ಕಾಂಗ್ರೆಸ್ ಮೂರನೇ ಗ್ಯಾರಂಟಿ: ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ
Team Udayavani, Feb 24, 2023, 2:27 PM IST
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮೊದಲು ಕಾಂಗ್ರೆಸ್ ಮೂರನೇ ಗ್ಯಾರಂಟಿಯನ್ನು ಪ್ರಕಟಿಸಿದ್ದು, ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಘೋಷಿಸಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ನೆರವಾಗುವ ಉದ್ದೇಶದಿಂದ ಈಗಾಗಲೇ ಎರಡು ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ. ಈಗ ಮೂರನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ಕುಟುಂಬದ ಪ್ರತಿ ಸದಸ್ಯನಿಗೆ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಿದ್ದೇವೆ ಎಂದರು.
ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ನೆರವು ನೀಡುವ ಉದ್ದೇಶದಿಂದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆ ಮೊದಲ ಗ್ಯಾರಂಟಿಯಾಗಿ ಘೋಷಣೆ ಮಾಡಿದ್ದೇವೆ. ಆ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 1500 ರೂ ಉಳಿತಾಯ ಮಾಡಲು ಸಹಕಾರಿಯಾಗುತ್ತಿದ್ದೇವೆ. ಇನ್ನು ಪ್ರತಿ ಮನೆಯ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನವನ್ನು ನೀಡಲು ಗೃಹಲಕ್ಷ್ಮಿ ಎಂಬ ಎರಡನೇ ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ ಎಂದರು.
ಪ್ರಜಾಧ್ವನಿ ಯಾತ್ರೆ ಸಂದರ್ಭದಲ್ಲಿ ನಮ್ಮ ಹಿಂದಿನ ಸರ್ಕಾರದ ಅನ್ನಭಾಗ್ಯ ಯೋಜನೆ ಬಗ್ಗೆ ಜನ ಪ್ರಶಂಸೆ ವ್ಯಕ್ತಿಪಡಿಸಿದ್ದು, ಒಂದು ವೇಳೆ ಕಾಂಗ್ರೆಸ್ ಸರ್ಕಾರ ಈ ಯೋಜನೆ ನೀಡದಿದ್ದರೆ ಕೋವಿಡ್ ಸಮಯದಲ್ಲಿ ನಾವು ಬದುಕು ನಡೆಸುವುದೇ ಕಷ್ಟವಾಗುತ್ತಿತ್ತು ಎಂದು ಹೇಳಿದರು.
KPCC ಕಚೇರಿಯಲ್ಲಿ ಇಂದು ಕಾಂಗ್ರೆಸ್ನ 3ನೇ ಗ್ಯಾರಂಟಿಯಾದ “ಅನ್ನ ಭಾಗ್ಯ”ವನ್ನು ಅಧಿಕೃತವಾಗಿ ಘೋಷಿಸಲಾಯಿತು. ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಮಾಸಿಕ 10KG ಉಚಿತ ಅಕ್ಕಿ ನೀಡಲಿದ್ದೇವೆ. ಹೊಟ್ಟೆ ತುಂಬಿದ BJP ಸರ್ಕಾರಕ್ಕೆ ಹಸಿವಿನ ಸಂಕಟ ತಿಳಿದಿಲ್ಲ. ಕೆಲವೇ ದಿನಗಳಲ್ಲಿ ಬಡವರು, ಹಸಿದವರ ಪರವಾಗಿರುವ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. pic.twitter.com/Ufga1kVdrW
— DK Shivakumar (@DKShivakumar) February 24, 2023
ನಮ್ಮ ಸರಕಾರ ನೀಡುತಿದ್ದ 7 ಕೆ.ಜಿ ಅಕ್ಕಿಯನ್ನು ಬಿಜೆಪಿ ಸರ್ಕಾರ 5 ಕೆ.ಜಿಗೆ ಇಳಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ನಾನು, ನಮ್ಮ ಶಾಸಕಾಂಗ ಪಕ್ಷದ ನಾಯಕರು, ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಇತರ ನಾಯಕರೆಲ್ಲರೂ ಸೇರಿ ಚರ್ಚಿಸಿ ಅನ್ನಭಾಗ್ಯ ಯೋಜನೆಗೆ ಹೆಚ್ಚಿನ ಶಕ್ತಿ ತುಂಬಬೇಕು, ಆ ಮೂಲಕ ರಾಜ್ಯವನ್ನು ಹಸಿವು ಮುಕ್ತವನ್ನಾಗಿ ಮಾಡಬೇಕು ಎಂದು ನಮ್ಮ ಮೂರನೇ ಗ್ಯಾರಂಟಿ ಯೋಜನೆಯಾಗಿ 10 ಕೆ.ಜಿ ಅಕ್ಕಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಡಿಕೆಶಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.