ಹಳೆ ಪಿಂಚಣಿ ಪದ್ಧತಿಗೆ ಆಗ್ರಹ;  ಹೊಸ ಪಿಂಚಣಿ ವ್ಯವಸ್ಥೆಗೆ ಕಾಂಗ್ರೆಸ್‌, ಜೆಡಿಎಸ್‌ ವಿರೋಧ


Team Udayavani, Dec 21, 2022, 7:10 AM IST

ಹಳೆ ಪಿಂಚಣಿ ಪದ್ಧತಿಗೆ ಆಗ್ರಹ;  ಹೊಸ ಪಿಂಚಣಿ ವ್ಯವಸ್ಥೆಗೆ ಕಾಂಗ್ರೆಸ್‌, ಜೆಡಿಎಸ್‌ ವಿರೋಧ

ಬೆಳಗಾವಿ: ನೂತನ ಪಿಂಚಣಿ ಯೋಜನೆ ರದ್ದತಿಗಾಗಿ ನಡೆಯುತ್ತಿರುವ ಹೋರಾಟ ವಿಧಾನಸಭೆಯಲ್ಲಿ  ಮಂಗಳವಾರ ಪ್ರತಿಧ್ವನಿಸಿ ಕೆಲಕಾಲ ವಾತಾವರಣವನ್ನು ಕಾವೇರಿಸಿತು. ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಶಾಸಕರು ಚರ್ಚೆಗೆ ಅವಕಾಶ ಕಲ್ಪಿಸಬೇಕು ಹಾಗೂ ಸರಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಪಟ್ಟು ಹಿಡಿದರು.

ಸಾವಿರಾರು ಮಂದಿ ನೌಕರರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಆಡಳಿತ ವ್ಯವಸ್ಥೆಯೂ ಕುಸಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿಯವರು ಧರಣಿ ನಿರತರ ಜತೆ ಮಾತುಕತೆ ನಡೆಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಇದೊಂದು ಗಂಭೀರ ವಿಷಯ. ಸರಕಾರವು ಸರಕಾರಿ ನೌಕರರ ವಿಚಾರದಲ್ಲಿ ಯಾವುದೇ ರೀತಿಯಲ್ಲಿ ಅನ್ಯಾಯವಾಗಲು ಅವಕಾಶ ಕಲ್ಪಿಸಿಲ್ಲ. ತುಟ್ಟಿಭತ್ತೆ ಸೇರಿದಂತೆ ಹಲವು ಸೌಲಭ್ಯ ತತ್‌ಕ್ಷಣವೇ ನೀಡಿದೆ. ಏಳನೇ ವೇತನ ಆಯೋಗ ಶಿಫಾರಸು  ಕುರಿತೂ ಸಮಿತಿ ಸಹ ರಚಿಸಿದೆ ಎಂದು ಹೇಳಿದರು.

ಪಿಂಚಣಿ ವ್ಯವಸ್ಥೆಯ ಸಾಧಕ-ಬಾಧಕ ಚರ್ಚೆಯಾಗ ಬೇಕಿದೆ. ರಾಜ್ಯದ ಬೊಕ್ಕಸದ ಮೇಲೆ ಆಗುವ ಪರಿಣಾಮಗಳ ಬಗ್ಗೆ  ಸಮಾಲೋಚಿಸಿ ನಿರ್ಣಯ ಕೈಗೊಳ್ಳಬೇಕಿದೆ. ಹೀಗಾಗಿ ಪ್ರತ್ಯೇಕ ಕಾಲಾವಕಾಶ ಕೊಟ್ಟು ಚರ್ಚೆಗೆ ಸಮಯ ನಿಗದಿ ಮಾಡಿ’ ಎಂದರು. ಇದಕ್ಕೆ ಒಪ್ಪಿದ ಸೀ³ಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಚರ್ಚೆಗೆ ಅವಕಾಶ ಕೊಡುವುದಾಗಿ ತಿಳಿಸಿದರು.

