ಕೋವಿಡ್: 150 ಜನರ ಪರೀಕ್ಷೆ-ವರದಿ ಬಾಕಿ
Team Udayavani, May 20, 2020, 5:04 AM IST
ಬೆಳಗಾವಿ: ರಾಜ್ಯದಲ್ಲಿ ಮಂಗಳವಾರ ದಾಖಲೆಯ ಪ್ರಮಾಣದಲ್ಲಿ ವರದಿಯಾದ ಪ್ರಕರಣಗಳ ಮೂಲಕ ತಲ್ಲಣ ಉಂಟುಮಾಡಿರುವ ಕೋವಿಡ್ ವೈರಸ್ ಗಡಿ ಜಿಲ್ಲೆ ಬೆಳಗಾವಿಗೆ ವಿರಾಮ ನೀಡಿದೆ. ಮಂಗಳವಾರ ಜಿಲ್ಲೆಯಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ. ಆದರೆ 150 ಜನರ ಗಂಟಲು ದ್ರವ ಮಾದರಿಯ ಪರೀಕ್ಷಾ ವರದಿ ಬರಬೇಕಿರುವುದು ಸ್ವಲ್ಪ ಆತಂಕ ಉಂಟುಮಾಡಿದೆ.
ಜಿಲ್ಲೆಯಲ್ಲಿ ಇದುವರೆಗೆ 118 ಜನರಿಗೆ ಸೋಂಕು ತಗುಲಿದ್ದು ಅದರಲ್ಲಿ ಎಂಟು ಜನ ಬಾಗಲಕೊಟೆ ಜಿಲ್ಲೆಗೆ ಸೇರಿದವರಾಗಿದ್ದಾರೆ. ಒಟ್ಟು 67 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಓರ್ವ ವೃದ್ಧೆ ಮೃತಪಟ್ಟಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಈಗ 50 ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇವತ್ತಿನವರೆಗೆ 8392 ಜನರ ಮೇಲೆ ನಿಗಾ ವಹಿಸಲಾಗಿದೆ. ಇದುವರೆಗೆ 1399 ಜನರು 14 ದಿನಗಳ ಗೃಹ ನಿಗಾದಲ್ಲಿದ್ದರೆ 50 ಜನರು ಆಸ್ಪತ್ರೆಯ ಐಸೋಲೇಷನ್ ಘಟಕದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 4841 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದರೆ 2102 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ.
ಇವತ್ತಿನವರೆಗೆ 7096 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು 6707 ಜನರ ವರದಿ ನಕಾರಾತ್ಮಾಕವಾಗಿವೆ. ಒಟ್ಟು 150 ಜನರ ವರದಿಗಾಗಿ ಕಾಯಲಾಗುತ್ತಿದೆ ಎಂದು ಸರಕಾರ ಬಿಡುಗಡೆ ಮಾಡಿರುವ ವೈದ್ಯಕೀಯ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.