ಬಾಣಸಿಗರನ್ನೇ ಬೇಯಿಸಿದ ಕೋವಿಡ್ ಲಾಕ್‌ಡೌನ್ !
Team Udayavani, May 15, 2020, 11:44 AM IST
ಸಾಂದರ್ಭಿಕ ಚಿತ್ರ
ಅಥಣಿ: ಕೋವಿಡ್ ಲಾಕಡೌನ್ ಪರಿಣಾಮ ಅನೇಕ ಉದ್ಯಮಗಳಿಗೆ ಹೊಡೆತ ಬಿದ್ದಂತೆ ಪ್ರತಿನಿತ್ಯ ಒಂದಲ್ಲ ಒಂದು ರೀತಿಯ ಸಭೆ, ಸಮಾರಂಭ, ಅದರಲ್ಲೂ ಶುಭ ಸಮಾರಂಭಗಳಲ್ಲಿ ಅಡುಗೆ ತಯಾರಿಸಲು ತೆರಳುತ್ತಿದ್ದ ಬಾಣಸಿಗರು ಕೆಲಸ ಇಲ್ಲದೇ ಈಗ ಬೆಂದು ಬೆಂಡಾಗಿದ್ದಾರೆ.
ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಸರಕಾರಗಳು ಮದುವೆ, ನಾಮಕರಣ, ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ 50 ಜನಕ್ಕಿಂತ ಹೆಚ್ಚು ಜನ ಸೇರಬಾರದೆಂದು ಮಿತಿ ಹೇರಿರುವುದರಿಂದ ಅಡುಗೆ ತಯಾರಿಸುವ ಬಾಣಸಿಗರು ಕೆಲಸವಿಲ್ಲದೆ ಪರದಾಡುವಂತಾಗಿದೆ.
800 ಕ್ಕೂ ಹೆಚ್ಚು ಬಾಣಸಿಗರು: ಒಂದು ಅಂದಾಜಿನ ಪ್ರಕಾರ ಸುಮಾರು 800 ಕ್ಕೂ ಅಧಿಕ ಮಂದಿ ಅಡುಗೆ ತಯಾರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಜತೆಗೆ ಬಡಸುವ ಮಂದಿಗೂ ಲೆಕ್ಕವಿಲ್ಲ. ಆದರೆ ಸತತ ಎರಡು ತಿಂಗಳಿನಿಂದ ಕಾರ್ಯವಿಲ್ಲದೇ ಬಾಣಸಿಗರು ಹಾಗೂ ಅವರ ಸಹಾಯಕರು ಸಂಕಷ್ಟದಲ್ಲಿ ಜೀವನ ನಡೆಸುವಂತಾಗಿದೆ.
ನಮಗೂ ಪರಿಹಾರ ಪ್ಯಾಕೇಜ್ ಘೋಷಿಸಿ: ಸರ್ಕಾರ ಇತ್ತೀಚಿಗೆ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳಿಗೆ ಪರಿಹಾರ ಘೋಷಿಸಿದ್ದು, ಬಾಣಸಿಗರು ಹಾಗೂ ಅವರ ಸಹಾಯಕರಿಗೂ ಸರ್ಕಾರ ಪರಿಹಾರ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ.
ಸರಕಾರ ಈಗಾಗಲೇ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವಂತೆ ಶುಭ ಸಮಾರಂಭಗಳಲ್ಲಿ ಅಡುಗೆ ತಯಾರಿಸುವ ನಮ್ಮಂತಹ ಬಾಣಸಿಗರಿಗೂ ಸರಕಾರ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಲಿ. – ಭೀಮಪ್ಪ ನರವಡೆ, ಬಾಣಸಿಗ, ಅಥಣಿ
-ಸಂತೋಷ ರಾ. ಬಡಕಂಬಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.