ಶೂನ್ಯವೇಳೆಯಲ್ಲಿ  ಪ್ರಸ್ತಾವ
ಶೂನ್ಯ ವೇಳೆಯಲ್ಲಿ ಜೆಡಿಎಸ್‌ನ ಲಿಂಗೇಶ್‌ ವಿಷಯ ಪ್ರಸ್ತಾವಿಸಿ 2006ರ ಅನಂತರ ಜಾರಿಗೆ ಬಂದಿರುವ ನೂತನ ಪಿಂಚಣಿ ವ್ಯವಸ್ಥೆಯಿಂದ 2.28 ಲಕ್ಷ ನೌಕರರು ಅತಂತ್ರ ಗೊಂಡಿದ್ದಾರೆ. ಅವರಿಂದ ಕಡಿತಗೊಳ್ಳುವ ಹಣ ಜೂಜಿಗೆ  ಬಳಸಲಾಗುತ್ತಿದೆ. ಮ್ಯೂಚುಯಲ್‌ ಫಂಡ್‌ನ‌ಲ್ಲಿ ಹೂಡಿಕೆ ಮಾಡಿರುವುದು ದುರಂತ. ತತ್‌ಕ್ಷಣ ರಾಜ್ಯ ಸರಕಾರ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ಮುಂದಾಗಿ ನೌಕರರಿಗೆ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

ಇದಕ್ಕೆ  ಜೆಡಿಎಸ್‌ನ ಸಾ.ರಾ.ಮಹೇಶ್‌, ಶಿವಲಿಂಗೇಗೌಡ, ಎ.ಟಿ. ರಾಮಸ್ವಾಮಿ, ಕಾಂಗ್ರೆಸ್‌ನ ಅಂಜಲಿ ಲಿಂಬಾಳ್ಕರ್‌ ಸೇರಿ ಹಲವು ಸದಸ್ಯರು ಧ್ವನಿಗೂಡಿಸಿದರು.

ಸರಕಾರದಿಂದ ಭರವಸೆ
ಹಳೇ ಪಿಂಚಣಿ ವ್ಯವಸ್ಥೆಯ ಮರುಜಾರಿಗೆ ವಿಧಾನ ಪರಿಷತ್‌ನಲ್ಲಿ ಆಗ್ರಹಿಸಲಾಯಿತು. ಪರಿಷತ್‌ ನಲ್ಲಿ  ಜೆಡಿಎಸ್‌ನ ಮರಿತಿಬ್ಬೇಗೌಡ, ಬಿಜೆಪಿಯ ಎಸ್‌.ವಿ. ಸಂಕನೂರು ಸೇರಿ ಇನ್ನಿತರರು ಪ್ರಸ್ತಾವಿಸಿದ ವಿಷಯಕ್ಕೆ ಉತ್ತರಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ಸಂಬಂಧಿಸಿದಂತೆ ಸಿಎಂ ಬಸವ ರಾಜ ಬೊಮ್ಮಾಯಿ ಅವರು ಚರ್ಚಿಸುತ್ತಿದ್ದಾರೆ. ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿದೆ ಎಂದರು.

ಅದೇ ರೀತಿ ಅನುದಾನಿತ ಶಾಲೆಯ ಎಲ್ಲ ಬಗೆಯ ಸಿಬಂದಿಯನ್ನು ಪಿಂಚಣಿ ವ್ಯವಸ್ಥೆ ವ್ಯಾಪ್ತಿಗೆ ತರುವ ಕುರಿತು ಆರ್ಥಿಕ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಅದಕ್ಕೂ ಮುನ್ನ ಮಾತನಾಡಿದ ಸದಸ್ಯರು, ಹೊಸ ಪಿಂಚಣಿ ವ್ಯವಸ್ಥೆಯಿಂದಾಗಿ ನಿವೃತ್ತಿ ಬಳಿಕ ನೌಕರರಿಗೆ ಕಡಿಮೆ ಮೊತ್ತದ ಪಿಂಚಣಿ ಬರುತ್ತಿದೆ. ಹಾಗಾಗಿ  ಜನಪ್ರತಿನಿಧಿಗಳ ಮಾದರಿಯಲ್ಲಿಯೇ, ಸರ ಕಾರಿ ನೌಕರರನ್ನೂ ಹಳೇ ಪಿಂಚಣಿ ವ್ಯವಸ್ಥೆಗೆ ಒಳಪಡಿಸಿ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದು ಮಾಡಬೇಕು ಎಂದರು.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.