ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಮೊದಲ ಬಲಿ
Team Udayavani, Apr 15, 2020, 6:02 PM IST
ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿಯ ಕೋವಿಡ್-19 ಸೋಂಕಿತ ವ್ಯಕ್ತಿ (ಪಿ-224) ನ ಜತೆ ಪ್ರಾಥಮಿಕ ಸಂಪರ್ಕಕ್ಕೆ ಬಂದು ಎರಡು ದಿನಗಳ ಹಿಂದೆಯಷ್ಟೇ ಮೃತಪಟ್ಟಿದ್ದ 80 ವರ್ಷದ ವೃದ್ಧೆ ಕೋವಿಡ್-19 ದಿಂದಲೇ ಮೃತಪಟ್ಟಿರುವುದು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿಗೆ ಮೊದಲ ಬಲಿಯಾದಂತಾಗಿದೆ.
ದೆಹಲಿಯ ನಿಜಾಮುದ್ದಿನ್ ತಬ್ಲೀಘಿ ಜಮಾತ್ ಮರ್ಕಜ್ದಿಂದ ವಾಪಸ್ಸಾಗಿದ್ದ ಯುವಕನ ಅಜ್ಜಿಗೂ ಸೋಂಕು ತಗುಲಿದ್ದು ದೃಢಪಟ್ಟಿದ್ದು, ಕೋವಿಡ್-19 ದಿಂದಲೇ ವೃದ್ಧೆಯ ಸಾವಾಗಿರುವುದು ಈಗ ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ.
ಮೂರು ದಿನಗಳ ಹಿಂದೆ ವೃದ್ಧೆ ಮೃತಪಟ್ಟಾಗ ಶಂಕೆ ವ್ಯಕ್ತಪಡಿಸಿ ಕೂಡಲೇ ವೃದ್ಧೆಯ ಗಂಟಲು ದ್ರವದ ಮಾದರಿಯನ್ನು ತೆಗೆದು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಬುಧವಾರ ವರದಿ ಬಂದ ನಂತರ ಮರಣದ ನಿರ್ದಿಷ್ಟ ಕಾರಣ ತಿಳಿದು ಬಂದಿದೆ. ಈಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 19ಕ್ಕೇರಿದೆ.
ಜನರ ಆರೋಗ್ಯದ ದೃಷ್ಟಿಯಿಂದ ವೃದ್ಧೆಯ ಅಂತ್ಯಕ್ರಿಯೆಯನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ನೆರವೇರಿಸಲಾಗಿತ್ತು.
ಇನ್ನೂ ಈ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಕ್ಕೆ ಬಂದಿರುವ 21 ಜನರನ್ನು ಗುರುತಿಸಿ ಅವರನ್ನು ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ನಲ್ಲಿ ಇಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
MUST WATCH
ಹೊಸ ಸೇರ್ಪಡೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.