ಯಶಸ್ಸು ನಿರಂತರ ಪ್ರಯಾಣ:ಮೆಳಿಗೇರಿ
ಎಲ್ಲರ ಸಮನ್ವಯತೆಯಿಂದ ಕೆಲಸ ಆಗಬೇಕು. ಇಲ್ಲದಿದ್ದರೆ ಇದು ಪ್ರಚಾರದ ಕಾರ್ಯಕ್ರಮ ಆಗುತ್ತದೆ.
Team Udayavani, Apr 9, 2022, 5:26 PM IST
ಬೆಳಗಾವಿ: ಯಶಸ್ಸು ಎನ್ನುವುದು ರಾತ್ರೋರಾತ್ರಿ ಸಿಗುವಂಥದ್ದಲ್ಲ. ಅದೊಂದು ಪ್ರಯಾಣ. ನಿರಂತರವಾಗಿ ಪ್ರಯತ್ನಿಸಿದಾಗಲೇ ಯಶಸ್ಸು ಸಿಗುತ್ತದೆ ಎಂದು ಏಕಸ್ ಸಂಸ್ಥೆ ಅಧ್ಯಕ್ಷ, ಸಿಇಒ ಅರವಿಂದ ಮೆಳ್ಳಿಗೇರಿ ಹೇಳಿದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ| ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಬೆಳಗಾವಿ ವಿಭಾಗದ ಜಿಲ್ಲೆಗಳ ವ್ಯಾಪ್ತಿಯ ಉದ್ಯಮಿಯಾಗು-ಉದ್ಯೋಗ ನೀಡು ಕಾರ್ಯಾಗಾರ ಹಾಗೂ ಕೈಗಾರಿಕಾ ಅದಾಲತ್‌ನಲ್ಲಿ ಅವರು ಮಾತನಾಡಿದರು.
ಪ್ರತಿ ವರ್ಷ 1 ಕೋಟಿ ಉದ್ಯೋಗ ನೀಡಬೇಕಾಗಿದೆ. ಇದಕ್ಕೆ ಪೂರಕವಾಗಿ ಉದ್ಯಮಿಗಳನ್ನು ರೂಪಿಸುವುದು ಮುಖ್ಯವಾಗುತ್ತದೆ. ಈ ಕಾರ್ಯಕ್ರಮ ಸಹಕಾರಿಯಾಗಿದೆ. ಮೊದಲು ಸಣ್ಣ ಉದ್ಯೋಗ ಆರಂಭಿಸಿ ಬೆಳೆಯಬೇಕು. ವಿದ್ಯಾರ್ಥಿಗಳು ನಿಮ್ಮ ಭವಿಷ್ಯದ ಎಲ್ಲ ಕನಸುಗಳ ಬಗ್ಗೆ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು. ಬರುವ ದಿನಗಳಲ್ಲಿ ನಿಮ್ಮ ಉದ್ಯಮ ಸ್ಥಾಪಿಸಲು ಯೋಜನೆಯನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು. ಭಾರತದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಉತ್ಪಾದನೆಗೆ ಉತ್ತಮ ಭವಿಷ್ಯ ಇದೆ ಎಂದು ಅಭಿಪ್ರಾಯಪಟ್ಟರು.
ಆರೆಸ್ಸೆಸ್ ಮುಖಂಡ ರಾಘವೇಂದ್ರ ಕಾಗವಾಡ ಮಾತನಾಡಿ, ದೇಶದ ಉಜ್ವಲ ಭವಿಷ್ಯ ನಿರ್ಮಾಣ ಯುವಕ ಕೈಯಲ್ಲಿದೆ. ದೇಶದ ಮುಂದಿನ 25 ವರ್ಷದ ಭವಿಷ್ಯವನ್ನು ಯುವಕರು ರೂಪಿಸುತ್ತಾರೆ.
ಹೀಗಾಗಿ ಸಮಾಜ ಮತ್ತು ಸರ್ಕಾರದಲ್ಲಿ ಸಿಗುವ ಸೌಲಭ್ಯಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರಬೇಕು. ಪ್ರಧಾನಿ ಮೋದಿ ಅವರು ಭಾರತವನ್ನು ವಿಶ್ವಗುರು ಮಾಡುತ್ತಿದ್ದಾರೆ. ಜಗತ್ತಿನ ಜನ ಭಾರತದತ್ತ ಮುಖ ಮಾಡುತ್ತಿದ್ದಾರೆ ಎಂದರು. ರೇಣುಕಾ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕಿ ವಿದ್ಯಾ ಮರಕುಂಬಿ ಮಾತನಾಡಿ, ಜೀವನದಲ್ಲಿ ಸೋತರೂ ಪ್ರಯತ್ನ ಮಾತ್ರ ಬಿಡಬಾರದು. ಪ್ರಯತ್ನದಿಂದಲೇ ಯಶಸ್ಸು ಸಾಧ್ಯವಿದೆ.ಚೀನಾ ಉತ್ಪನ್ನಗಳ ಬಳಕೆಗೆ ಕಡಿವಾಣ ಹಾಕುವ ಮಟ್ಟಕ್ಕೆ ಭಾರತ ಬೆಳೆಯಬೇಕು ಎಂದು ಆಶಿಸಿದರು.
ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಉದ್ಯಮಿಯಾಗಿ-ಉದ್ಯೋಗ ನೀಡು ಕಾರ್ಯಕ್ರಮದ ಯಶಸ್ಸಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಎಲ್ಲರ ಸಮನ್ವಯತೆಯಿಂದ ಕೆಲಸ ಆಗಬೇಕು. ಇಲ್ಲದಿದ್ದರೆ ಇದು ಪ್ರಚಾರದ ಕಾರ್ಯಕ್ರಮ ಆಗುತ್ತದೆ. ಸಚಿವ ನಿರಾಣಿ ಅವರ ಪ್ರಯತ್ನದಿಂದ ಈ ಕಾರ್ಯಕ್ರಮ ಯಶಸ್ಸು ಆಗಿದೆ ಎಂದರು. ಸುಮಾರು 1500 ವಿದ್ಯಾರ್ಥಿಗಳು ಹಾಗೂ ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳ 9 ಸಾವಿರ ವಿದ್ಯಾರ್ಥಿಗಳು (ವರ್ಚುವಲ್) ವಿಡಿಯೋ ಕಾನ #ರೆನ್ಸ್ ಮೂಲಕ ಒಟ್ಟು 11 ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ ರಮಣರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜ ಸ್ವಾಗತಿಸಿದರು. ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಕ್ತಾರಹುಸೇನ್ ಪಠಾಣ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃ?¡, ಕೆಐಎಡಿಬಿ ಸಿಇಒ ಎನ್. ಶಿವಶಂಕರ, ವಿಟಿಯು ಕುಲಪತಿ ಪ್ರೊ. ಕರಿಸಿದ್ದಪ್ಪ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶಿವಪುತ್ರಪ್ಪ ಆರ್.ಎಚ್., ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.