ಎಲ್ಲ ಸಚಿವರು ಮಾತನಾಡಬೇಕು ಎಂದರು. ಹಾಗಾಗಿ ಹೊಸ ವರ್ಷದ ಸಂದರ್ಭದಲ್ಲಿ ಸೇರಿದ್ದೇವೆ ಎಂದು ಸಮಜಾಯಿಷಿ ನೀಡಿದರು.
ಸಭೆಯಲ್ಲಿ ರಾಜ್ಯದ ಆಡಳಿತ ವ್ಯವಸ್ಥೆ ಸುಧಾರಿಸಿ, 2028ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ವಿಚಾರವಾಗಿ ಚರ್ಚಿಸಲಾಗಿದೆ. ಸಂಪುಟ ಪುನರ್ರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚಿಸಿಲ್ಲ ಎಂದು ಸ್ಪಷ್ಟನೆ ನೀಡಿದರು.
ಸಭೆಯಲ್ಲಿ ಅಹಿಂದ ನಾಯಕರಷ್ಟೆ ಸೇರಿದ್ದರ ಬಗ್ಗೆ ಪ್ರತಿಕ್ರಿಯಿಸಿ, ಈ ಸಭೆ ತುರ್ತಾಗಿ ನಿಗದಿಯಾಯಿತು. ತಕ್ಷಣಕ್ಕೆ ಲಭ್ಯವಿರುವ ಕೆಲವರು ಮಾತ್ರ ಸೇರಿದೆವು. ಪ್ರವಾಸ ಮೊದಲಾದ ಕಾರಣಕ್ಕೆ ಕೆಲವರಿಗೆ ಹಾಜರಾಗಲು ಸಾಧ್ಯವಿಲ್ಲ. ಹಾಗಾಗಿ ಇದಕ್ಕೆ ರಾಜಕೀಯ ಹೆಚ್ಚು ಮಹತ್ವ ನೀಡಬೇಕಿಲ್ಲ ಎಂದು ಹೇಳಿದರು.
ಸಂಪುಟ ಪುನರ್ರಚನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅನೇಕ ನಾಯಕರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಈ ಬಗ್ಗೆ ಪಕ್ಷದ ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷರು ಮತ್ತು ಮುಖ್ಯಮಂತ್ರಿ ನಿರ್ಣಯ ಕೈಗೊಳ್ಳುತ್ತಾರೆ. ಸದ್ಯಕ್ಕೆ ಅಂತಹ ಯಾವುದೇ ಬೆಳವಣಿಗೆ ಇಲ್ಲ ಎಂದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಸಾಧ್ಯತೆ ಕುರಿತು ಪ್ರತಿಕ್ರಿಯಿಸಿದ ಜಾರಕಿಹೊಳಿ, ಒಬ್ಬರಿಗೆ ಒಂದೇ ಹುದ್ದೆ ಎಂಬುದು ಇದೆ. ಆದರೆ ಆಯಾ ನಾಯಕನ ಸಾಮರ್ಥ್ಯ ಮತ್ತು ಅನಿವಾರ್ಯತೆಗೆ ಅನುಗುಣವಾಗಿ ಕರ್ನಾಟಕ ಮಾತ್ರವಲ್ಲದೆ ಬೇರೆ ರಾಜ್ಯಗಳಲ್ಲೂ ಕೆಲವೊಮ್ಮೆ ಒಬ್ಬರಿಗೆ ಎರಡು ಹುದ್ದೆ ಕೊಟ್ಟ ಉದಾಹರಣೆಗಳಿವೆ. ಯಾರಿಗೆ ಎಷ್ಟು ಹುದ್ದೆ ಕೊಡಬೇಕು ಎಂಬುದರ ಬಗ್ಗೆ ಪಕ್ಷ ನಿರ್ಧರಿಸುತ್ತದೆ. ಈಗ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಬಗ್ಗೆ ಚರ್ಚೆಯೇ ಆಗಿಲ್ಲ. ಸದ್ಯ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಸಮಯ ಬಂದಾಗ ಅದರ ಬಗ್ಗೆ ಚರ್ಚಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.