ಕೋವಿಡ್; 22 ಜನರು ಆಸ್ಪತ್ರೆಯಿಂದ ಬಿಡುಗಡೆ
Team Udayavani, Jun 16, 2020, 7:08 AM IST
ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರ ಯಾವುದೇ ಕೋವಿಡ್ ಸೋಂಕು ಪ್ರಕರಣ ವರದಿಯಾಗಿಲ್ಲ. ಆದರೆ ಆಸ್ಪತ್ರೆಗೆ ದಾಖಲಾಗಿದ್ದ 22 ಜನರು ಚೇತರಿಸಿಕೊಂಡು ಬಿಡುಗಡೆಯಾಗಿದ್ದು ಜನರಲ್ಲಿ ಸಾಕಷ್ಟು ಸಮಾಧಾನ ಉಂಟುಮಾಡಿದೆ. ಬೆಳಗಾವಿ ತಾಲೂಕಿನ 12 ಹಾಗೂ ಹುಕ್ಕೇರಿ ತಾಲೂಕಿನ ಏಳು, ಗೋಕಾಕ, ಬಾಗಲಕೋಟೆ ಹಾಗೂ ಕೊಪ್ಪಳದ ತಲಾ ಒಬ್ಬರು ಆಸ್ಪತ್ರೆಯಿಂದ ಬಿಡುಗಡೆಯಾದರು.
ಈಗ ಆಸ್ಪತ್ರೆಯಲ್ಲಿ 58 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿ ಸಂಖ್ಯೆಗಳಾದ 838, 3146, 3148, 3670, 3684, 3685, 3689, 4067, 4069, 4070, 4072, 4545, 4546, 4552, 4556, 4557, 5020, 5022, 5387, 5394, 5404 ಹಾಗೂ 5409 ಬಿಡುಗಡೆಯಾಗಿದ್ದು ಇದರೊಂದಿಗೆ ಜಿಲ್ಲೆಯಲ್ಲಿ 247 ಜನರು ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 305 ಜನರಿಗೆ ಸೋಂಕು ತಗುಲಿದ್ದು ಅದರಲ್ಲಿ ಎಂಟು ಜನ ಬಾಗಲಕೊಟೆ ಜಿಲ್ಲೆಗೆ ಸೇರಿದವರಾಗಿದ್ದಾರೆ. ಒಟ್ಟು 247 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಓರ್ವ ವೃದ್ಧೆ ಮೃತಪಟ್ಟಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಈಗ 58 ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇವತ್ತಿನವರೆಗೆ 15646 ಜನರ ಮೇಲೆ ನಿಗಾ ವಹಿಸಲಾಗಿದೆ. ಇದುವರೆಗೆ 1063 ಜನರು 14 ದಿನಗಳ ಗೃಹ ನಿಗಾದಲ್ಲಿದ್ದರೆ 58 ಜನರು ಆಸ್ಪತ್ರೆಯ ಐಸೋಲೇಷನ್ ಘಟಕದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 6497 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದರೆ 8028 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ. ಇವತ್ತಿನವರೆಗೆ 14350 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು 13371 ಜನರ ವರದಿ ನಕಾರಾತ್ಮಾಕವಾಗಿವೆ. ಒಟ್ಟು 294 ಜನರ ವರದಿಗಾಗಿ ಕಾಯಲಾಗುತ್ತಿದೆ ಎಂದು ಸರಕಾರದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.