ರಾಜೀನಾಮೆ ಹಿಂದೆ ಪಿತೂರಿ:ಅಂದು ಬಸವಣ್ಣ ಇಂದು BSY:ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಬೇಸರ
Team Udayavani, Jul 26, 2021, 7:07 PM IST
ಬೆಳಗಾವಿ: ಮನುವಾದಿಗಳು 12ನೇ ಶತಮಾನದಲ್ಲಿ ಬಸವಣ್ಣನವರನ್ನು ಅಧಿಕಾರದಿಂದ ಕೆಳಗಿಳಿಸಿದಂತೆ, ಇಂದು ಕೂಡ ಪಿತೂರಿ ಮಾಡಿ ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು.
ಗೋಕಾಕ ನಗರದ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನಗೆ 12ನೇ ಶತಮಾನ ನೆನಪಾಗುತ್ತಿದೆ. 1000 ವರ್ಷಗಳ ಹಿಂದೆ ಬಸವಣ್ಣನವರು ಮಂತ್ರಿಗಳಾಗಿದ್ದರು. ಅಂದು ಕೂಡ ಮನುವಾದಿಗಳು ಅವರನ್ನು ಅಧಿಕಾರದಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದರು. ಇಂದು ಕೂಡ ಮುಖ್ಯಮಂತ್ರಿ ಯಡಿಯೂರಪ್ಪನವರ ಮೇಲೆ ಒತ್ತಡ ಹೇರಿ ಅಧಿಕಾರದಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಕಳೆದ 2 ತಿಂಗಳಿಂದ ಈ ಬಗ್ಗೆ ಚರ್ಚೆಯಾಗುತ್ತಿತ್ತು. ಈಗ ಯಡಿಯೂರಪ್ಪ ಅಧಿಕಾರದಿಂದ ಇಳಿದಿದ್ದಾರೆ. ಆದರೆ, ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ರೀತಿ ಸರಿಯಲ್ಲ. ಅವರಿಗೆ ಪಕ್ಷ ಹಾಗೂ ಹೈಕಮಾಂಡ್ ಒತ್ತಡ ಹೇರಿದ್ದಾರೆ. ಒತ್ತಡದಿಂದಲೇ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು.
ಯಡಿಯೂರಪ್ಪ ಒಬ್ಬ ಜನನಾಯಕ. ಅವರು ಭಾವುಕರಾಗಿ ಭಾಷಣ ಮಾಡಿದ್ದು ನೋಡಿದರೆ ಅವರ ಮೇಲೆ ಒತ್ತಡ ಹೇರಿರುವುದು ಗೊತ್ತಾಗುತ್ತಿದೆ. ಯಾವುದೇ ರಾಜಕೀಯ ಪಕ್ಷದಲ್ಲಿ ಹಿರಿಯ ನಾಯಕರನ್ನು ಗೌರವಯುತವಾಗಿ ಹೊರಹೋಗಲು ಅವಕಾಶ ಮಾಡಿಕೊಡಬೇಕು. ಯಡಿಯೂರಪ್ಪ ಅವರಿಗೆ ಈ ರೀತಿ ಅವಮಾನ ಮಾಡಿರುವುದು ಸರಿಯಲ್ಲ ಎಂದರು.
ಬಸವಣ್ಣನವರ ರೀತಿಯಲ್ಲಿ ಯಡಿಯೂರಪ್ಪನವರು ಕೂಡ ಮನುವಾದಿಗಳ ವಿರುದ್ಧ ಹೋರಾಟ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು
ಯಡಿಯೂರಪ್ಪ ನವರ ರಾಜೀನಾಮೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಲಾಭ ಅಥವಾ ನಷ್ಟ ಈಗಲೇ ಗೊತ್ತಾಗುವುದಿಲ್ಲ. ಅದಕ್ಕೆ ಸಮಯ ಬೇಕಾಗುತ್ತದೆ. ನಮ್ಮ ಪಕ್ಷದ ಸಂಘಟನೆ, ಹೋರಾಟ ಇದೇ ರೀತಿ ಮುಂದುವರೆಯುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.