Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಬೆಳಗಾವಿಯಲ್ಲಿ ಸಂಭ್ರಮದ ಸಿದ್ಧತೆ
Team Udayavani, Dec 26, 2024, 7:25 AM IST
ಬೆಳಗಾವಿ: ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಐತಿಹಾಸಿಕ ಕಾರ್ಯಕ್ರಮ. ಇದರ ಭಾಗವಾಗಿ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿರುವ ಸ್ಥಳಕ್ಕೆ ಮಹಾತ್ಮ ಗಾಂಧಿ ನವನಗರ ಎಂದು ನಾಮಕರಣ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ ಎಂಬ ಘೋಷಣೆ ಮಾಡಿದ್ದೇವೆ. ಡಿ. 26ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಗಾಂಧಿ ಬಾವಿ (ಪಂಪ ಸರೋವರ) ಬಳಿ ನಡೆಯಲಿದೆ. 1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧಿ ಅವರು ಅಧ್ಯಕ್ಷರಾಗಿದ್ದರು. ಇಂದು ಅದೇ ಸ್ಥಾನದಲ್ಲಿ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಕುಳಿತಿರುವುದು ನಮ್ಮ ಹೆಮ್ಮೆ ಎಂದರು.
1924ರಲ್ಲಿ ನಡೆದ ಅಧಿವೇಶನ ಸಮಯದಲ್ಲಿ ಕರ್ನಾಟಕದವರೇ ಆದ ಗಂಗಾಧರ ದೇಶಪಾಂಡೆ ಹಾಗೂ ಜವಾಹರ್ ಲಾಲ್ ನೆಹರೂ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಆಗ 80 ಎಕರೆ ಜಾಗದಲ್ಲಿ ಅಧಿವೇಶನ ನಡೆದಿತ್ತು. ಈಗ ಅದೇ ಸ್ಥಳದಲ್ಲಿ ಕಾರ್ಯಕಾರಿ ಸಮಿತಿ ಸಭೆ ಮಾಡುತ್ತಿದ್ದೇವೆ ಎಂದರು.
1924ರ ಅಧಿವೇಶನದಲ್ಲಿ ನಮ್ಮ ನಾಯಕರು ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿಕೊಂಡು ದೇಶಕ್ಕೆ ಮಾರ್ಗದರ್ಶನ ನೀಡಿದ್ದರು.
ಸ್ವಾತಂತ್ರ್ಯ ತಂದು ಕೊಟ್ಟು ಮಹಾತ್ಮರಾದರು. ಇದನ್ನು ಸ್ಮರಿಸಲು ನಾವು ಕಾರ್ಯಕ್ರಮ ರೂಪಿಸಿದ್ದೇವೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಲ್ಲ, ಎಲ್ಲರ ಕಾರ್ಯಕ್ರಮ. ಇಂದಿನ ಪರಿಸ್ಥಿತಿಯಲ್ಲಿ ದೇಶ ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು, ದೇಶಕ್ಕೆ ಯಾವ ರೀತಿ ಶಕ್ತಿ ತುಂಬಬೇಕು ಎಂದು ಈ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಲಿದ್ದೇವೆ ಎಂದರು.
ಇಂದು ಏನು ಕಾರ್ಯಕ್ರಮ?
ಡಿ. 26ರಂದು ಬೆಳಗ್ಗೆ 10 ಗಂಟೆಗೆ ವೀರಸೌಧದಲ್ಲಿ ಗಾಂಧಿ ಪುತ್ಥಳಿ ಅನಾವರಣ, ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು. 10.45ಕ್ಕೆ ಖಾದಿ ಮೇಳ ಉದ್ಘಾಟನೆ. 11.15ಕ್ಕೆ ಗಂಗಾಧರ ದೇಶಪಾಂಡೆ ಅವರ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅನಾವರಣ ಮಾಡುವರು. ಅನಂತರ ಗಂಗಾಧರ ದೇಶಪಾಂಡೆ ಅವರ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು. ಮಧ್ಯಾಹ್ನ 3 ಗಂಟೆಗೆ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ರಾತ್ರಿ 7ಕ್ಕೆ ಎಐಸಿಸಿ ಅಧ್ಯಕ್ಷರಿಂದ ಭೋಜನಕೂಟ ಏರ್ಪಡಿಸಲಾಗಿದೆ.
ನಾಳೆ ಏನು ಕಾರ್ಯಕ್ರಮ?
ಡಿ. 27ರಂದು ಬೆಳಗ್ಗೆ 10.30ಕ್ಕೆ ಸುವರ್ಣ ವಿಧಾನಸೌಧದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ಮುಖ್ಯಮಂತ್ರಿಗಳು ಅಧ್ಯಕ್ಷತೆ ವಹಿಸಲಿದ್ದು, ಸಭಾಧ್ಯಕ್ಷ ಯು.ಟಿ. ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಅವರ ಮುಖಂಡತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಎಲ್ಲ ಪಕ್ಷದ ನಾಯಕರು ಪಾಲ್ಗೊಳ್ಳುವರು. ಅನಂತರ 12 ಗಂಟೆಗೆ ಮುಖ್ಯಮಂತ್ರಿಗಳಿಂದ ಔತಣಕೂಟ ಆಯೋಜಿಸಲಾಗಿದೆ. ಇದಾದ ಬಳಿಕ ಮಧ್ಯಾಹ್ನ 1 ಗಂಟೆಗೆ ಸಿಪಿಎಡ್ ಮೈದಾನದಲ್ಲಿ ಸಾರ್ವಜನಿಕ ಸಮಾವೇಶ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.