ಕೋವಿಡ್ 19 ಮತ್ತಿಬ್ಬರು ಗುಣಮುಖ
Team Udayavani, Apr 22, 2020, 4:08 PM IST
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಬೆಳಗಾವಿಗರಿಗೆ ಮತ್ತೂಂದು ಸಂತಸದ ಸುದ್ದಿ ಸಿಕ್ಕಿದ್ದು, ಪಾಸಿಟಿವ್ ಸೋಂಕಿತರಲ್ಲಿ ಇನ್ನಿಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಹಿರೇಬಾಗೇವಾಡಿಯ ಒಬ್ಬ ಹಾಗೂ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಒಬ್ಬ ವ್ಯಕ್ತಿ ಸೇರಿದಂತೆ ಇಬ್ಬರ ವರದಿಗಳು ನೆಗೆಟಿವ್ ಬಂದಿದ್ದು, ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ 42 ಜನ ಸೋಂಕಿತರಲ್ಲಿ ಕಳೆದ ಮೂರು ದಿನಗಳ ಹಿಂದೆ 70 ವರ್ಷದ ವೃದ್ಧ ಗುಣಮುಖರಾಗಿ ಬಿಡುಗಡೆ ಹೊಂದಿದ ಬೆನ್ನಲ್ಲೇ ಇನ್ನಿಬ್ಬರ ವರದಿಗಳು ನೆಗೆಟಿವ್ ಬಂದಿದ್ದರಿಂದ ಬೆಳಗಾವಿಯಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ. ಇದೀಗ ಒಟ್ಟು ಮೂರು ಜನ ಗುಣಮುಖರಾಗಿ ಬಿಡುಗಡೆ ಆದಂತಾಗಿದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ 20 ವರ್ಷದ ಯುವಕ (ಪಿ-128) ಹಾಗೂ ಕುಡಚಿಯ 40 ವರ್ಷದ ವ್ಯಕ್ತಿ (ಪಿ-148)ಯನ್ನು ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಈ ಇಬ್ಬರೂ ಏ.1 ರಂದು ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಡಿಸಿ ಡಾ| ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.